ಖಾಕಿ ಕಿತ್ತಾಕಿ ಖಾದಿ ತೊಡಲು ಹೊರಟ ಮಹಿಳಾ ಪೊಲೀಸ್
ಬೆಂಗಳೂರು, ಆಗಸ್ಟ್ 10 : ಸರ್ಕಾರಿ ಅಧಿಕಾರಿಗಳು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ಲೋಕಸಭೆ, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದು ಸಾಮಾನ್ಯ. ಆದರೆ, ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ಪೊಲೀಸ್ ಕಾನ್ಸ್‌ಸ್ಟೇಬಲ್ ಕೆಲಸಕ್ಕೆ ರಾಜೀನಾಮೆ ನೀಡಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ.
ಶ್ರೀನಗರ ವಾರ್ಡ್ (ನಂ 156) ರಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸೋಮವಾರ ನಾಮಪತ್ರ ಸಲ್ಲಿಸಿರುವ ಜೆ.ಎಂ.ಸವಿತಾ ಅವರು ಪೊಲೀಸ್ ಕಾನ್ಸ್‌ಸ್ಟೇಬಲ್ ಹುದ್ದೆ ತೊರೆದು ರಾಜಕೀಯ ರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. [ಬಿಜೆಪಿ ಬಿಬಿಎಂಪಿ ಚುನಾವಣಾ ವೆಬ್ ಸೈಟ್]

12 ವರ್ಷ ಪೊಲೀಸ್ ಕಾನ್ಸ್‌ಟೇಬಲ್ ಅಗಿ ಕೆಲಸ ಮಾಡಿರುವ ಸವಿತಾ ಅವರು ಈಗ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. 2003ರಿಂದ 2006ರ ತನಕ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಸವಿತಾ ಅವರು ಕಾರ್ಯನಿರ್ವಹಿಸಿದ್ದಾರೆ. 2006 ರಿಂದ 2015ರ ತನಕ ಡಿಜಿಪಿ ಕಚೇರಿಯಲ್ಲಿ ಕೆಲಸ ಮಾಡಿದ್ದಾರೆ. [ಪಾಲಿಕೆ ಚುನಾವಣೆ, ಅಭ್ಯರ್ಥಿ ಅಪಹರಣ]
ಚುನಾವಣೆಗೆ ಸ್ಪರ್ಧೆ ಏಕೆ? : ಚುನಾವಣೆಗೆ ಸ್ಪರ್ಧಿಸುವ ಕುರಿತು ಮಾತನಾಡಿರುವ ಸವಿತಾ ಅವರು, 'ನಮ್ಮ ತಂದೆ ಕೃಷಿ ಇಲಾಖೆಯಲ್ಲಿ ಕೆಲಸ ಮಾಡಿದ್ದು, 24 ವರ್ಷಗಳ ನಂತರ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ'.
'ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ನಾನು ಕೂಡ ಪದವಿಧರೆ. ನನಗೂ ಸಮಾಜ ಸೇವೆ ಮಾಡಬೇಕೆಂಬ ಆಸೆ ಇದೆ. ನಮ್ಮ ಬಡಾವಣೆಯಲ್ಲಿ ಕಾಮಗಾರಿಗಳು ಸರಿಯಾಗಿ ನಡೆಯುತ್ತಿಲ್ಲ. ಆದ್ದರಿಂದ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರ ಕೈಗೊಂಡಿದ್ದೇನೆ' ಎಂದು ಹೇಳಿದ್ದಾರೆ.
ಈ ವಾರ್ಡ್‌ನಲ್ಲಿ ಹಿಂದೆ ಜೆಡಿಎಸ್‍ನ ಅಭ್ಯರ್ಥಿ ತಿಮ್ಮೇಗೌಡ ಅವರು ಜಯ ಸಾಧಿಸಿದ್ದರು. ಈ ಬಾರಿ ಬಿಜೆಪಿಯಿಂದ ಸವಿತಾ, ಕಾಂಗ್ರೆಸ್‌ನಿಂದ ಕೆ.ಎಂ.ಲಾವಣ್ಯ ಕಣಕ್ಕಿಳಿದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications