ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ವಿರುದ್ಧ ಎಬಿವಿಪಿ ಬೃಹತ್ ಪ್ರತಿಭಟನೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 16 : ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಪೊಲೀಸ್ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಮಂಗಳವಾರ ಬೆಳಗ್ಗೆ ಬೆಂಗಳೂರಿನ ಆರ್.ಸಿ.ಕಾಲೇಜಿನಿಂದ ಎಬಿವಿಪಿಯ ರಾಷ್ಟ್ರೀಯ ಕಾರ್ಯದರ್ಶಿ ವಿನಯ ಬಿದಿರೆ ನೇತೃತ್ವದಲ್ಲಿ ಹೊರಟ ಬೃಹತ್ ಪ್ರತಿಭಟನಾಜಾಥಾ ರಾಜಭವನ ಬಳಿ ಬರುತ್ತಿದ್ದಂತೆ ಪೊಲೀಸರು ತಡೆದರು. ವಿನಯ ಬಿದಿರೆ ಸೇರಿದಂತೆ 15ಕ್ಕೂ ಅಧಿಕ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.[ರಾಜದ್ರೋಹದ ಆರೋಪ, ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸ್ಪಷ್ಟನೆಗಳು]

ABVP demands for ban of Amnesty International India

ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಮುಂದಾದಾಗ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.[ರಾಜದ್ರೋಹದ ಆರೋಪದಲ್ಲಿ ವಿಡಿಯೋ ಪ್ರಮುಖ ಸಾಕ್ಷಿ]

ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆಯನ್ನು ನಿಷೇಧಿಸಬೇಕು, ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು. ಈ ಕುರಿತು ಮನವಿ ಸಲ್ಲಿಸಲು ಪೊಲೀಸ್ ಆಯುಕ್ತರ ಕಚೇರಿಗೆ ತೆರಳಲು ಅವಕಾಶ ನೀಡಬೇಕೆಂದು ಆಗ್ರಹಿಸಿದರು. ಆದರೆ, ಪೊಲೀಸರು ನಿರಾಕರಿಸಿದರು. [ದೇಶ ವಿರೋಧಿ ಘೋಷಣೆ, ಬೆಂಗಳೂರು ಪೊಲೀಸರಿಂದ FIR]

ಫ್ರೀಡಂಪಾರ್ಕ್‌ನಿಂದ ಪ್ರತಿಭಟನೆ : ರಾಜಭವನದ ಬಳಿ ಪ್ರತಿಭಟನಾಜಾಥಾವನ್ನು ಪೊಲೀಸರು ತಡೆದ ನಂತರ ಫ್ರೀಡಂಪಾರ್ಕ್‌ಗೆ ಬಂದ ವಿದ್ಯಾರ್ಥಿಗಳು ಅಲ್ಲಿಂದ ಆನಂದ್ ರಾವ್ ವೃತ್ತದ ತನಕ ಜಾಥಾ ನಡೆಸಿದರು. ಪ್ರತಿಭಟನೆಯಿಂದ ಸಂಚಾರ ದಟ್ಟಣೆ ಉಂಟಾಗುತ್ತದೆ. ಆದ್ದರಿಂದ, ಜಾಥಾವನ್ನು ಸ್ಥಗಿತಗೊಳಿಸಿ ಎಂದು ಪೊಲೀಸರು ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
ABVP members taking out a protest march in Bengaluru on August 16, 2016 demanding for ban of Amnesty International India. JC Nagar police filed sedition case against Amnesty India.
Please Wait while comments are loading...