ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಡಿಎ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: 5 ಕೋಟಿ ನಗದು ಪತ್ತೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 5: ಕೈಗಾರಿಕಾ ಇಲಾಖೆ ಅಧಿಕಾರಿ ಹಾಗೂ ಬಿಡಿಎ ಎಂಜಿನಿಯರ್ ಮನೆ ಮೇಲೆ ಶುಕ್ರವಾರ ಬೆಳಗ್ಗೆ ಎಸಿಬಿ ದಾಳಿ ನಡೆಸಿದೆ. ಕೈಗಾರಿಕಾ ಇಲಾಖೆ ಅಧಿಕಾರಿ ಟಿ.ಆರ್. ಸ್ವಾಮಿ ಅವರ ಮನೆಯಲ್ಲಿ 5 ಕೋಟಿ ರೂ ಹಣವನ್ನು ವಶಪಡಿಸಿಕೊಂಡಿದೆ.

ಕೈಗಾರಿಕಾ ಇಲಾಖೆ ಅಧಿಕಾರಿ ಟಿ.ಆರ್. ಸ್ವಾಮಿ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ, ಬಲವಾದ ಮಾಹಿತಿ ಮೇರೆಗೆ ಏಸಿಬಿ ಅಧಿಕಾರಿಗಳು ದಾಳಿ ನಡೆಸಲು ಮುಂದಾಗಿದ್ದರು ಆ ಸಮಯದಲ್ಲಿ ಸ್ವಾಮಿ ಬಾಗಿಲು ತೆರೆಯದೆ ಅಸಹಕಾರ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಲಾಕ್ ಒಡೆದು ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ACB raids on BDA officer house, seizes Rs.5 Crore

ಮಂಗಳೂರಿನಲ್ಲಿ ಲಂಚ ಪಡೆಯುವಾಗಲೇ ಎಸಿಬಿ ಬಲೆಗೆ ಬಿದ್ದ ಪ್ರಾಜೆಕ್ಟ್ ಇಂಜಿನಿಯರ್ ಮಂಗಳೂರಿನಲ್ಲಿ ಲಂಚ ಪಡೆಯುವಾಗಲೇ ಎಸಿಬಿ ಬಲೆಗೆ ಬಿದ್ದ ಪ್ರಾಜೆಕ್ಟ್ ಇಂಜಿನಿಯರ್

ಸ್ವಾಮಿ ಕೆಐಎಡಿಬಿಯಲ್ಲಿ ಮುಖ್ಯ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ, ಮಲ್ಲೇಶ್ವರದಲ್ಲಿರುವ ಮಂತ್ರಿ ಗ್ರೀನ್ಸ್ ಅಪಾರ್ಟ್ ಮೆಂಟ್ ನ 15 ನೇ ಮಹಡಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು 5 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ. ಇನ್ನೂ ತನಿಖೆ ಮುಂದುವರೆದಿದೆ. ಬಿಡಿಎ ಮುಖ್ಯ ಎಂಜಿನಿಯರ್ ಮನೆ ಮೇಲೆ ಕೂಡ ದಾಳಿ ನಡೆದಿದೆ. ಬಸವೇಶ್ವರನಗರದಲ್ಲಿರುವ ಗೌಡಯ್ಯನ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದಾರೆ.

English summary
Anti Corruption Bureau officers have raided BDA chief development officer T.R.Swamy house at Malleshwaram as Mantri Greens and seized Rs 5 crores cash.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X