ಜ.8 ರಂದು ಬೆಂಗಳೂರಿನಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

Posted By:
Subscribe to Oneindia Kannada

ಬೆಂಗಳೂರು, ಜನವರಿ 06: ನೂರಾರು ಕಲಾವಿದರ ಪ್ರತಿಭಾ ಪ್ರದರ್ಶನದ ವೇದಿಕೆಯಾದ ಆಳ್ವಾಸ್ ನುಡಿಸಿರಿ ವಿರಾಸತ್, ಸಾಂಸ್ಕೃತಿಕ ವೈಭವ ಜ.8 ರಂದು ನಡೆಯಲಿದೆ.

ಉದ್ಯಾನನಗರಿ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ಗ್ರೌಂಡ್ ನಲ್ಲಿ ಜ.8 ರಂದು ಸಂಜೆ 6 ರಿಂದ 10 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ.

14 ನೇ ಆಳ್ವಾಸ್ ನುಡಿಸಿರಿ ಸಮ್ಮೇಳನಕ್ಕೆ ಸಿದ್ದಗೊಂಡ ಮೂಡಬಿದ್ರೆ

ಸುಮಾರು 350 ಆಳ್ವಾಸ್ ವಿದ್ಯಾರ್ಥಿ ಕಲಾವಿದರಿಂದ ಅಂತಾರಾಷ್ಟ್ರೀಯ ಮಟ್ಟದ ಸಂಸ್ಕೃತಿ ಅನಾವರಣಗೊಳ್ಳಲಿದ್ದು, ಈ ಸುಂದರ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿರುತ್ತದೆ.

Alvas Nudisari Virasat Cultural fest on Jan 8th in bengaluru

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೇಖಕ, ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ವಹಿಸಲಿದ್ದು, ಐಎಎಸ್ ಅಧಿಕಾರಿಗಳಾದ ರಜನೀಶ್ ಗೋಯಲ್, ಶಾಲಿನಿ ರಜನೀಶ್ ಗೋಯಲ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಚಿತ್ರಗಳು : ಮೂಡುಬಿದಿರೆಯಲ್ಲಿ ಆಳ್ವಾಸ್ ನುಡಿಸಿರಿಗೆ ಚಾಲನೆ

ಕಾರ್ಯಕ್ರಮದಲ್ಲಿ ಕೇರಳದ ಮೋಹಿನಿಯಾಟ್ಟಮ್, ಬಡಗುತಿಟ್ಟು, ಆಂಧ್ರದ ಯಕ್ಷಗಾನ, ಮಣಿಪುರಿ ಸ್ತಿಕ್ ಡ್ಯಾನ್ಸ್, ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ, ಕಥಕ್ ಸೇರಿದಂತೆ ಹಲವು ನೃತ್ಯ ಪ್ರಕಾರಗಳ ಪ್ರದರ್ಶನವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ 350 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಡಲಿದ್ದಾರೆ. ಆಸಕ್ತರು ಭಾಗವಹಿಸುವಂತೆ ಕೋರಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A programme in which 350 students of Alvas education trust will perform many different kind of dance types will be taken place in Palace ground, Bengaluru on Jan 8th, at 6 pm to 10 pm. Nagathihalli Chandrashekhar, Kannada film director will inaugurate the most famous Alvas Nudisari Virasat cultural fest.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ