ಒತ್ತುವರಿ ತೆರವು : ನಟ ದರ್ಶನ್ ಮನೆ ಒತ್ತುವರಿ ತೆರವಿಲ್ಲ?

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 16 : ನಟ ದರ್ಶನ್ ಮತ್ತು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಆವರ ಆಸ್ಪತ್ರೆ ಪ್ರದೇಶದಲ್ಲಿರುವ ಒತ್ತುವರಿ ಕಟ್ಟಡಗಳನ್ನು ತೆರವುಗೊಳಿಸದಿರಲು ಬಿಬಿಎಂಪಿ ನಿರ್ಧರಿಸಿದೆ. ಈ ಕಡತಗಳನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸಲ್ಲಿಕೆ ಮಾಡಲಿದ್ದು, ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿನಗರದ ಐಡಿಯಲ್‌ ಹೋಮ್ಸ್‌ ಬಡಾವಣೆಯಲ್ಲಿ ದರ್ಶನ್‌ ಹಾಗೂ ಶಾಮನೂರು ಶಿವಶಂಕರಪ್ಪ ಅವರಿಗೆ ಸೇರಿದ ಆಸ್ಪತ್ರೆ ಇದೆ. ರಾಜಾಕಾಲುವೆ ಒತ್ತುವರಿ ತೆರವು ಮಾಡುತ್ತಿರುವ ಬಿಬಿಎಂಪಿ ಇವುಗಳನ್ನು ತೆರವುಗೊಳಿಸಲಿದೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.[ರಾಜಕಾಲುವೆ ಒತ್ತುವರಿ ತೆರವು ಎಂಬ ನಿಗೂಢ ರಹಸ್ಯ]

raja kaluve

ಈ ಕಟ್ಟಡಗಳನ್ನು ತೆರವುಗೊಳಿಸದಿರಲು ಬಿಬಿಎಂಪಿ ನಿರ್ಧರಿಸಿದೆ. ಈ ಬಗ್ಗೆ ಮುಂದಿನ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ದಾಖಲೆಗಳನ್ನು ಬೆಂಗಳೂರು ನಗರ ನಗರ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡಲು ಬಿಬಿಎಂಪಿ ಅಧಿಕಾರಿಗಳು ನಿರ್ಧರಿಸಿದ್ದಾರೆ.[ರಾಜಕಾಲುವೆ ಜಾಗದಲ್ಲೇ ದರ್ಶನ್ ತೂಗುದೀಪ ಅವರ ಮನೆ]

ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ಕೆ.ಜಯಪ್ರಕಾಶ್‌ ಅವರು ಬಿಬಿಎಂಪಿ ಆಯುಕ್ತರಿಗೆ ಸರ್ವೆ ವರದಿಯನ್ನು ಸಲ್ಲಿಸಿದ್ದಾರೆ. ಇದರಲ್ಲಿ ದರ್ಶನ್ ಅವರ ಮನೆ ಮತ್ತು ಎಸ್.ಎಸ್.ಆಸ್ಪತ್ರೆ ಸೇರಿದಂತೆ ವಿವಿಧ ಕಟ್ಟಡಗಳು ಸುಮಾರು 7 ಎಕರೆಯಷ್ಟು ವಿಸ್ತೀರ್ಣದ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿವೆ ಎಂದು ಹೇಳಿದ್ದಾರೆ.[ಒತ್ತುವರಿ ತೆರವು, ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ: ಸಿಎಂ]

ಆಯುಕ್ತರು ಹೇಳುವುದೇನು? : ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಈ ಕುರಿತು ಹೇಳಿಕೆ ನೀಡಿದ್ದಾರೆ. '1969ರಲ್ಲಿ ಬೆಂಗಳೂರು ನಗರ ಸುಧಾರಣಾ ಟ್ರಸ್ಟ್ ಮಂಡಳಿಯಿಂದ ಐಡಿಯಲ್ ಹೋಮ್ಸ್ ಬಡಾವಣೆ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿತ್ತು. 1989ರಲ್ಲಿ ಬಡಾವಣೆಯ ಪರಿಷ್ಕೃತ ಯೋಜನೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅನುಮತಿ ದೊರೆತಿದೆ' ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Kannada actor Darshan's house in Rajarajeshwari Nagar's Ideal Homes Layout may demolished. Now Ball in Bengaluru DC office.
Please Wait while comments are loading...