ಕಾಂಗ್ರೆಸ್ ಸರ್ಕಾರ ಎಬ್ಬಿಸಲು ನಗಾರಿ ಬಾರಿಸಿದ ಅಮಿತ್ ಶಾ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 27: ನಗರದ ಅರಮನೆ ಮೈದಾನದಲ್ಲಿ ಹಿಂದುಳಿದ ಸಮುದಾಯಗಳ ಬೃಹತ್‌ ಏಕತಾ ಸಮಾವೇಶವನ್ನು ಬಿಜೆಪಿ ನಡೆಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಗಾರಿ ಬಾರಿಸುವ ಮೂಲಕ ಸಮಾವೇಶಕ್ಕೆ ಚಾಲನೆ ನೀಡಿದರು.

'ನಿದ್ದೆ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಎಚ್ಚರಿಸಲು ನಗಾರಿ ಹೊಡೆದಿದ್ದೇವೆ. ಕಾಂಗ್ರೆಸ್ಸಿನ ಶವಪೆಟ್ಟಿಗೆಗೆ ಕೊನೆ ಮೊಳೆ ಹೊಡೆಯಲಿದ್ದೇವೆ. ಈ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲಿದ್ದೇವೆ' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಘೋಷಿಸಿದರು.

ಕೇಂದ್ರ ಸರ್ಕಾರದ ಎರಡೂವರೆ ವರ್ಷದ ಆಡಳಿತಾವಧಿಯಲ್ಲಿ ಜಾರಿಗೆ ತಂದಿರುವ 54 ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ದೇಶಾದ್ಯಂತ ಈ ಯೋಜನೆಗಳು ಜಾರಿಯಾಗಿದ್ದರೂ ಕರ್ನಾಟಕದಲ್ಲಿ ಈ ಯೋಜನೆಗಳನ್ನು ಸಿದ್ದರಾಮಯ್ಯನವರ ಸರ್ಕಾರ ಜನರಿಗೆ ತಲುಪಿಸುವಲ್ಲಿ ವಿಫಲವಾಗಿದೆ ಎಂದು ಶಾ ಹೇಳಿದರು.

ಹಿಂದುಳಿದ ವರ್ಗಗಳನ್ನು ಸಂಘಟಿಸುವ ನಿಟ್ಟಿನಲ್ಲಿ ಬಿಜೆಪಿ ಈ ಸಮಾವೇಶವನ್ನು ಆಯೋಜಿಸಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಗೊಂದಲಗಳನ್ನು ಬದಿಗೊತ್ತಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕೂಡಾ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಉಳಿದಂತೆ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಅನಂತಕುಮಾರ್, ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಿ ಶ್ರೀರಾಮುಲು, ಅರವಿಂದ್ ಲಿಂಬಾವಳಿ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದಾರೆ.

ಸುಮಾರು 300 ‍X 60 ವಿಸ್ತೀರ್ಣದ ಬೃಹತ್‌ ವೇದಿಕೆಯಲ್ಲಿ ಮಾಜಿ ಸಚಿವ ವಿ.ಶ್ರೀನಿವಾಸ್‌ ಪ್ರಸಾದ್‌, ಉಡುಪಿ ಜಿಲ್ಲೆಯ ಪ್ರಭಾವಿ ರಾಜಕಾರಣಿಗಳಾದ ಜಯಪ್ರಕಾಶ್‌ ಹೆಗ್ಡೆ ಮತ್ತು ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಜೆಪಿ ಸೇರುವ ಬಗ್ಗೆ ಘೋಷಣೆ ಸಾಧ್ಯತೆಯಿದೆ.

ಬೆಂಗಳೂರಿಗೆ ಬಂದಿಳಿದ ಬಿಜೆಪಿ ಅಧ್ಯಕ್ಷ

ಬೆಂಗಳೂರಿಗೆ ಬಂದಿಳಿದ ಬಿಜೆಪಿ ಅಧ್ಯಕ್ಷ

ಬೆಂಗಳೂರಿಗ ಬಂದಿಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಸ್ವಾಗತಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ

ಹಿಂದುಳಿದ ವರ್ಗಗಳ ಸಂಘಟನೆ

ಹಿಂದುಳಿದ ವರ್ಗಗಳ ಸಂಘಟನೆ

ಹಿಂದುಳಿದ ವರ್ಗಗಳನ್ನು ಸಂಘಟಿಸುವ ನಿಟ್ಟಿನಲ್ಲಿ ಬಿಜೆಪಿ ಈ ಸಮಾವೇಶವನ್ನು ಆಯೋಜಿಸಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಗೊಂದಲಗಳನ್ನು ಬದಿಗೊತ್ತಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕೂಡಾ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಕಾಂಗ್ರೆಸ್ ನಾಯಕರು ಯಾರೆಲ್ಲ ಸೇರಲಿದ್ದಾರೆ?

ಕಾಂಗ್ರೆಸ್ ನಾಯಕರು ಯಾರೆಲ್ಲ ಸೇರಲಿದ್ದಾರೆ?

ಮಾಜಿ ಸಚಿವ ವಿ.ಶ್ರೀನಿವಾಸ್‌ ಪ್ರಸಾದ್‌, ಉಡುಪಿ ಜಿಲ್ಲೆಯ ಪ್ರಭಾವಿ ರಾಜಕಾರಣಿಗಳಾದ ಜಯಪ್ರಕಾಶ್‌ ಹೆಗ್ಡೆ ಮತ್ತು ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಜೆಪಿ ಸೇರುವ ಬಗ್ಗೆ ಘೋಷಣೆ ಸಾಧ್ಯತೆಯಿದೆ.ಚಿತ್ರದಲ್ಲಿ ಡಿವಿ ಸದಾನಂದ ಗೌಡ ಹಾಗೂ ನಿರ್ಮಲಾ ಸೀತಾರಾಮನ್

ನಿರ್ಮಲಾ ಸೀತಾರಾಮನ್

ನಿರ್ಮಲಾ ಸೀತಾರಾಮನ್

ಕಾಂಗ್ರೆಸ್ ಮುಕ್ತ ಭಾರತ ಹಾಗೂ ಕರ್ನಾಟಕ ನಮ್ಮ ಗುರಿ, ಇದು ಹಿಂದುಳಿದ ವರ್ಗಕ್ಕೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಯಡಿಯೂರಪ್ಪ ಅವರು ಮಾಡಿದ ಯೋಜನೆ ಬಗ್ಗೆ ತಿಳಿದುಕೊಳ್ಳಿ ಎಂದ ನಿರ್ಮಲಾ ಸೀತಾರಾಮನ್

ಸಮಾವೇಶಕ್ಕೆ ಹಾದಿ ಹೇಗೆ?

ಸಮಾವೇಶಕ್ಕೆ ಹಾದಿ ಹೇಗೆ? ಎಲ್ಲಿ ವಾಹನ ನಿಲುಗಡೆ ಮಾಡ್ಬೇಕು?

ಬಿಜೆಪಿ ಒಬಿಸಿ ಸಮಾವೇಶದ ವಿಡಿಯೋ

ಬಿಜೆಪಿ ಒಬಿಸಿ ಸಮಾವೇಶದ ವಿಡಿಯೋ ಲೈವ್ ನೋಡಿ

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ

ಸುಮಾರು 50ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿರುವ ಈ ಸಮಾವೇಶ ಆರಂಭಕ್ಕೂ ಮುನ್ನ ಸ್ವಾತಂತ್ರ್ಯ ಉದ್ಯಾನದಿಂದ ಅರಮನೆ ಮೈದಾನದವರೆಗೆ 5 ಸಾವಿರಕ್ಕೂ ಅಧಿಕ ದ್ವಿಚಕ್ರ ವಾಹನಗಳ ಜಾಥಾ ನಡೆಸಲಾಯಿತು.

ಯಡಿಯೂರಪ್ಪ ಅವರಿಂದ ಕರೆ

ಯಡಿಯೂರಪ್ಪ ಅವರಿಂದ ಕರೆ

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನ ಬೇಸತ್ತಿದ್ದಾರೆ. ಈ ಸರ್ಕಾರವನ್ನು ತೊಲಗಿಸಲು ನಿರ್ಧರಿಸಿದ್ದಾರೆ. ಯಾವುದೇ ಅಭಿವೃದ್ದಿ ಕೆಲಸಗಳನ್ನು ಈ ಸರ್ಕಾರ ಮಾಡಿಲ್ಲ. ಅದಕ್ಕಾಗಿಯೇ ಈ ಜನ ಬಿಜೆಪಿಯತ್ತ ಒಲವು ವ್ಯಕ್ತಪಡಿಸುತ್ತಿದ್ದಾರೆ.ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ನೋಟು ನಿಷೇಧ ವಿರೋಧಿಸಿ ನಾಳೆ ವಿಪಕ್ಷಗಳು ಕೈಗೊಂಡಿರುವ ಆಕ್ರೋಶ್ ದಿವಸ್‍ನಲ್ಲಿ ಯಾರೂ ಪಾಲ್ಗೊಳ್ಳಬಾರದು. ಎಲ್ಲರೂ ಪ್ರಧಾನಿ ಮೋದಿ ಪರವಾಗಿ ನಿಲ್ಲಬೇಕೆಂದು ಕರೆ ನೀಡಿದರು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
BJP President Amit Shah inaugurates BJP OBC Morcha Rally today at Palace Ground Bengaluru
Please Wait while comments are loading...