ಇಂದಿರಾ ಕ್ಯಾಂಟೀನ್ ಆಯ್ತು, ಇನ್ನು ಶೀಘ್ರದಲ್ಲೇ ಇಂದಿರಾ ಶಾಲೆ?

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 18: ಇತ್ತೀಚೆಗಷ್ಟೇ ಆರಂಭವಾಗಿರುವ ಇಂದಿರಾ ಕ್ಯಾಂಟೀನ್ ಗೆ ಸಿಕ್ಕಿರುವ ಅಮೋಘ ಜನಸ್ಪಂದನೆಯಿಂದ ಸ್ಫೂರ್ತಿಗೊಂಡಿರುವ ರಾಜ್ಯ ಸರ್ಕಾರ, ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಇಂದಿರಾ ಗಾಂಧಿ ಹೆಸರಿನಲ್ಲಿ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದೆ ಎಂದು ಕೆಲ ಮೂಲಗಳು ತಿಳಿಸಿವೆ.

ಆದರೆ, ಈ ಶಾಲೆಗಳನ್ನು ಪ್ರತ್ಯೇಕವಾಗಿ ಆರಂಭಿಸಲು ಹೋಗುವುದಿಲ್ಲ. ಎಸ್ಸಿ, ಎಸ್ಟಿಗಳಿಗಾಗಿಯೇ ಆರಂಭಿಸಲಿರುವ ವಸತಿ ಶಾಲೆಗಳಿಗೆ ಇಂದಿರಾ ಗಾಂಧಿ ಹೆಸರನ್ನಿಡುವ ಪ್ರಸ್ತಾವನೆ ಈಗ ರಾಜ್ಯ ಸರ್ಕಾರದ ಮುಂದಿದೆ ಎಂದು ಹೇಳಲಾಗಿದೆ.

After Indira Canteens, now Indira Schools in Karnataka

ಈಗಾಗಲೇ ಚಾಲ್ತಿಯಲ್ಲಿರುವ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಇಂದಿರಾ ಹೆಸರನ್ನು ಇಡಲು ನಿರ್ಧರಿಸಲಾಗಿತ್ತಾದರೂ, ಇದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ಪ್ರತಿರೋಧ ಬಂದಿರುವ ಕಾರಣ, ಶೀಘ್ರದಲ್ಲೇ ಉದ್ಘಾಟನೆಯಾಗಲಿರುವ ಹೊಸ ವಸತಿ ಶಾಲೆಗಳಿಗೆ ಇಂದಿರಾ ಹೆಸರನ್ನಿಡಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಈಗಾಗಲೇ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿವೆ. ಈ ಶಾಲೆಗಳಿಗೆ ಹೆಚ್ಚುವರಿಯಾಗಿ 2016-17ನೇ ಆರ್ಥಿಕ ವರ್ಷದಲ್ಲಿ 278 ಶಾಲೆಗಳನ್ನು ಕಟ್ಟುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಇವುಗಳಲ್ಲಿ ಕನಿಷ್ಟ 100 ಶಾಲೆಗಳಿಗಾದರೂ ಇಂದಿರಾ ಗಾಂಧಿ ಹೆಸರನ್ನಿಡಲು ನಿರ್ಧರಿಸಲಾಗಿದೆ. ಈ ಶಾಲೆಗಳ ನಿರ್ಮಾಣವು ಈಗಾಗಲೇ ಅಂತಿಮ ಹಂತದಲ್ಲಿದ್ದು, ಈ ಶಾಲೆಗಳಿಗೆ ಇಂದಿರಾ ಶಾಲೆ ಎಂದು ನಾಮಕರಣ ಮಾಡಲಾಗುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Karnataka government, it seems, is on a drive to ‘repopularise’ Indira Gandhi’s name in the state. After launching Indira Canteens in the state, the Siddaramaiah government here has decided to come up with Indira Schools.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ