ಪತಿ ಆರೋಗ್ಯ ಸ್ಥಿತಿ ಗಂಭೀರ: ಜಾಮೀನಿಗಾಗಿ ಶಶಿಕಲಾ ಪ್ರಯತ್ನ?

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 11: ತಮ್ಮ ಪತಿಯ ಆರೋಗ್ಯ ವಿಷಮ ಸ್ಥಿತಿಗೆ ತಲುಪಿರುವ ಕಾರಣದಿಂದಾಗಿ ಬೆಂಗಳೂರು ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಕೆಲ ಮೂಲಗಳು ತಿಳಿಸಿವೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆಯಾಗಿದ್ದ ಶಶಿಕಲಾ ಅವರು, ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿದ್ದಾರೆ.

As husband suffering from health issues, Sasikala may apply for bail: Sources

ಅವರ ಪತಿ ಎಂ. ನಟರಾಜನ್ ಅವರು ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ಕೆಲ ದಿನಗಳಿಂದ ಅವರು ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರ ಸ್ಥಿತಿ ಈಗ ವಿಷಮವಾಗಿರುವುದಾಗಿ ಹೇಳಲಾಗಿದೆ. ಸೆ. 10ರಂದು ಅವರ ಆರೋಗ್ಯ ಪರಿಸ್ಥಿತಿಯು ತೀರಾ ಹದಗೆಟ್ಟಿದ್ದು, ಅವರು 8 ಗಂಟೆಗಳ ಕಾಲ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಿದ್ದರು.

ಈ ಹಿನ್ನೆಲೆಯಲ್ಲಿ, ಶಶಿಕಲಾ ಅವರು ನ್ಯಾಯಲಯಕ್ಕೆ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದೆಂದು ಊಹಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
As her husban M. Natarajan is suffering from Kidney problem and he is under dialysis, AIADMK leader Sasikala supposed to apply for bail, says the sources.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ