ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗರಿಗೆ ತಟ್ಟಲಿದೆ ಆಸ್ತಿ ತೆರಿಗೆ ಹೆಚ್ಚಳದ ಬಿಸಿ

|
Google Oneindia Kannada News

ಬೆಂಗಳೂರು, ಆ.16 : ಬೆಂಗಳೂರಿನ ಜನರ ಮೇಲೆ ಆಸ್ತಿ ತೆರಿಗೆ ಹೊರೆ ಹೊರಿಸಲು ಬಿಬಿಎಂಪಿ ನಿರ್ಧರಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ತಿಂಗಳ ಏಪ್ರಿಲ್‌ನಿಂದ ಇದು ಜಾರಿಗೆ ಬರುವ ಸಾಧ್ಯತೆ ಇದೆ.

ಬೃಹತ್ ಬೆಂಗಳೂರು ಮಹಾನರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹಸಿರು ನಿಶಾನೆ ತೋರಿಸಿದೆ. 2015ರಲ್ಲಿ ನಡೆಯುವ ಬಿಬಿಎಂಪಿ ಚುನಾವಣೆ ಬಳಿಕ ಪಾಲಿಕೆ ಆಸ್ತಿ ತೆರಿಗೆ ಹೆಚ್ಚಳ ಮಾಡಲು ನಿರ್ಧರಿಸಿದೆ.

bbmp

ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಗಳಿಗೆ ಶೇ.25, ವಸತಿ ಕಟ್ಟಡಗಳಿಗೆ ಶೇ.20ರಷ್ಟು ಆಸ್ತಿತೆರಿಗೆ ಹೆಚ್ಚಳ ಮಾಡಲು ಸರ್ಕಾರ ಸಮ್ಮತಿ ಸೂಚಿಸಿದೆ. ಆದರೆ, ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಇದಕ್ಕೆ ಅಂತಿಮ ಒಪ್ಪಿಗೆ ದೊರೆಯಬೇಕಾಗಿದೆ. ಅನೇಕ ಪಾಲಿಕೆ ಸದಸ್ಯರು ಸದ್ಯ ತೆರಿಗೆ ಹೆಚ್ಚಳ ಮಾಡುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಾಲಿಕೆಯ ಹಣಕಾಸು ಪರಿಸ್ಥಿತಿ ಬಗ್ಗೆ ಬೆಂಗಳೂರಿನ ಜನರಿಗೆ ಚೆನ್ನಾಗಿ ತಿಳಿದಿದೆ. ಆರ್ಥಿಕ ಮುಗ್ಗಟ್ಟಿನಿಂದ ಪಾರಾಗಲು ತೆರಿಗೆ ಹೆಚ್ಚಳದ ಅಸ್ತ್ರ ಪ್ರಯೋಗಿಸಲು ಬಿಬಿಎಂಪಿ ಮುಂದಾಗಿದೆ. ಏಪ್ರಿಲ್ 2015ರ ನಂತರ ಆಸ್ತಿ ತೆರಿಗೆ ಹೆಚ್ಚಾಗುವುದಂತೂ ಖಾತ್ರಿಯಾಗಿದೆ.[ಆಸ್ತಿ ತೆರಿಗೆ ಆನ್ ಲೈನ್ ಮೂಲಕ ಕಟ್ಟಿ]

ಆಸ್ತಿ ತೆರಿಗೆ ಹೆಚ್ಚಳ ಮಾಡುವ ಜೊತೆಗೆ ಪ್ರತಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆ ದರ ಪರಿಷ್ಕರಣೆ ಮಾಡುವಂತೆಯೂ ಸರ್ಕಾರ ಸೂಚಿಸಿದೆ. ಈ ನಿರ್ಧಾರದಿಂದಾಗಿ ಬಿಬಿಎಂಪಿ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 850 ರಿಂದ 1000 ಕೋಟಿ ಆದಾಯ ಸಂಗ್ರಹವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಕಳೆದ ಐದು ವರ್ಷಗಳಲ್ಲಿ ಬಿಬಿಎಂಪಿ ಅಧಿಕಾರಿಗಳು ಸಮರ್ಪಕವಾಗಿ ಆಸ್ತಿ ತೆರಿಗೆ ವಸೂಲಿ ಮಾಡುವಲ್ಲಿ ವಿಫಲರಾಗಿದ್ದಾರೆ ಎಂಬ ಮಾತುಗಳು ಇವೆ. 2014-15ನೇ ಸಾಲಿನಲ್ಲಿ 2,500 ಕೋಟಿ ರೂ.ಗಳ ಆಸ್ತಿ ತೆರಿಗೆ ಗುರಿ ಹೊಂದಲಾಗಿತ್ತು. ಆದರೆ, ಸಂಗ್ರಹವಾಗಿರುವುದು ಕೇವಲ 1120 ಕೋಟಿ ರೂ. ಮಾತ್ರ ಎಂಬ ಮಾಹಿತಿ ಲಭ್ಯವಾಗಿದೆ.

ಏಪ್ರಿಲ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದ್ದು ಪಾಲಿಕೆ ಆಡಳಿತ ಬದಲಾವಣೆಯಾಗಲಿದೆ. ಹೊಸದಾಗಿ ಅಧಿಕಾರಕ್ಕೆ ಬಂದ ಸರ್ಕಾರ ಆಸ್ತಿ ತೆರಿಗೆ ಹೆಚ್ಚಳ ಮಾಡಲಿದೆ. [ಫ್ಲೆಕ್ಸ್, ಬ್ಯಾನರ್ ಹಾಕಲು ಬಂತು ಮಾರ್ಗಸೂಚಿ]

English summary
Bruhat Bangalore Mahanagara Palike (BBMP) set to raise property taxes by a massive 20 per cent for residential and 25 per cent for commercial buildings. It may come to effect form 2015 April.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X