ಕಬ್ಬನ್ ಪಾರ್ಕ್ ಬಳಿ ಗ್ಯಾಂಗ್ ರೇಪ್, ಇಬ್ಬರ ಬಂಧನ
ಬೆಂಗಳೂರು, ನವೆಂಬರ್, 12: ಕಬ್ಬನ್ ಪಾರ್ಕಿನ ಇಬ್ಬರು ಭದ್ರತಾ ಸಿಬ್ಬಂದಿ ನಗರದ ಸಿದ್ದಲಿಂಗಯ್ಯ ಸರ್ಕಲ್ ಬಳಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಬುಧವಾರ 10ಗಂಟೆ ಸುಮಾರಿನಲ್ಲಿ ನಡೆದಿದೆ.
ಮೂಲತಃ ತುಮಕೂರಿನವಳಾದ ಮಹಿಳೆ (30) ಬೆಂಗಳೂರಿನ ಟೆನ್ನಿಸ್ ಕ್ಲಬ್ ಗೆ ಸದಸ್ಯತ್ವ ಸ್ಥಾನ ಪಡೆಯಲು ಆಗಮಿಸಿದ್ದಳು. ಅಲ್ಲಿ ಎಲ್ಲಾ ಕೆಲಸ ಕಾರ್ಯಗಳು ಮುಗಿಯುವುದು ತಡವಾದ ಕಾರಣ ಅಲ್ಲಿನ ಭದ್ರತಾ ಸಿಬ್ಬಂದಿ ಬಳಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡಬೇಕೆಂದು ಕೇಳಿದ್ದಾಳೆ. ಇದನ್ನೇ ಬಂಡವಾಳವನ್ನಾಗಿಸಿಕೊಂಡ ಇವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.[ಎಲ್ಲೆ ಮೀರಿದ ಕಾಮುಕರ ವರ್ತನೆ, ಹುಬ್ಬಳ್ಳಿಯಲ್ಲಿ 3 ಅತ್ಯಾಚಾರ]

ಮಹಿಳೆಯ ಚಲನವಲನಗಳ ಮೇಲೆ ಬೆಳಗ್ಗೆಯಿಂದಲೂ ಕಣ್ಣಿಟ್ಟಿದ್ದ ಭದ್ರತಾ ಸಿಬ್ಬಂದಿ ಈಕೆ ಒಂಟಿಯಾಗಿರುವುದನ್ನು ಗೊತ್ತುಪಡಿಸಿಕೊಂಡಿದ್ದಾರೆ. ಅಷ್ಟರಲ್ಲೇ ಮಹಿಳೆ ಸಿಬ್ಬಂದಿ ಬಳಿ ಬಂದು ಕಬ್ಬನ್ ಪಾರ್ಕಿನಿಂದ ಹೊರಗೆ ಹೋಗಲು ಹಾಗೂ ತಾನು ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಡಲು ಕೇಳಿದ್ದಾಳೆ. ಸಭ್ಯರಂತೆ ವರ್ತಿಸಿದ ಸಿಬ್ಬಂದಿ ಆಕೆಗೆ ದಾರಿ ತೋರಿಸುವಂತೆ ಕರೆದೊಯ್ದು ಈ ಕೃತ್ಯ ಎಸಗಿದ್ದಾರೆ.
ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಕಾಮಾಂಧರು ಆಕೆಯನ್ನು ಸಿದ್ದಲಿಂಗಯ್ಯ ಸರ್ಕಲ್ ಬಳಿಯ ಪೊದೆಯೊಳಗೆ ಬಿಸಾಡಿ ಹೋಗಿದ್ದಾರೆ. ಬಳಿಕ ಈಕೆ ರಾತ್ರಿ ಪಾಳಿ ಪೊಲೀಸರ ಕಣ್ಣಿಗೆ ಬಿದ್ದಿದ್ದಾಳೆ. ಅಸ್ವಸ್ಥವಾಗಿದ್ದ ಮಹಿಳೆಗೆ ಪೊಲೀಸರು ಪ್ರಥಮ ಚಿಕಿತ್ಸೆ ನೀಡಿದ್ದು, ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಈಗಾಗಲೇ ಮುಂದಿನ ವಿಚಾರಣೆ ಕೈಗೊಂಡಿದ್ದು ಇಬ್ಬರು ಆರೋಪಿಗಳನ್ನು 376ರ ಪೋಕ್ಸೋ ಕಾಯ್ದೆ ಅಡಿ ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದೇವೆ ಎಂದು ಕೇಂದ್ರವಲಯ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications