ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ವೈಫೈ: ಪಾಟೀಲ್

By Mahesh
|
Google Oneindia Kannada News

ಬೆಂಗಳೂರು, ಜುಲೈ 17: ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಉಚಿತ ಸಾರ್ವಜನಿಕ ವೈಫೈ ನೀಡುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರವು ಪರಿಶೀಲಿಸುತ್ತಿದೆ. ಈ ಯೋಜನೆಯ ವಿವರಗಳನ್ನು ಇನ್ನೂ ಅಂತಿಮಗೊಳಿಸಬೇಕಾಗಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವ ಎಸ್ ಆರ್ ಪಾಟೀಲ್ ಹೇಳಿದ್ದಾರೆ.

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಸ್.ಆರ್. ಪಾಟೀಲ್ ಅವರು ವಿಧಾನ ಸಭೆಯಲ್ಲಿ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್. ಡಿ. ರೇವಣ್ಣ ಅವರ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.[ಚಿಕ್ಕಮಗಳೂರಿನ ನೂರು ಸ್ಥಳಗಳಲ್ಲಿ ವೈ ಫೈ ಹಾಟ್ ಸ್ಪಾಟ್]

Minister SR Patil

2015ರ ಜೂನ್ ಒಳಗೆ ದೇಶದ 25 ನಗರಗಳಲ್ಲಿ ಉಚಿತ ವೈ-ಫೈ ಸೌಲಭ್ಯ ಒದಗಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆಯಡಿ ವೈ-ಫೈ ಒದಗಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಯೋಜನೆಗೆ ಅನುಗುಣವಾಗಿ ರಾಜ್ಯ ಸರ್ಕಾರ ತನ್ನ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ ಎಂದರು. [ಮೋದಿ ಕನಸಿನ ಡಿಜಿಟಲ್ ಇಂಡಿಯಾ ಇನ್ನಿತರ ಯೋಜನೆಗಳು]

ಕೇಂದ್ರ ಸರ್ಕಾರದ ಹೈ ಸ್ಪೀಡ್ ಆಪ್ಟಿಕ್ ಫೈಬರ್ ಜಾಲ ಸಂಪರ್ಕ ಯೋಜನೆ ಮೂಲಕ ಕರ್ನಾಟಕದ 5,600 ಗ್ರಾಮ ಪಂಚಾಯಿತಿಗಳನ್ನು ಬೆಸೆಯಲು ಯೋಜನೆ ರೂಪಿಸಲಾಗಿದೆ. ಸುಮಾರು 1,300 ಗ್ರಾಮ ಪಂಚಾಯಿತಿಗಳಿಗೆ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ ಲಿಮಿಟೆಡ್ (ಬಿಎಸ್ ಎನ್ ಎಲ್) ಸಂಪರ್ಕ ಸಾಧಿಸಿದೆ. [ನಾಲ್ಕು ರೈಲುಗಳ ಪ್ರಯಾಣಿಕರಿಗೆ ವೈಫೈ ಭಾಗ್ಯ]

ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೈಸ್ಪೀಡ್ ಸಂಪರ್ಕ ಸಾಧ್ಯವಿದೆ ಡಿಸೆಂಬರ್ ವೇಳೆಗೆ ಈ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಸುಮಾರು 64ಕ್ಕೂ ಅಧಿಕ ವೈಫೈ ಹಾಟ್ ಸ್ಪಾಟ್ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ. ಎಂಜಿ ರಸ್ತೆ ಟ್ರೀನಿಟಿ ಮಾಲ್, ಲಾಲ್ ಬಾಗ್ ನಂತರ ಕಬ್ಬನ್ ಪಾರ್ಕ್ ಮುಂತಾದೆಡೆ ವೈಫೈ ಲಭ್ಯವಾಗಲಿದೆ (ಒನ್ ಇಂಡಿಯಾ ಸುದ್ದಿ)

English summary
Karnataka government is planning for a speedy roll out of free Wi-Fi services across all the district centers in state said Information and technology minister SR Patil. Karnataka's scheme will be supportive to Digital India launched by PM Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X