ಅಸ್ಸಾಂ ದಾಳಿಯ ಪ್ರಮುಖ ಸೂತ್ರಧಾರ ಸಂಜು ಅರೆಸ್ಟ್
ಅಸ್ಸಾಂ ದಾಳಿ ಪ್ರಕರಣದ ಪ್ರಮುಖ ಆರೋಪಿಯೋರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸಂಜು ಬೋಡೊಲೋಯಿ (27) ಎನ್ಎಫ್ಡಿಬಿ (ಎಸ್) ಸಂಘಟನೆಯ ಸಂಘಟನಾ ಕಾರ್ಯದರ್ಶಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಅಸ್ಸಾಂನ ಸೋನಿಟ್ಪುರ್ ಹಾಗೂ ಕೊಕ್ರಝಾರ್ ಜಿಲ್ಲೆಗಳಲ್ಲಿ 2014ರ ಡಿಸೆಂಬರ್ 23ರಂದು ನಡೆದ ನರಮೇಧದಲ್ಲಿ 80ಕ್ಕಿಂತ ಹೆಚ್ಚು ಜನ ಮೃತಪಟ್ಟಿದ್ದರು. ಈ ನರಮೇಧದಲ್ಲಿ ಭಾಗವಹಿಸಿದ್ದ ಸಂಜು ನಂತರ ಬೆಂಗಳೂರಿನ ಇಲೆಕ್ಟ್ರಾನಿಕ್ಸ್ ಸಿಟಿಗೆ ಬಂದು ನೆಲೆಸಿದ್ದ.
ತಪ್ಪೊಪ್ಪಿಕ್ಕೊಂಡಿದ್ದಾನೆ : ತಾನು ನರಮೇಧ ಪ್ರಕರಣದಲ್ಲಿ ಭಾಗವಹಿಸಿದ್ದನ್ನು ಸಂಜು ಈಗಾಗಲೇ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, "ನಾನು ಎನ್ಎಫ್ಡಿಬಿ (ಎಸ್) ಸಂಘಟನೆಯ ಸಂಘಟನಾ ಕಾರ್ಯದರ್ಶಿಯಾಗಿದ್ದು, ಬಾಂಗ್ಲಾದೇಶದಲ್ಲಿ ನನಗೆ ತರಬೇತಿ ನೀಡಲಾಗಿದೆ" ಎಂಬುದನ್ನೂ ತಿಳಿಸಿದ್ದಾನೆ. [ಶಂಕಿತ ಬೋಡೋ ಉಗ್ರನ ಬಂಧನ]

ಪ್ರಸ್ತುತ ಬೆಂಗಳೂರು ಪೊಲೀಸರು ಅಸ್ಸಾಂ ಪೊಲೀಸರು ಹಾಗೂ ಎನ್ಐಎ ಜೊತೆ ಸಂಪರ್ಕದಲ್ಲಿದ್ದಾರೆ. ಅವರಿಂದ ಕೋರಿಕೆ ಬಂದ ತಕ್ಷಣ ಬಂಧಿತ ಸಂಜುನನ್ನು ಅವರ ಕೈಗೊಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ವಾಂಟೆಡ್ ಪಟ್ಟಿಯಲ್ಲಿದ್ದಾನೆ : ಬಂಧಿತ ಸಂಜು ಹಲವು ಅಸ್ಸಾಂ ದಾಳಿ ಜೊತೆಗೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಆತ ಎನ್ಐಎ ಹಾಗೂ ಅಸ್ಸಾಂ ಪೊಲೀಸ್ನ ವಾಂಟೆಡ್ ಪಟ್ಟಿಯಲ್ಲಿದ್ದಾನೆ. [ಮಣಿಪುರ ಉಗ್ರನ ಕೋಟಿ ರು. ಸಿಕ್ತು]
ಸಂಘಟನಾ ಕಾರ್ಯದರ್ಶಿಯಾಗಿರುವ ಸಂಜು ಉಗ್ರವಾದಿ ಸಂಘಟನೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಹಲವು ದಾಳಿ ಪ್ರಕರಣಗಳ ಮಾಸ್ಟರ್ ಮೈಂಡ್ ಕೂಡ ಹೌದು ಎಂದು ಪೊಲೀಸರು ತಿಳಿಸಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications