Get Updates
Get notified of breaking news, exclusive insights, and must-see stories!

ಬಗರ್ ಹುಕುಂ ಭೂ ಹಗರಣ: ಆರ್.ಅಶೋಕ್ ವಿರುದ್ಧ ಎಫ್‌ಐಆರ್

ಬೆಂಗಳೂರು, ಜನವರಿ 9: ಅಕ್ರಮವಾಗಿ ಬಗರ್ ಹುಕುಂ ಜಮೀನು ಮಂಜೂರು ಆರೋಪ ಹೊತ್ತಿರುವ ಉಪಮುಖ್ಯಮಂತ್ರಿ ಆರ್ ಅಶೋಕ್ ವಿರುದ್ಧ ಭ್ರಷ್ಟಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

2004ರಲ್ಲಿ ಆರ್ ಅಶೋಕ್ ಅವರು ಬಗರ್ ಹುಕುಂ ಸಮಿತಿ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ಹಾಲಿ ಮೇಯರ್ ಆಗಿರುವ ವೆಂಕಟೇಶ್ ಮೂರ್ತಿ ಹಾಗೂ ಅವರ ಪತ್ನಿಗೆ ಉತ್ತರ ಹಳ್ಳಿ ಸಮೀಪದ ಸುಮನಹಳ್ಳಿಯಲ್ಲಿ 8 ಎಕರೆ ಜಮೀನನ್ನು ಅಶೋಕ್ ಮಂಜೂರು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಶೋಕ್ ವಿರುದ್ಧ ಸೆಕ್ಷನ್ 13(1)(c), 13(1)(d), 13(2) ಐಪಿಸಿ 420 & 120(b) ಅಡಿಯಲ್ಲಿ ದೂರು ದಾಖಲಾಗಿದೆ.

ಸಾಮಾನ್ಯವಾಗಿ ಬಗರ್ ಹುಕುಂ ಜಮೀನನ್ನು ಆರ್ಥಿಕವಾಗಿ ಹಿಂದುಳಿದ ಹಾಗೂ ಬಡತನದ ರೇಖೆಗಿಂತ ಕೆಳಗಿರುವವರಿಗೆ ಮಾತ್ರ ಸರ್ಕಾರದ ವತಿಯಿಂದ ನೀಡಲಾಗುತ್ತದೆ.

ACB officials file an FIR against R Ashok of allotting land illegally under Bagar Hukum scheme

ಅದರೆ, ಮೇಯರ್ ವೆಂಕಟೇಶ್ ಮೂರ್ತಿ ಅವರು 2004ರಲ್ಲಿ ಸರ್ಕಾರಕ್ಕೆ ಸುಳ್ಳು ದಾಖಲಾತಿ ನೀಡಿ ಜಮೀನು ಪಡೆದಿದ್ದರು ಎಂದು ಆರೋಪಿಸಲಾಗಿದೆ. ಅಶೋಕ್ ಸೇರಿದಂತೆ ಇಬ್ಬರು ಕಂದಾಯ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+