ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜದ್ರೋಹದ ಆರೋಪ, ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಸ್ಪಷ್ಟನೆಗಳು

|
Google Oneindia Kannada News

ಬೆಂಗಳೂರು, ಆಗಸ್ಟ್ 16 : ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿರುದ್ಧ ಬೆಂಗಳೂರಿನ ಜೆ.ಸಿ.ನಗರ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಈ ಬಗ್ಗೆ ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಹಲವು ಪ್ರಶ್ನೆಗಳನ್ನು ಎತ್ತಿದೆ.

ಬೆಂಗಳೂರಿನ ವಸಂತನಗರದ ಮಿಲ್ಲರ್ಸ್‌ ರಸ್ತೆಯಲ್ಲಿರುವ ಯುನೈಟೆಡ್‌ ಥಿಯಾಲಾಜಿಕಲ್‌ ಕಾಲೇಜಿನಲ್ಲಿ ಆಮ್ನೆಸ್ಟಿ ಇಂಟರ್‌ನ್ಯಾಷನಲ್‌ ಇಂಡಿಯಾ ಸಂಸ್ಥೆ ಆಗಸ್ಟ್ 13ರಂದು ಬ್ರೋಕನ್‌ ಫ್ಯಾಮಿಲೀಸ್‌ ಹೆಸರಿನಲ್ಲಿ ಕಾರ್ಯಾಗಾರ ಆಯೋಜಿಸಿತ್ತು.[ದೇಶ ವಿರೋಧಿ ಘೋಷಣೆ, ಬೆಂಗಳೂರು ಪೊಲೀಸರಿಂದ FIR]

Amnesty International

ಇದರಲ್ಲಿ ಸೇನೆ ಮತ್ತು ಕಾಶ್ಮೀರಿಗಳ ಸ್ಥಿತಿಗತಿ ಚರ್ಚಿಸಲು ವ್ಯವಸ್ಥೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೆಲವು ಯುವಕರು ದೇಶವಿರೋಧಿ ಘೋಷಣೆ ಕೂಗಿದ್ದಾರೆ ಎಂಬುದು ಆರೋಪವಾಗಿದೆ. ಎಬಿವಿಪಿ ಬೆಂಗಳೂರು ಉತ್ತರ ವಿಭಾಗದ ಸಂಘಟನಾ ಕಾರ್ಯದರ್ಶಿ ಟಿ.ಜಯಪ್ರಕಾಶ್ ಅವರು ಸಲ್ಲಿಸಿದ್ದ ದೂರಿನ ಅನ್ವಯ ಎಫ್‌ಐಆರ್ ದಾಖಲು ಮಾಡಲಾಗಿದೆ.[ಬೆಂಗಳೂರು ಕಾಲೇಜಿನಲ್ಲಿ ದೇಶ ವಿರೋಧಿ ಘೋಷಣೆ, ಏನಿದು ವಿವಾದ?]

ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸ್ಪಷ್ಟನೆಗಳು....

ಮಾಧ್ಯಮಗಳ ವರದಿಗಳ ಪ್ರಕಾರ ಬೆಂಗಳೂರು ಪೊಲೀಸರು ಆಮ್ನೆಸ್ಟಿ ಇಂಟರ್‌ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿರುದ್ಧ ಕಾರ್ಯಕ್ರಮ ಆಯೋಜಿಸಿದ ಕಾರಣಕ್ಕೆ ಎಫ್‌ಐಆರ್ ದಾಖಲು ಮಾಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಡೆಯುವ ಭಾಗವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.[ತುಮಕೂರಿನಲ್ಲಿ ದೇಶ ವಿರೋಧಿ ಘೋಷಣೆ?, ಮೂವರು ವಶಕ್ಕೆ]

ಬ್ರೋಕನ್‌ ಫ್ಯಾಮಿಲೀಸ್‌ ಹೆಸರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಶ್ಮೀರದಿಂದ ಬಂದ ಕೆಲವು ಕುಟುಂಬಗಳು ಪಾಲ್ಗೊಂಡಿದ್ದವು. ಎಬಿವಿಪಿ ಬೆಂಗಳೂರು ಉತ್ತರ ವಿಭಾಗದ ಸಂಘಟನಾ ಕಾರ್ಯದರ್ಶಿ ಟಿ.ಜಯಪ್ರಕಾಶ್ ಅವರು ಸಲ್ಲಿಸಿದ್ದ ದೂರಿನ ಅನ್ವಯ ಎಫ್‌ಐಆರ್ ದಾಖಲು ಮಾಡಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳುತ್ತಿವೆ.

ಶಾಂತಿಭಂಗ, ರಾಜದ್ರೋಹ, ಧರ್ಮ, ಜಾತಿ, ಆಧಾರದ ಮೇಲೆ ಗುಂಪುಗಳ ನಡುವೆ ವೈಮನಸ್ಸು ಸೃಷ್ಟಿ ಆರೋಪದಡಿ ಪ್ರಕರಣ ದಾಖಲಾಗಿದೆ. ಸಂವಿಧಾನಿಕ ಹಕ್ಕಗಳನ್ನು ರಕ್ಷಣೆ ಮಾಡುವಂತೆ ಒತ್ತಾಯಿಸಿ ಕಾರ್ಯಕ್ರಮ ಆಯೋಜನೆ ಮಾಡುವುದನ್ನು ನಿಷೇಧಿಸಲಾಗಿದೆಯೇ?.[English ನಲ್ಲಿ ಸ್ಪಷ್ಟನೆ ಓದಿ]

ಈ ಕಾರ್ಯಕ್ರಮಕ್ಕೆ ಪೊಲೀಸರನ್ನು ಆಹ್ವಾನಿಸಲಾಗಿತ್ತು. ಕಾರ್ಯಕ್ರಮ ನಡೆಯುವಾಗ ಪೊಲೀಸರು ಅಲ್ಲಿದ್ದರು. ಆದರೆ, ಈಗ ನಮ್ಮ ವಿರುದ್ಧ ರಾಜದ್ರೋಹದ ಆರೋಪದಡಿ ಎಫ್‌ಐಆರ್ ದಾಖಲು ಮಾಡುವುದು ಕಾನೂನು ಪ್ರಕಾರ ಸರಿಯೇ?.[Amnesty International India ವೆಬ್ ಸೈಟ್]

ಬ್ರೋಕನ್‌ ಫ್ಯಾಮಿಲೀಸ್‌ ಕಾರ್ಯಕ್ರಮದಲ್ಲಿ ಶಹಜಾದ್‌ ಅಹ್ಮದ್‌ ಖಾನ್‌ ಅವರ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು. ಬೆಂಗಳೂರು ಪೊಲೀಸರಿಗೆ ಮೊದಲೇ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲಾಗಿತ್ತು. ಬೆಂಗಳೂರಿನಲ್ಲಿರುವ ಕಾಶ್ಮೀರಿ ಪಂಡಿತರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು.

ಕಾರ್ಯಕ್ರಮದ ಕೊನೆಯ ಹಂತದಲ್ಲಿ ಕೆಲವರು ಆಜಾದಿ ಎಂದು ಘೋಷಣೆ ಕೂಗಿದರು. ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಸಂಸ್ಥೆಯವರು ಪರ ಮತ್ತು ವಿರೋಧವಾದ ಯಾವುದೇ ನಿಲುವನ್ನು ಅಲ್ಲಿ ತೆಗೆದುಕೊಳ್ಳಲಿಲ್ಲ.

English summary
Bengaluru JC Nagar police filed sedition case against Amnesty India. Here are the clarifications of Amnesty International India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X