ಅಳಂದ ಶಾಸಕ ಬಿ ಆರ್ ಪಾಟೀಲ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

Posted By:
Subscribe to Oneindia Kannada

ಬೆಂಗಳೂರು, ಜೂನ್ 14 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತರಾಗಿದ್ದ ಅಳಂದ ವಿಧಾನಸಬಾ ಕ್ಷೇತ್ರದ ಕೆಜೆಪಿ ಶಾಸಕ ಬಿ ಆರ್ ಪಾಟೀಲ್ ಇಂದು (ಬುಧವಾರ) ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಸಮ್ಮುಖದಲ್ಲಿ ಬಿ ಆರ್ ಪಾಟೀಲ್ ಕಾಂಗ್ರೆಸ್ ಗೆ ಸೇರಿದರು.

Aland KJP MLA BR Patil joined congress

2013ರ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿ ಪಕ್ಷದಿಂದ ಆಯ್ಕೆಯಾಗಿದ್ದರು. ಲೋಕಸಭೆ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲಿಸಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Alanda assembly constituency KJP MLA B R patil joined congress in KPCC office Bengaluru, on June 14th.
Please Wait while comments are loading...