ಬೆಂಗಳೂರಲ್ಲಿ ಎಬಿವಿಪಿ ಅಸಹಕಾರ ಚಳವಳಿ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 17 : ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿರುದ್ಧ ರಾಜ್ಯಾದ್ಯಂತ ಎಬಿವಿಪಿ ಪ್ರತಿಭಟನೆ ನಡೆಸುತ್ತಿದೆ. ಇತ್ತ ಬೆಂಗಳೂರಿನಲ್ಲಿ ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಎಬಿವಿಪಿ ಅಸಹಕಾರ ಚಳವಳಿ ಆರಂಭಿಸಿದೆ.

ಬುಧವಾರ ಬೆಳಗ್ಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮಹರಾಣಿ ಕಾಲೇಜಿನಿಂದ ಬೃಹತ್ ಮೆರವಣಿಗೆ ಹೊರಟು ಮೈಸೂರು ಬ್ಯಾಂಕ್ ಸರ್ಕಲ್‌ಗೆ ಆಗಮಿಸಿದ್ದಾರೆ. ಇದರಿಂದಾಗಿ ಮೈಸೂರು ಬ್ಯಾಂಕ್ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.[ಆಮ್ನೆಸ್ಟಿ ಇಂಟರ್ ನ್ಯಾಷನಲ್ ವಿರುದ್ಧ ಎಬಿವಿಪಿ ಬೃಹತ್ ಪ್ರತಿಭಟನೆ]

abvp protest

ಮತ್ತೊಂದು ಕಡೆ ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆಯನ್ನು ನಿಷೇಧಿಸಬೇಕು ಎಂದು ಎಬಿವಿಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿದ್ಯಾರ್ಥಿ ಮುಖಂಡ ಸಚಿನ್ ರಾಥೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.[ರಾಜದ್ರೋಹದ ಆರೋಪ, ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸ್ಪಷ್ಟನೆಗಳು]

ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಬೆಂಗಳೂರಿನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಘು ಲಾಠಿ ಚಾರ್ಜ್ ಮಾಡಿದ್ದರು. ಇದನ್ನು ಖಂಡಿಸಿ ಇಂದು ಅಸಹಕಾರ ಚಳವಳಿ ಮಾಡಲಾಗುತ್ತಿದೆ.[Amnesty International ಸಂಸ್ಥೆಯ ಪರಿಚಯ]

mangaluru protest

ವಿದ್ಯಾರ್ಥಿಗಳ ಬೇಡಿಕೆಗಳು

* ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ನಿಷೇಧಿಸಬೇಕು
* ದೇಶ ವಿರೋಧಿ ಘೋಷಣೆ ಕೂಗಿದ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು

protest

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Akhil Bharatiya Vidyarthi Parishad (ABVP) members protesting against Amnesty International India at Bengaluru on Wednesday, August 17, 2016.
Please Wait while comments are loading...