17 ಮೆಟ್ರೋ ಸ್ಟೇಷನ್ ಗಳಲ್ಲಿ ಎಟಿಎಂ ಸೇವೆ

Posted By: Prithviraj
Subscribe to Oneindia Kannada

ಬೆಂಗಳೂರು, ಅಕ್ಟೋಬರ್, 17: ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲು ಡಿಸೆಂಬರ್ ನಲ್ಲಿ 17 ಮೆಟ್ರೋ ಕೇಂದ್ರಗಳಲ್ಲಿ ಎಟಿಎಂ ಸೇವೆ ಒದಗಿಸುವುದಾಗಿ ಬಿ ಎಂ ಆರ್ ಸಿ ಎಲ್ ತಿಳಿಸಿದೆ.

ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಹಸಿರು ಮತ್ತು ನೇರಳೆ ಮಾರ್ಗಗಳ 22 ಮೆಟ್ರೋ ನಿಲ್ದಾಣಗಳಲ್ಲಿ ಎಟಿಎಂ ಕೇಂದ್ರ ಅಳವಡಿಕೆಗೆ ಅವಕಾಶ ನೀಡಿ ಬಿ ಎಂ ಆರ್ ಸಿ ಎಲ್ ಪ್ರಕಟಣೆ ಹೊರಡಿಸಿತ್ತು.

ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಎರಡು ಎಟಿಎಂ ಘಟಕ ಸ್ಥಾಪನೆಗೆ ಅವಕಾಶವಿದೆ. ನಾಯಂಡಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಮೂರು ಘಟಕಗಳಿಗೆ ಹಾಗೂ ಎಂ.ಜಿ. ರಸ್ತೆ ನಿಲ್ದಾಣದಲ್ಲಿ 4 ಘಟಕಗಳಿಗೆ ಅವಕಾಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿತ್ತು. [ನಮ್ಮ ಮೆಟ್ರೋ ಸುರಂಗ ಮಾರ್ಗದ ವಿಶೇಷತೆಗಳು]

ಎಟಿಎಂ ಘಟಕ ಸ್ಥಾಪನೆ ಕುರಿತು ಕರೆದಿದ್ದ ಟೆಂಡರ್ ಗೆ 25ಕ್ಕೂ ಹೆಚ್ಚು ಬ್ಯಾಂಕ್ ಗಳು ಅರ್ಜಿ ಸಲ್ಲಿಸಿದ್ದವು. ಅವುಗಳ ಪೈಕಿ 5 ಬ್ಯಾಂಕ್ ಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಬಿ ಎಂ ಆರ್ ಸಿ ಎಲ್ ಅಧಿಕಾರಿಗಳು ತಿಳಿಸಿದ್ದಾರೆ. [ಶೀಘ್ರದಲ್ಲೇ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ]

ಕೋಟಕ್ ಮಹೀಂದ್ರಾ ಬ್ಯಾಂಕ್ ಗೆ ಹೆಚ್ಚು ಎಟಿಎಂ ಘಟಕಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎಟಿಎಂ ಘಟಕಗಳ ಸ್ಥಾಪನೆಗೆ ಹೆಚ್ಚು ಬ್ಯಾಂಕ್ ಗಳಿಂದ ಅರ್ಜಿ ಸಲ್ಲಿಕೆಯಾಗಿತ್ತು. ಆದರೆ ಸಾಲು ಸಾಲು ರಜೆಗಳು ಬಂದ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪರಿಣಾಮ 5 ಮೆಟ್ರೋ ನಿಲ್ದಾಣಗಳಲ್ಲಿ ಎಟಿಎಂ ಘಟಕಗಳನ್ನು ಸ್ಥಾಪನೆ ಮಾಡಲು ಆಗುತ್ತಿಲ್ಲ. ಮುಂದಿನ ದಿನಗಳಲ್ಲಿ ಉಳಿದ ನಿಲ್ದಾಣಗಳಲ್ಲೂ ಎಟಿಎಂ ಘಟಕ ತೆರೆಯುವ ಕುರಿತು ಟೆಂಡರ್ ಕರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಎಟಿಎಂ ಘಟಗಳ ಸ್ಥಾಪನೆಯಿಂದ 'ನಮ್ಮ ಮೆಟ್ರೋ'ಗೆ 1.5ಕೋಟಿ ರೂ. ವಾರ್ಷಿಕ ವರಮಾನ ಬರಲಿದೆ. ಮುಂದಿನ ದಿನಗಳಲ್ಲಿ ಮತ್ತೆ ಹೊಸ ಎಟಿಎಂ ಘಟಕಗಳ ಸ್ಥಾಪನೆಗೆ ಟೆಂಡರ್ ಕರೆಯಲಾಗುವುದು ಇದರಿಂದ ಮತ್ತೆ 1ಕೋಟಿ ಆದಾಯ ಬರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವ್ಯಾಪರ ಮಳಿಗೆ ಸ್ಥಾಪನೆಗೆ ಒತ್ತಾಯ

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ವ್ಯಾಪಾರ ಮಳಿಗೆಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಕೋರಿ ಒತ್ತಾಯ ಬಂದ ಹಿನ್ನೆಲೆಯಲ್ಲಿ, ವ್ಯಾಪರ ಮಳಿಗೆಗಳನ್ನು ಸ್ಥಾಪಿಸುವ ಸಂಬಂಧ ಬಿ ಎಂ ಆರ್ ಸಿಲ್ ಟೆಂಡರ್ ಕರೆಯಲು ಚಿಂತನೆ ನಡೆಸುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Namma Metro passengers will get ATM centres in Metro station's 17 locations in Decemeber say's BMRCL officials,
Please Wait while comments are loading...