ಇನ್ವೆಸ್ಟ್‌ ಕರ್ನಾಟಕ -2016 : ಹರಿದು ಬಂದ ಬಂಡವಾಳ ಸಾಗರ!

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 03 : ಮೂರು ದಿನಗಳ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ 'ಇನ್ವೆಸ್ಟ್‌ ಕರ್ನಾಟಕ -2016'ರಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ಚಾಲನೆ ಸಿಕ್ಕಿದೆ. ದೇಶ-ವಿದೇಶಗಳ ವಿವಿಧ ಉದ್ಯಮಿಗಳು ಸಮಾವೇಶದಲ್ಲಿ ಭಾಗವಹಿಸಿದ್ದಾರೆ. [ಸಮಾವೇಶದ ಮೊದಲ ದಿನದ ಚಿತ್ರಗಳು]

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದೀಪ ಬೆಳಗಿಸುವ ಮೂಲಕ ಮೂರು ದಿನಗಳ 'ಇನ್ವೆಸ್ಟ್‌ ಕರ್ನಾಟಕ -2016' ಸಮಾವೇಶಕ್ಕೆ ಚಾಲನೆ ನೀಡಿದರು. ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು, ಮುಖ್ಯಮಂತ್ರಿ ಸಿದ್ದರಾಮಯ್ಯ, ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಹಲವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. [ಇನ್ವೆಸ್ಟ್ ಕರ್ನಾಟಕ ಮೊಬೈಲ್ ಅಪ್ಲಿಕೇಶನ್]

 arun jaitley

ಉದ್ಯಮಿಗಳಾದ ರತನ್ ಟಾಟಾ, ವಿಪ್ರೋ ಸಂಸ್ಥೆಯ ಅಜೀಂ ಪ್ರೇಂಜಿ, ಇನ್ಫೋಸಿಸ್‌ ಮುಖ್ಯಸ್ಥ ನಾರಾಯಣಮೂರ್ತಿ, ಅನಿಲ್ ಅಂಬಾನಿ, ಗೌತಮ್ ಅದಾನಿ ಸೇರಿದಂತೆ ದೇಶ-ವಿದೇಶದ ಹಲವಾರು ಖ್ಯಾತ ಉದ್ಯಮಿಗಳು ಸಮಾವೇಶಕ್ಕೆ ಆಗಮಿಸಿದ್ದಾರೆ. ಈ ಸಮಾವೇಶದಿಂದಾಗಿ ರಾಜ್ಯದಲ್ಲಿ 2 ಲಕ್ಷ ಕೋಟಿ ರೂ.ಗಳಿಗೂ ಅಧಿಕ ಬಂಡವಾಳ ಹೂಡಿಕೆಯಾಗಬಹುದೆಂದು ಅಂದಾಜಿಸಲಾಗಿದೆ.

ರಾಜ್ಯದ ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿ ಎರಡನೇ ಮತ್ತು ಮೂರನೇ ದರ್ಜೆಯ ನಗರಗಳಲ್ಲೂ ಕೈಗಾರಿಕೆಗಳನ್ನು ಸ್ಥಾಪಿಸುವುದು ಈ ಸಮಾವೇಶದ ಉದ್ದೇಶಗಳಲ್ಲಿ ಸೇರಿದೆ. ಅರಮನೆ ಮೈದಾನದ 1 ಲಕ್ಷ ಚದರಡಿ ಪ್ರದೇಶದಲ್ಲಿ ವಿವಿಧ ಕಂಪನಿಗಳಿಗೆ ವಸ್ತು ಪ್ರದರ್ಶನಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. [ಇನ್ವೆಸ್ಟ್ ಕರ್ನಾಟಕ ವೆಬ್ ಸೈಟ್]

investment

ಹೂಡಿಕೆ ಕ್ಷೇತ್ರಗಳು : ಮೂರು ದಿನಗಳ ಸಮಾವೇಶದಲ್ಲಿ ಕೈಗಾರಿಕೆ, ಮೂಲಸೌಕರ್ಯ, ಪ್ರವಾಸೋದ್ಯಮ, ಇಂಧನ, ಜವಳಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಬಂಡವಾಳ ಹರಿದುಬರಲಿದೆ ಎಂದು ನಿರೀಕ್ಷಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Finance Minister Arun Jaitley on Wednesday inaugurated the Invest Karnataka global business meet 2016 at palace grounds, Bengaluru.
Please Wait while comments are loading...