ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಂಬಿಡೆಂಟ್ ಪ್ರಕರಣದ ತನಿಖಾಧಿಕಾರಿ ವೆಂಕಟೇಶ್ ಪ್ರಸನ್ನ ವರ್ಗಾವಣೆ

|
Google Oneindia Kannada News

ಬೆಂಗಳೂರು, ನವೆಂಬರ್ 20: ಆಂಬಿಡೆಂಟ್ ಚಿಟ್ ಫಂಡ್ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿ ವೆಂಕಟೇಶ್ ಪ್ರಸನ್ನ ಅವರನ್ನು ಪ್ರಕರಣ ಚಾಲ್ತಿಯಲ್ಲಿ ಇರುವಾಗಲೇ ವರ್ಗಾವಣೆ ಮಾಡಲಾಗಿದೆ.

ಆಂಬಿಡೆಂಟ್ ಕೇಸ್ : ಅಲಿಖಾನ್ ಜಾಮೀನು ಅರ್ಜಿ ವಜಾ, ಕೋರ್ಟ್‌ಗೆ ಶರಣುಆಂಬಿಡೆಂಟ್ ಕೇಸ್ : ಅಲಿಖಾನ್ ಜಾಮೀನು ಅರ್ಜಿ ವಜಾ, ಕೋರ್ಟ್‌ಗೆ ಶರಣು

ಕೇಂದ್ರ ಅಪರಾಧ ದಳದ ಎಸಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಪ್ರಸನ್ನ ಅವರನ್ನು ನಗರ ಅಪರಾಧ ದಾಖಲೆಗಳ ದಳಕ್ಕೆ (ಸಿಸಿಆರ್‌ಬಿ) ವರ್ಗಾಯಿಸಲಾಗಿದೆ.

ಸಿಸಿಬಿಯು ರೆಡ್ಡಿ ವಿಚಾರದಲ್ಲಿ ಕಾನೂನು ಪ್ರಕಾರ ನಡೆದುಕೊಂಡಿಲ್ಲ: ಬಿಎಸ್‌ವೈ ಸಿಸಿಬಿಯು ರೆಡ್ಡಿ ವಿಚಾರದಲ್ಲಿ ಕಾನೂನು ಪ್ರಕಾರ ನಡೆದುಕೊಂಡಿಲ್ಲ: ಬಿಎಸ್‌ವೈ

ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಜನಾರ್ದನ ರೆಡ್ಡಿ ಜಾಮೀನು ಪಡೆದ ಬಳಿಕ ನವೆಂಬರ್ 15ರಂದು ಆಂಬಿಡೆಂಟ್ ಪ್ರಕರಣದ ತನಿಖಾ ತಂಡದಲ್ಲಿದ್ದ ಸಿಸಿಬಿಯ ಎಸಿಪಿಗಳಾದ ಪಿ.ಟಿ. ಸುಬ್ರಮಣ್ಯ, ಎಂಎಚ್ ಮಂಜುನಾಥ ಚೌಧರಿ ಮತ್ತು ಮರಿಯಪ್ಪ ಅವರನ್ನು ವರ್ಗಾವಣೆ ಮಾಡಲಾಗಿತ್ತು.

ambident case investigating officer ccb acp prasanna venkatesh transfered

ಸುಮಾರು 600 ಕೋಟಿ ರೂ.ಗಿಂತಲೂ ಹೆಚ್ಚಿನ ಪ್ರಮಾಣದ ವಂಚನೆ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಹೆಸರೂ ತಳಕು ಹಾಕಿಕೊಂಡಿತ್ತು. ಮಾತ್ರವಲ್ಲದೆ, ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದ ತನಿಖೆಯನ್ನು ವೆಂಕಟೇಶ್ ಪ್ರಸನ್ನ ನಡೆಸುತ್ತಿದ್ದರು.

ಐದು ದಿನಗಳ ಹಿಂದೆ ತನಿಖಾ ತಂಡದ ಮೂವರನ್ನು ವರ್ಗಾವಣೆ ಮಾಡಿದ್ದ ಸರ್ಕಾರ, ಈಗ ಇದ್ದಕ್ಕಿದ್ದಂತೆ ಪ್ರಮುಖ ತನಿಖಾಧಿಕಾರಿಯನ್ನೇ ವರ್ಗಾವಣೆ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.

ಆಂಬಿಡೆಂಟ್ ಪ್ರಕರಣ ಇಂದು ಮಹತ್ವದ ವಿಚಾರಣೆ, ರೆಡ್ಡಿಗೆ ಮತ್ತೆ ಭೀತಿ?ಆಂಬಿಡೆಂಟ್ ಪ್ರಕರಣ ಇಂದು ಮಹತ್ವದ ವಿಚಾರಣೆ, ರೆಡ್ಡಿಗೆ ಮತ್ತೆ ಭೀತಿ?

ಆಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಮೆಹಫೂಜ್ ಅಲಿಖಾನ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು. ಜನಾರ್ದನ ರೆಡ್ಡಿ ಆಪ್ತ 1ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಬೆಂಗಳೂರಿನ 61ನೇ ಸಿಟಿ ಸಿವಿಲ್ ಕೋರ್ಟ್ ಮಂಗಳವಾರ ಅಲಿಖಾನ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಇದರಿಂದಾಗಿ ಅಲಿಖಾನ್ ಅವರನ್ನು ವಿಚಾರಣೆಗಾಗಿ ಸಿಸಿಬಿ ಬಂಧಿಸುವ ಸಾಧ್ಯತೆ ಇತ್ತು. ಆದರೆ, ಅವರು ನ್ಯಾಯಾಲಯದ ಮುಂದೆ ಶರಣಾದರು. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

English summary
CCB ACP Prasanna Venkatesh who was investigating ambident fraud case got transfered to ccrb.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X