ಈದ್ ಮಿಲಾದ್ ಪ್ರಯುಕ್ತ ಮದ್ಯ ಮಾರಾಟ ನಿಷೇಧ

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 13: ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಈದ್ ಮಿಲಾದ್ ಪ್ರಯುಕ್ತ ಮಂಗಳವಾರ (ಡಿಸೆಂಬರ್ 13) ದಂದು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಹೇರಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ಅವರು ಸೋಮವಾರ ಸಂಜೆ ತಿಳಿಸಿದ್ದಾರೆ.

ಡಿಸೆಂಬರ್ 13ರಂದು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ, ಪೂರ್ವ ವಿಭಾಗದ ಕೆ.ಜಿ.ಹಳ್ಳಿ, ಹೆಣ್ಣೂರು, ಡಿ.ಜೆ.ಹಳ್ಳಿ, ಪುಲಿಕೇಶಿನಗರ, ಶಿವಾಜಿನಗರ, ಕಮರ್ಷಿಯಲ್‍ಸ್ಟ್ರೀಟ್ ಮತ್ತು ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಧ್ಯಾಹ್ನ 1-00 ಗಂಟೆಗೆ ಟ್ಯಾನರಿ ರಸ್ತೆಯಲ್ಲಿ ಮೆರವಣಿಗೆಯು ಪ್ರಾರಂಭವಾಗಿ ಸಂಜೆ ಸುಮಾರು 4-00 ಗಂಟೆಗೆ ಬಂಬೂಬಜಾರ್ ಬಳಿ ಇರುವ ಸುಲ್ತಾನ್ ಗುಂಟಾ ಮೈದಾನದಲ್ಲಿ ಬಂದು ಸೇರಲಿದೆ. [ಈದ್ ಮಿಲಾದ್ : ಡಿಸೆಂಬರ್ 13ರಂದು ಸರಕಾರಿ ರಜಾ]

Bengaluru: Ban on liquor on Milad-un-Nabi December 13

ಈ ಕಾರ್ಯಕ್ರಮಕ್ಕೆ ನಗರದ ನಾನಾ ಕಡೆಗಳಿಂದ ಮುಸ್ಲಿಂ ಬಾಂಧವರು ಬಂದು ಸೇರಿ ಈದ್ ಮಿಲಾದ್ ಹಬ್ಬದ ಪ್ರಾರ್ಥನೆ ನಡೆಸುವರು. ಈ ಸಂದರ್ಭದಲ್ಲಿ ಹಬ್ಬದ ಆಚರಣೆ ಹಾಗೂ ಮೆರವಣಿಗೆ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭಾರತೀಯ ದಂಡ ಪ್ರಕ್ರಿಯ ಸಂಹಿತೆಯ ಕಲಂ. 144 ರ ಉಪ ಕಲಂ (1) ಮತ್ತು (3)ರ ಅನ್ವಯ ದಿನಾಂಕ: 13-12-2016 ರಂದು ಬೆಳಿಗ್ಗೆ 6-00 ಗಂಟೆಯಿಂದ ರಾತ್ರಿ 11-00 ಗಂಟೆಯವರೆಗೆ ಮೇಲ್ಕಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಬಾರ್, ವೈನ್ ಶಾಪ್, ಪಬ್ ಹಾಗೂ ಎಲ್ಲಾ ರೀತಿಯ ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟವನ್ನು ಮಾಡದಿರಲು ನಿಷೇದಾಜ್ಞೆ ಹೊರಡಿಸಲಾಗಿದೆ. ಮಿಲಿಟರಿ ಕ್ಯಾಂಟೀನ್, ಕ್ಲಬ್ ಹಾಗೂ ಸ್ಟಾರ್ ಹೋಟೆಲ್ ಗಳಿಗೆ ವಿನಾಯಿತಿ ನೀಡಲಾಗಿದೆ. (ಒನ್ಇಂಡಿಯಾ ಸುದ್ದಿ)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bengaluru: Ban on liquor on Milad-un-Nabi December 13. Milad-un-Nabi is celebrated on the eve of the birthday of Prophet Mohammad (PBUH) and in order to respect the feeling of the community ban imposed.
Please Wait while comments are loading...