ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಹಾಗೂ ಬಿಡಿಎ ಆಡಳಿತಕ್ಕೆ ಪ್ರತ್ಯೇಕ ಕಾಯ್ದೆ ಶೀಘ್ರ

|
Google Oneindia Kannada News

ಬೆಂಗಳೂರು, ಡಿಸೆಂಬರ್ 19: ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿಗಳ ಆತಂರಿಕ ವರ್ಗಾವಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕಾಗಿ ಪ್ರತ್ಯೇಕ ಕಾಯ್ದೆ ಜಾರಿಗೆ ತರಬೇಕು ಎಂದು ಈ ಸಾಲಿನ ಸದಸ್ಯರ ಖಾಸಗಿ ವಿಧೇಯಕ ಮತ್ತು ನಿರ್ಣಯಗಳ ಸಮಿತಿಯು ವಿಧಾನಸಭೆಯಲ್ಲಿ ಮಂಗಳವಾರ ಸಲ್ಲಿಸಿದ ಎರಡನೇ ವರದಿಯಲ್ಲಿ ಶಿಫಾರಸು ಮಾಡಿದೆ.

ಬಿಬಿಎಂಪಿ ಸೇರಿದಂತೆ ಮಹಾನಗರ ಪಾಲಿಕೆ, ನಗರಸಭೆಗೂ, ಪುರಸಭೆಗಳು 1976ರ ಕರ್ನಾಟಕ ಪೌರ ನಿಗಮಗಳ ಕಾರ್ಯನಿರ್ವಹಣೆ ಮಾಡುತ್ತದೆ. ಸ್ಥಳೀಯ ಶಾಸಕರು ಸಮರ್ಪಕವಾಗಿ ಕಾರ್ಯನಿರ್ವಹಿಸಲು ನುಕೂಲವಾಗುವಂತೆ ಸ್ಪಷ್ಟವಾದ ಅಧಿಕಾರ, ಜವಾಬ್ದಾರಿಗಳನ್ನು ಉಲ್ಲೇಖಿಸುವ ಅಗತ್ಯವಿದೆ.

ಪೆರಿಫೆರಲ್ ರಿಂಗ್ ರಸ್ತೆ ನೈಸ್‌ ರಸ್ತೆಗೆ ಸೇರಲು 300 ಎಕರೆ ಭೂಮಿ ಬೇಕು ಪೆರಿಫೆರಲ್ ರಿಂಗ್ ರಸ್ತೆ ನೈಸ್‌ ರಸ್ತೆಗೆ ಸೇರಲು 300 ಎಕರೆ ಭೂಮಿ ಬೇಕು

ಆದ ಕಾರಣ ಪ್ರಕರಣ 70ಕ್ಕೆ ಸೂಕ್ತ ತಿದ್ದುಪಡಿ ತರಬೇಕು ಎಂದು ವಿಧಾನಸಭೆಯ ಉಪಾಧ್ಯಕ್ಷರೂ ಆಗಿರುವ ಸಮಿತಿ ಅಧ್ಯಕ್ಷ ಎಂ ಕೃಷ್ಣಾರೆಡ್ಡಿ ಮಂಗಳವಾರ ಕಲಾಪದ ವೇಳೆ ವರದಿ ಮಂಡಿಸಿದ್ದಾರೆ.

BBMP and BDA will get seperate act soon

ಮಹಾನಗರ ಪಾಲಿಕೆ, ನಗರಸಭೆಗಳಿಗೆ ಸಂಬಂಧಿಸಿದಂತೆ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಕ್ಷೇತ್ರವಾರು ಅಭಿವೃದ್ಧಿ ಸಮಿತಿ ರಚನೆ ಮಾಡಬೇಕು. ಸಮಿತಿಯಲ್ಲಿ ಪಾಲಿಕೆ ಸದಸ್ಯರು ಇರಬೇಕು.

ಬೆಂಗಳೂರು ಸುತ್ತಾ 65 ಕಿ.ಮೀ. ಪೆರಿಫೆರಲ್ ರಸ್ತೆ ಯೋಜನೆಗೆ ಒಪ್ಪಿಗೆ ಬೆಂಗಳೂರು ಸುತ್ತಾ 65 ಕಿ.ಮೀ. ಪೆರಿಫೆರಲ್ ರಸ್ತೆ ಯೋಜನೆಗೆ ಒಪ್ಪಿಗೆ

ಸಮಿತಿಯ ಸಭೆಗೆ ಕ್ಷೇತ್ರದ ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಮತ್ತು ಸಮಿತಿ ಕಾರ್ಯಚಟುವಟಿಕೆಗಳನ್ನು ನಡೆಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

English summary
To have smooth functioning and transfer purpose BBMP and BDA will have different rules and act. Government is formulating the act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X