ಆ ಹಣ ನನ್ನದು ಎಂದು ಸಾಬೀತಾದ್ರೆ, ರಾಜಕೀಯ ನಿವೃತ್ತಿ : ಸುರೇಶ್
ಬೆಂಗಳೂರು, ಮೇ 09: ಭಾರತೀಯ ಜನತಾ ಪಕ್ಷದ ಸರಳ, ಸಜ್ಜನ ರಾಜಕಾರಣಿ ಎಂದೇ ಜನಜನಿತರಾಗಿರುವ ರಾಜಾಜಿನಗರದ ಶಾಸಕ, ಅಭ್ಯರ್ಥಿ ಸುರೇಶ್ ಕುಮಾರ್ ಅವರು ತಮ್ಮ ಮಗಳ ಮೇಲೆ ಬಂದಿರುವ ಚುನಾವಣಾ ಅಕ್ರಮ ಆರೋಪವನ್ನು ಅಲ್ಲಗೆಳೆದಿದ್ದಾರೆ.
ವೋಟಿಗಾಗಿ ನೋಟು ಹಂಚುವ ಪರಿಸ್ಥಿತಿ ನಮಗೆ ಬಂದಿಲ್ಲ, ಆ ಹಣ ನನ್ನದು ಎಂದು ಸಾಬೀತಾದ್ರೆ ಕೂಡಲೇ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಆದರೆ, ಒಬ್ಬ ಯುವತಿ ಮೇಲೆ, ದಬ್ಬಾಳಿಕೆ ಮಾಡಿ, ಸುಳ್ಳು ಆರೋಪ ಹೊರೆಸುತ್ತಿರುವ ಕಾಂಗ್ರೆಸ್ಸಿಗರು, ಕಾರ್ಪೊರೇಟರ್ ಕೃಷ್ಣಮೂರ್ತಿ ಅವರು ಏನು ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಶಾಸಕ ಸುರೇಶ್ ಕುಮಾರ್ ಅವರ ಪುತ್ರಿ ಅಕ್ರಮವಾಗಿ ಹಣ ಹಂಚುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಕೆಲ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿತ್ತು. ಈ ಬಗ್ಗೆ ಸ್ವತಃ ಸುರೇಶ್ ಕುಮಾರ್ ಅವರ ಪುತ್ರಿ ನೀಡಿದ್ದರು. ನಾನು ಹಣ ಹಂಚಿಲ್ಲ, ನನ್ನ ಮೇಲೆ ಹಲ್ಲೆ ಯತ್ನ ನಡೆದಿದೆ ಇದೆಲ್ಲವೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾರ್ಪೊರೇಟರ್ ಕೃಷ್ಣಮೂರ್ತಿ ಅವರ ಪೂರ್ವ ನಿಯೋಜಿತ ಕೃತ್ಯ ಎಂದಿದ್ದಾರೆ.
ಇದಾದ ಬಳಿಕ ಸುರೇಶ್ ಕುಮಾರ್ ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಗೂ ವಿಡಿಯೋ ಸಂದೇಶ ಮೂಲಕ 'ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.
ಸುರೇಶ್ ಕುಮಾರ್ ಅವರ ಮಗಳು ದಿಶಾ ಎಸ್. ಕುಮಾರ್ ಮತದಾರರಿಗೆ ಆಕ್ರಮವಾಗಿ ಹಣ ಹಂಚುತ್ತಿದ್ದರು ಎಂದು ಕೆಲವರು ವಾಟ್ಸಾಪ್ ಮತ್ತು ಫೇಸ್ಬುಕ್ ನಲ್ಲಿ ಸಂದೇಶ ರವಾನಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿ ಸ್ಟೇಟಸ್ ಹಾಗೂ ವಿಡಿಯೊ ಹಾಕಿದ್ದಾರೆ.
ಸುರೇಶ್ ಕುಮಾರ್ ಫೇಸ್ ಬುಕ್ ಸ್ಟೇಟಸ್ :
ರಾಜಾಜಿನಗರದಲ್ಲಿ ಬಿಜೆಪಿ ವತಿಯಿಂದ, ಅದರಲ್ಲೂ ನನ್ನ ಮಗಳ ಕಡೆಯಿಂದ ಚುನಾವಣಾ ಸಂಬಂಧ ಹಣ ಹಂಚುವಿಕೆ ಆಗುತ್ತಿರುವಾಗ, ನನ್ನ ಮಗಳನ್ನು ಪೋಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದೆಯೆಂಬ ಸುದ್ಧಿ ಅಪ್ಪಟ ಸುಳ್ಳು ಸುದ್ಧಿ.
ಯಾವುದೇ ರೀತಿಯ ಹಣ ಹಂಚುವಿಕೆ ನಾವು ಮಾಡಿಲ್ಲ. ಮಾಡುವುದಿಲ್ಲ.
ಸೋಷಿಯಲ್ ಮೀಡಿಯಾ ತಂಡದ ಜೊತೆ ನನ್ನ ಮಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದಾಳಷ್ಟೇ. ನಮ್ಮ ಸೋಷಿಯಲ್ ಮೀಡಿಯಾ ತಂಡದ ಜೊತೆ ನಮ್ಮ ಪಕ್ಷದ ಯುವ ಮೋರ್ಚಾ ಪದಾಧಿಕಾರಿ ಯಶಸ್ ರವರ ಕಚೇರಿಯಲ್ಲಿ ಚರ್ಚಿಸುತ್ತಿದ್ದಳು.
ಯಾವುದೇ ರೀತಿಯ ಅಕ್ರಮ ಕಾರ್ಯದಲ್ಲಿ ನನ್ನ ಮಗಳು, ನನ್ನ ಪಕ್ಷ ಭಾಗಿಯಾಗಿಲ್ಲವೆಂದು ಸ್ಪಷ್ಟಗೊಳಿಸುತ್ತಿದ್ದೇನೆ. ಚುನಾವಣೆ ದಿನಾಂಕ ಹತ್ತಿರ ಬರುವಂತೆ ಈ ರೀತಿಯ ಸುದ್ಧಿಗಳು ಇನ್ನಷ್ಟು ಹೆಚ್ಚಾಗುತ್ತವೆ ಎಂದಿದ್ದಾರೆ.
ವಿಡಿಯೋದಲ್ಲಿ ನೀಡಿರುವ ಸ್ಪಷ್ಟನೆ ಇಲ್ಲಿದೆ:
ಈ ಕ್ಷೇತ್ರದಲ್ಲಿ 1994ರಿಂದ ನಾಲ್ಕು ಬಾರಿ ಜಯಗಳಿಸಿರುವ ಸುರೇಶ್ ಕುಮಾರ್ ಅವರ ವಿರುದ್ಧ ಈ ಬಾರಿ ಕಾಂಗ್ರೆಸ್ಸಿನಿಂದ ಮಾಜಿ ಮೇಯರ್ ಜಿ ಪದ್ಮಾವತಿ ಅವರು ಕಣಕ್ಕಿಳಿದಿದ್ದಾರೆ. ಮೇ 12ರಂದು ಮತದಾನ ನಡೆಯಲಿದ್ದು, ಮೇ 15ರಂದು ಭವಿಷ್ಯ ತಿಳಿಯಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications