ಘನತ್ಯಾಜ್ಯ ನಿರ್ವಹಣೆ ಕರವನ್ನು ಕೈಬಿಟ್ಟ ಬಿಬಿಎಂಪಿ

Posted By: Nayana
Subscribe to Oneindia Kannada

ಬೆಂಗಳೂರು, ಮಾರ್ಚ್ 14: ಘನ ತ್ಯಾಜ್ಯ ನಿರ್ವಹಣೆ ಪ್ರಸ್ತಾಪವನ್ನು ಬಿಬಿಎಂಪಿ ಕೈಬಿಟ್ಟಿದೆ. ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ವೆಚ್ಚ, ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಘನತ್ಯಾಜ್ಯ ನಿರ್ವಹಣೆ ಕರ ವಿಧಿಸುವುದಕ್ಕೆ ಮುಂದಾಗಿತ್ತು.

ಆದರೆ ನಿರ್ವಹಣೆ ದರ ವಿಧಿಸಿದರೆ ನಾಗರಿಕರಿಂದ ತೀವ್ರ ವರೋಧ ಎದುರಿಸಬೇಕಾಗುತ್ತದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಕರ ವಿಧಿಸುವುದನ್ನು ಕೈಬಿಡಲು ನಿರ್ಣಯ ಕೈಗೊಳ್ಳಲಾಯಿತು.

ಬೆಂಗಳೂರಿಗರಿಗೆ ಹೊಸ ತೆರಿಗೆ ಹಾಕಲಿದೆ ಬಿಬಿಎಂಪಿ

ಅಧಿಕಾರಿಗಳಿಗೆ ಎಚ್ಚರ: ವಾರ್ಡ್ ಮಟ್ಟದ ಅಭಿವೃದ್ಧಿ ಕಾಮಗಾರಿಗಳಿಗೆ ಎರಡು ದಿನಗಳಲ್ಲಿ ಕಾರ್ಯಾದೇಶ ನೀಡದ ಅಧಿಕಾರಿಗಳನ್ನು ಅಮಾನತು ಮಾಡುವುದಾಗಿ ಮೇಯರ್ ಸಂಪತ್ ರಾಜ್ ಹೇಳಿದರು. ಆಡಳಿತ ಮತ್ತು ಪ್ರತಿಪಕ್ಷ ಸದ್ಯರು ಸೇರಿದಂತೆ ಬಹುತೇಕ ಸದಸ್ಯರು ಮುಂಬರುವ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ನೀತಿ ಸಂಹಿತೆಗೆ ಕೆಲವೇ ದಿನಗಳು ಬಾಕಿ ಇವೆ.

BBMP drops tax on SWM

ಚುನಾವಣಾ ನೀತಿ ಸಂಹಿತೆ ಜಾರಿಯಾಗುವವ ಒಳಗೆ ಕಾಮಗಾರಿಗಳಿಗೆ ಚಾಲನೆ ನೀಡ ಬೇಕಿದೆ. ಅಧಿಕಾರಿಗಳು ವಿವಿಧ ಕಾರಣಗಳನ್ನು ನೀಡಿ ಕಡತಗಳನ್ನು ವಿಲೇವಾರಿ ಮಾಡುತ್ತಿಲ್ಲ ಎನ್ನುವ ಆರೋಪಗಳು ಕೇಳಿಬಂತು.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಇದಕ್ಕೆ ಉತ್ತರಿಸಿದ ಮೇಯರ್ ವಾರ್ಡ್ ಮಟ್ಟದ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲು ಅಧಿಕಾರಿಗಳಿಗೆ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ಚುನಾವಣಾ ಕಾರ್ಯ ನಿಮಿತ್ತ ಅಧಿಕಾರಿಗಳು ಬೇರೆಡೆ ತೆರಳಿದರೆ , ಅಧೀನ ಅಧಿಕಾರಿಗಳು ಕಾರ್ಯಾದೇಶ ಜವಾಬ್ದಾರಿ ವಹಿಸಬೇಕು. ಮುಂದಿನ ದಿನಗಳಲ್ಲಿ 198 ವಾರ್ಡ್ ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಬೇಕು ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BBMP has decided to drop tax on solid waste management owing to opposition from public. The corporation has taken this decision in council meeting on Tuesday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ