ದೇವೇಗೌಡರನ್ನು ಭೇಟಿ ಮಾಡಿದ ರಾಮಲಿಂಗಾ ರೆಡ್ಡಿ

Posted By: Gururaj
Subscribe to Oneindia Kannada
   Ramalinga Reddy met H D Devegowda on September 12th to discuss about BBMP Elections|Oneindia Kannada

   ಬೆಂಗಳೂರು, ಸೆಪ್ಟೆಂಬರ್ 12 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಮೈತ್ರಿ ಕುರಿತು ಚರ್ಚಿಸಲು ಸಚಿವ ರಾಮಲಿಂಗಾ ರೆಡ್ಡಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಈ ಭೇಟಿ ನಡೆದಿದೆ.

   ಮಂಗಳವಾರ ಬೆಳಗ್ಗೆ ಪದ್ಮನಾಭನಗರದಲ್ಲಿನ ದೇವೇಗೌಡರ ನಿವಾಸಕ್ಕೆ ರಾಮಲಿಂಗಾ ರೆಡ್ಡಿ ಭೇಟಿ ನೀಡಿದರು. ಉಭಯ ನಾಯಕರು ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

   ಬಿಬಿಎಂಪಿ ಮೈತ್ರಿ : ಎಚ್.ಡಿ.ಕುಮಾರಸ್ವಾಮಿ ಹೇಳುವುದೇನು?

   BBMP mayoral polls : Ramalinga Reddy meets HD Deve Gowda

   ಸೆ.28ಕ್ಕೆ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಆದ್ದರಿಂದ, ಜೆಡಿಎಸ್ ನಾಯಕರ ಜೊತೆ ಮಾತುಕತೆ ನಡೆಸುವಂತೆ ಸಿದ್ದರಾಮಯ್ಯ ಸಚಿವರಿಗೆ ಸೂಚನೆ ನೀಡಿದ್ದರು.

   ಬಿಬಿಎಂಪಿ ಮೇಯರ್ ಆಯ್ಕೆಗೆ ಸಿದ್ಧತೆ ಆರಂಭ, ಯಾರೊಂದಿಗೆ ಮೈತ್ರಿ?

   ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದೆ. ಮೇಯರ್ ಮತ್ತು ಉಪ ಮೇಯರ್ ಪಟ್ಟವನ್ನು ಎರಡೂ ಪಕ್ಷಗಳು ಹಂಚಿಕೊಂಡಿವೆ. ಆದರೆ, ಈ ಬಾರಿ ಜೆಡಿಎಸ್ ಮೇಯರ್ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದು, ಚುನಾವಣೆ ಕುತೂಹಲ ಮೂಡಿಸಿದೆ.

   ಶಾಸಕರು, ಬಿಬಿಎಂಪಿ ಸದಸ್ಯರ ಜೊತೆ ಭಾನುವಾರ ಸಭೆ ನಡೆಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, 'ಬಿಬಿಎಂಪಿಯಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭಾದಿತ ಎಂದು ಕಾಂಗ್ರೆಸ್ ನಾಯಕರು ತಿಳಿದುಕೊಂಡಿದ್ದರೆ ಅದು ತಪ್ಪು' ಎಂದು ಹೇಳಿಕೆ ನೀಡಿದ್ದರು.

   ಬಿಬಿಎಂಪಿಯಲ್ಲಿನ ಕಾಂಗ್ರೆಸ್‌ ಆಡಳಿತ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಕುಮಾರಸ್ವಾಮಿ, 'ಮೈತ್ರಿ ಬಗ್ಗೆ ಚರ್ಚೆ ನಡೆಸಲು ಯಾವ ಕಾಂಗ್ರೆಸ್ ನಾಯಕರು ತಮ್ಮನ್ನು ಭೇಟಿಮಾಡಿಲ್ಲ' ಎಂದು ಹೇಳಿದ್ದರು.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Minister Ramalinga Reddy met JDS supremo HD Deve Gowda on September 12 to discuss about alliance in BBMP. BBMP mayoral polls scheduled on September 28, 2017.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ