ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಬಂದ್‌ಗೆ ಬಿಬಿಎಂಪಿ ಸದಸ್ಯರ ಬೆಂಬಲ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 08 : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಒಕ್ಕೂಟ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಪಕ್ಷಾತೀತವಾಗಿ ಬಂದ್‌ಗೆ ಬೆಂಬಲ ನೀಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ (ಬಿಬಿಎಂಪಿ) ಬಿ.ಎನ್.ಮಂಜುನಾಥ ರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಶುಕ್ರವಾರ ಬಿಬಿಎಂಪಿಯ ಎಲ್ಲಾ 198 ವಾರ್ಡ್‌ಗಳಲ್ಲಿ ಬಿಬಿಎಂಪಿ ಸದಸ್ಯರ ನೇತೃತ್ವದಲ್ಲಿ ಪಕ್ಷಾತೀತವಾಗಿ ಪ್ರತಿಭಟನೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.[ಟೆಕ್ಕಿಗಳ ರಜೆ ಮಜಾ ಹಾಳು, ಬಂದ್ ಮಾಡೋಣ ಬನ್ನಿ]

BBMP councillors extends support for Karnataka bandh

'ಆಡಳಿತ ಪಕ್ಷವಾದ ಕಾರಣ ನಾವು ಪಾಲ್ಗೊಳ್ಳದಿದ್ದರೂ ಹೋರಾಟಕ್ಕೆ ನಮ್ಮ ಬೆಂಬಲವಿರುತ್ತದೆ. ಕಾವೇರಿ ನದಿ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಸುಪ್ರೀಂಕೋರ್ಟ್ ಮೊರೆ ಹೋಗಬೇಕು ಎಂದು ವಿನಂತಿ ಮಾಡಿಕೊಳ್ಳುತ್ತೇನೆ' ಎಂದು ಮೇಯರ್ ತಿಳಿಸಿದ್ದಾರೆ.[ಸೆ.9ರ ಕರ್ನಾಟಕ ಬಂದ್ ಬಿಸಿ ಎಲ್ಲಿಗೆ ತಟ್ಟಲಿದೆ?]

Must Read : ಬೆರಳ ತುದಿಯಲ್ಲಿ ರಿಲಯನ್ಸ್ ಕಾರ್ ವಿಮೆ ನವೀಕರಣ

2 ಸಾವಿರ ಸಂಘಟನೆಗಳ ಬೆಂಬಲ : 'ಶುಕ್ರವಾರದ ಕರ್ನಾಟಕ ಬಂದ್‌ಗೆ 2 ಸಾವಿರ ಸಂಘಟನೆಗಳು ಬೆಂಬಲ ನೀಡಿವೆ. ಬೆಳಗ್ಗೆ 6 ರಿಂದ ಸಂಜೆ 6ರ ತನಕ ಬಂದ್ ನಡೆಯಲಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಎಲ್ಲರಿಗೂ ಕರೆ ನೀಡಿದ್ದೇವೆ' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

English summary
Bruhat Bengaluru Mahanagara Palike (BBMP)councillors have decided to hold protests in all 198 wards of Bengaluru city on September 9, 2016 to extend support for Karnataka bandh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X