ಎಬಿವಿಪಿ ಅಹೋರಾತ್ರಿ ಧರಣಿಗೆ ನಿವೃತ್ತ ಸೈನಿಕರ ಬೆಂಬಲ

Written By:
Subscribe to Oneindia Kannada

ಬೆಂಗಳೂರು, ಆಗಸ್ಟ್, 21: ಅಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ಬೆಂಗಳೂರಿನ ಆನಂದ ರಾವ್ ವೃತ್ತದ ಬಳಿ ಧರಣಿ ನಡೆಸಲಾಗುತ್ತಿದ್ದು ಎಬಿವಿಪಿ ಕಾರ್ಯಕರ್ತರಿಗೆ ನಿವೃತ್ತ ಯೋಧರು ಬೆಂಬಲ ನೀಡಿದ್ದಾರೆ. ನಿವೃತ್ತ ಯೋಧರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಸೈನ್ಯದ ಅವಹೇಳನ ಮಾಡಿದವರನ್ನು ಬಂಧಿಸಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ.[ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆಯ ಪರಿಚಯ]

bengaluru

ಬೀದಿಗಿಳಿದು ಆಕ್ರೋಶ ಹೊರಹಾಕಿದ್ದ ಕಾರ್ಯಕರ್ತರು 48 ಗಂಟೆಗಳ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಸೇನಾ ವಿರೋಧಿ ಘೋಷಣೆ ಕೂಗಿದವರನ್ನು ಬಂಧಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ರಾಷ್ಟ್ರದ್ರೋಹಿ ಕೃತ್ಯದಲ್ಲಿ ತೊಡಗಿರುವ ಆಮ್ನೆಸ್ಟಿ ಸಂಘಟನೆಯನ್ನು ನಿಷೇಧಿಸಬೇಕು. ದೇಶ ದ್ರೋಹದ ಹೆಸರಿನ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.[ಬೆಂಗಳೂರು ಕಾಲೇಜಿನಲ್ಲಿ ದೇಶ ವಿರೋಧಿ ಘೋಷಣೆ, ಏನಿದು ವಿವಾದ?]

bengaluru

ಆಗಸ್ಟ್ 13 ರಂದು ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ದೇಶವಿರೋಧಿ ಘೋಷಣೆ ಕೂಗಿದ್ದಾರೆ. 'ಜಾನ್ ಸೇ ಲೇಂಗೆ ಆಜಾದಿ, ಕಾಶ್ಮೀರ್ ಸೇ ಲೇಂಗೇ ಆಜಾದಿ' ಮುಂತಾದ ಘೋಷಣೆಗಳನ್ನು ಕೂಗಿದ್ದಾರೆ ಎಂಬ ಪ್ರಕರಣ ವಿವಾದದ ಕಿಡಿ ಹಬ್ಬಿಸಿತ್ತು.

bengaluru

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾಕಾರರನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಚಾರ್ಜ್ ಸಹ ಮಾಡಿದ್ದರು.

bengaluru

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Akhil Bharatiya Vidyarthi Parishad [ABVP] members continue their protest demanding for the ban of Amnesty International India. ABVP members staged protest near Mahatma Gandhi Statue, Maurya circle Bengaluru.
Please Wait while comments are loading...