ಆಕ್ರೋಶ್ ದಿವಸ್: ಕರ್ನಾಟಕದಲ್ಲಿ ಬಸ್, ಮೆಟ್ರೋ ಸಂಚಾರ ಸ್ಥಗಿತ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 26: ನ.28 ರಂದು ಆಕ್ರೋಶ್ ದಿವಸ್ ಹಿನ್ನೆಲೆ ಕರ್ನಾಟಕದಾದ್ಯಂತ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸ್ಥಗಿತ ಮಾಡಲು ಗೃಹ ಸಚಿವ ಪರಮೇಶ್ವರ್ ಸೂಚಿಸಿದ್ದಾರೆ.

ಶನಿವಾರ ಮಾದ್ಯಮದವರೊಂದಿಗೆ ಅವರು ಮಾತನಾಡಿ, ಬೆಂಗಳೂರಿನಲ್ಲಿ ಕೆಎಸ್ ಆರ್ ಟಿಸಿ ಬಸ್ ಜೊತೆಗೆ ಬಿಎಂಟಿಸಿ, ಮೆಟ್ರೋ ಸಂಚಾರವನ್ನೂ ಸ್ಥಗಿತಗೊಳಿಸಲಾಗುವುದು ಎಂದರು.

ಕೇಂದ್ರದ ವಿರೋಧ ಪಕ್ಷ ಕಾಂಗ್ರೆಸ್ ನೋಟು ರದ್ದು ಖಂಡಿಸಿ ನ.28ರ ಸೋಮವಾರ ಆಚರಿಸುತ್ತಿರುವ ದಿವಸ್ ಹಿನ್ನೆಲೆ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಹೈಕಮಾಂಡ್ ಮಾತನ್ನು ಆಲಿಸಿದೆ.[ನ. 28 ಆಕ್ರೋಶ್ ದಿವಸ್ : ನಾಲ್ಕು ಜನ ಏನಂತಾರೆ?]

Akrosh Diwas on November 28 KSRTC, BBMP, Metro running stop

ಶಾಲೆ ಕಾಲೇಜು ಪರೀಕ್ಷೆ ಮುಂದೂಡಿಕೆ:

ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತ ಗೊಳಿಸಿದರೆ ನೌಕರರು ಯಾರು ಕೆಲಸಕ್ಕೆ ಹೋಗಲಾಗುವುದಿಲ್ಲ ಎಂದು ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ತುಮಕೂರು ವಿವಿ ಸೇರಿದಂತೆ ಶಾಲಾ ಕಾಲೇಜುಗಳ ಪರೀಕ್ಷೆಯನ್ನು ಮುಂದೂಡಲಾಗಿದೆ.

ಹಾನಿಗೆ ಅವಕಾಶವಿಲ್ಲ:

ಯಾವುದೇ ಪ್ರತಿಭಟನೆ, ಮುಷ್ಕರಗಳಿಂದ ಬೇರೆ ಯಾವ ರೀತಿಯ ಹಾನಿಗೆ ಅವಕಾಶ ಮಾಡಿಕೊಡಬಾರದು ಎಂದು ಪರಮೇಶ್ವರ್ ತಿಳಿಸಿದ್ದು ಹಾನಿ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ತಿಳಿಸಿದರು.

ಮೆಟ್ರೋ, ಬಸ್ ಸಂಚಾರ ಸ್ಥಗಿತವಾಗಿರುವ ಹಿನ್ನೆಲೆ ಶಾಲಾ ಕಾಲೇಜುಗಳು ನಡೆಯುತ್ತವೆಯೋ ಇಲ್ಲವೋ ಎಂಬುದರ ಬಗ್ಗೆ ಪರಮೇಶ್ವರ್ ಸ್ಪಷ್ಟ ಪಡಿಸಿಲ್ಲ. ಆದರೆ ಇದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಡೆಸುತ್ತಿರುವ ಪ್ರತಿಭಟನೆ ಆಗಿರುವುದರಿಂದ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ನೋಡಬೇಕು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Akrosh Diwas on November 28, state government stop ksrtc bus, bmtc and metro rannig stoping says home minister G Parameshwar.
Please Wait while comments are loading...