ಜನನ, ಮರಣ ಪ್ರಮಾಣ ಪತ್ರ ಪಡೆಯಲು ಶುಲ್ಕ ಇಲ್ಲ

Posted By: Gururaj
Subscribe to Oneindia Kannada

ಬೆಂಗಳೂರು, ನವೆಂಬರ್ 16 : ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು ಇದ್ದ ಸೇವಾ ಶುಲ್ಕವನ್ನು ಬಿಬಿಎಂಪಿ ರದ್ದುಗೊಳಿಸಿದೆ. ಉಚಿತವಾಗಿ ಪ್ರಮಾಣ ಪತ್ರಗಳನ್ನು ವಿತರಣೆ ಮಾಡುವಂತೆ ಆದೇಶ ಹೊರಡಿಸಿದೆ.

ಜನನ ಪ್ರಮಾಣ ಪತ್ರ ಪಡೆಯುವುದು ಹೇಗೆ?

ಮೊದಲ ಜನನ, ಮರಣ ಪ್ರಮಾಣ ಪತ್ರ ಪಡೆಯಲು 50 ರೂ. ಸೇವಾ ಶುಲ್ಕ ಪಾವತಿ ಮಾಡಬೇಕಿತ್ತು. ನಂತರ ಹೆಚ್ಚುವರಿ ಪ್ರತಿಗಳನ್ನು ಪಡೆಯಲು ತಲಾ 10 ರೂ. ಶುಲ್ಕ ಕಟ್ಟಬೇಕಿತ್ತು. ಜನರು ಸಹ ಶುಲ್ಕವನ್ನು ಪರಿಷ್ಕರಣೆ ಮಾಡುವಂತೆ ಒತ್ತಾಯಿಸಿದ್ದರು.

BBMP cancels service charge on death and birth certificates

ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದು, ನ.1ರಿಂದಲೇ ಜಾರಿಗೆ ಬರುವಂತೆ ಸೇವಾ ಶುಲ್ಕವನ್ನು ರದ್ದುಗೊಳಿಸಲಾಗಿದೆ. ಪ್ರಮಾಣ ಪತ್ರ ವಿತರಣೆ ಮಾಡಲು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಆಯುಕ್ತರು ಸೂಚನೆ ನೀಡಿದ್ದಾರೆ.

ಜನನ ಮತ್ತು ಮರಣ ಸಂಭವಿಸಿದ 21ದಿನದೊಳಗೆ ನೋಂದಣಿ ಮಾಡಿಸಿದರೆ ಯಾವುದೇ ಶುಲ್ಕ ಪಾವತಿಸಬೇಕಿಲ್ಲ. ಈ ಅವಧಿಯಲ್ಲಿ ಉಚಿತವಾಗಿ ಪ್ರಮಾಣ ಪತ್ರ ಸಿಗಲಿದೆ.

ಆದರೆ, 22ನೇ ದಿನದಿಂದ 31ನೇ ದಿನದೊಳಗೆ ನೋಂದಣಿ ಮಾಡಿಸಿದರೆ 2 ರೂ., 31ನೇ ದಿನದಿಂದ 1 ವರ್ಷದೊಳಗೆ 5 ರೂ., 1 ವರ್ಷ ಮೇಲ್ಪಟ್ಟರೆ 10 ರೂ. ಶುಲ್ಕ ಪಾವತಿ ಮಾಡಬೇಕಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Bruhat Bangalore Mahanagara Palike (BBMP) has cancelled service charge on death and birth certificates. Now people can get certificates in free of cost.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ