ಬೆಂಗಳೂರಿನಲ್ಲಿ ಪ್ರತಿಭಟನೆ: ಫುಲ್ ಟ್ರಾಫಿಕ್ ಜಾಮ್

Posted By:
Subscribe to Oneindia Kannada

ಬೆಂಗಳೂರು.ಫೆಬ್ರವರಿ 3: ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ನಗರದ ರೈಲ್ವೆ ನಿಲ್ದಾಣದಿಂದ ಪ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು, ವಾಹನ ಸವಾರರು ಪರದಾಡಿದರು.

ರಾಜ್ಯದ ವಿವಿಧೆಡೆಯಿಂದ ರಾಜಧಾನಿ ಬೆಂಗಳೂರಿಗೆ ಅಗಮಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸರಕಾರ ವಿರುದ್ದ ಘೋಷಣೆ ಕೂಗುತ್ತಾ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆ ನಡೆಸಿದರು. ಈ ವೇಳೆ ಒಂದು ಗಂಟೆಗೂ ಮೀಗಿಲಾಗಿ ವಾಹನ ದಟ್ಟಣೆ ಏರ್ಪಟ್ಟಿತ್ತು. ಸಾವಿರಾರು ಮಹಿಳೆಯರು ಬೆಂಗಳೂರಿನ ರಸ್ತೆಯಲ್ಲಿ ಪ್ರತಿಭಟನೆಗಾಗಿ ಮೆರವಣಿಗೆ ಸಾಗಿದ್ದರಿಂದ ಬಿಗಿ ಪೊಲೀಸ್ ಬಂದೋಬಸ್ತನ್ನು ಮಾಡಲಾಗಿತ್ತು. ಇನ್ನು ಸಾರ್ವಜನಿಕರು, ವಾಹನ ಸವಾರರು ಯಾವಾಗ ಈ ಧರಣಿ ನಿಲ್ಲುತ್ತದಪ್ಪಾ ಎಂದು ಪರಿತಪಿಸಿದರು.[ಎಲ್ಲ ಪ್ರತಿಭಟನೆಗಳನ್ನು ಸರ್ಕಾರ ಹತ್ತಿಕ್ಕುತ್ತಿರುವುದೇಕೆ?]

Anganwadi workers protest against to government in bengaluru

ಸಮಾನವೇತನ ನೀಡಬೇಕು, ಕಾರ್ಮಿಕರ ಕಾಯ್ದೆ ಜಾರಿಗೊಳಿಸಬೇಕು, ಕೆಲಸ ಕಾಯಮಾತಿ, ನಗರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತುಟಿ ಭತ್ಯೆ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಪದೇ ಪದೇ ಸರ್ಕಾರಗಳಿಗೆ ಒತ್ತಾಯಿಸುತ್ತಿದ್ದರೂ ಇದುವರೆಗೂ ಬೇಡಿಕೆಗಳು ಈಡೇರಿಲ್ಲ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯ ಕಾರ್ಯದರ್ಶಿ ವಿಜಯಲಕ್ಷ್ಮಿ , ಖಜಾಂಚಿ ಎಂ.ಪಿ.ಭಾರತಿ ಒತ್ತಾಯಿಸಿದರು.[ಮಂಗಳೂರು : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ಖಾಲಿ ಇವೆ]

ಬೆಂಗಳೂರಿನಲ್ಲಿ ಇತ್ತೀಚೆಗೆ ಪ್ರತಿಭಟನೆ ಹೆಚ್ಚಾಗುತ್ತಿದ್ದು, ಇದಕ್ಕಾಗಿ ಪ್ರೀಡಂ ಪಾರ್ಕಿನಲ್ಲಿ ಅವಕಾಶ ಮಾಡಿಕೊಡಲಾಗಿದ್ದರೂ ಅನೇಕ ಕಡೆಗಳಲ್ಲಿ ಪ್ರತಿಭಟಸಿ ವಾಹನ ಸವಾರರಿಗೆ ತೊಂದರೆ ಕೊಡುವುದ ಯಾವ ನ್ಯಾಯ ಎಂದು ನಾಗರಿಕರು ಪ್ರಶ್ನಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Anganwadi workers protest against to government to meet the various demand. During the protest was intense traffic.
Please Wait while comments are loading...