ಟೆಂಡರ್‌ ಶ್ಯೂರ್ ಯೋಜನೆಯಡಿ ಎಂ.ಜಿ.ರಸ್ತೆ ಅಭಿವೃದ್ಧಿ

Posted By:
Subscribe to Oneindia Kannada

ಬೆಂಗಳೂರು, ಜುಲೈ 20 : ಬಿಬಿಎಂಪಿ ಮೂರನೇ ಹಂತದಲ್ಲಿ ಟೆಂಡರ್‌ ಶ್ಯೂರ್‌ ಯೋಜನೆಯಡಿ ಅಭಿವೃದ್ಧಿ ಪಡಿಸುವ ರಸ್ತೆಗಳನ್ನು ಅಂತಿಮಗೊಳಿಸಿದೆ. ಎಂ.ಜಿ.ರಸ್ತೆ ಸೇರಿದಂತೆ ನಗರದ 25 ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ.

ಟೆಂಡರ್‌ ಶ್ಯೂರ್‌ ಯೋಜನೆಯ 3ನೇ ಹಂತದಲ್ಲಿ 103.60 ಕಿ.ಮೀ. ಉದ್ದದ 50 ರಸ್ತೆಗಳನ್ನು 960 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ. ಸದ್ಯ, 36.78 ಕಿ.ಮೀ ಉದ್ದದ 25 ರಸ್ತೆಗಳನ್ನು ಅಭಿವೃದ್ಧಿಗೊಳಿಸಲು ಯೋಜನೆ ಸಿದ್ಧಪಡಿಸಲಾಗಿದೆ.[ಟೆಂಡರ್ ಶ್ಯೂರ್ ರಸ್ತೆಯ ವಿಶೇಷತೆಗಳೇನು?]

BBMP preparing the ground for 3rd phase of Tender SURE roads

ಕಾಮಗಾರಿಯನ್ನು ಆರಂಭಿಸುವ ಮುನ್ನ ರಸ್ತೆಗಳಲ್ಲಿ ಸಮೀಕ್ಷೆ ನಡೆಸಲಾಗುತ್ತದೆ. ಸಂಚಾರ ದಟ್ಟಣೆ, ನಡೆಸಬೇಕಾದ ಕಾಮಗಾರಿಗಳ ಬಗ್ಗೆ ವರದಿ ತಯಾರಿಸಿ, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಮೊದಲ ಹಂತದಲ್ಲಿ ನಗರದಲ್ಲಿ 7 ರಸ್ತೆಗಳನ್ನು ಟೆಂಡರ್‌ ಶ್ಯೂರ್‌ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗಿದೆ.[ಸುಲ್ತಾನ್ ಪಾಳ್ಯ ರಸ್ತೆಯಲ್ಲಿ ಈಜಾಡಿದ ಮೊಸಳೆ!]

ಯಾವ-ಯಾವ ರಸ್ತೆಗಳು? : ಎಂ.ಜಿ.ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಕಸ್ತೂರಬಾ ರಸ್ತೆ, ವಿಕ್ಟೋರಿಯಾ ರಸ್ತೆ, ಅವೆನ್ಯೂ ರಸ್ತೆ, ಇನ್‌ಫೆಂಟ್ರಿ ರಸ್ತೆ, ಸಿಎಂಎಚ್‌ ರಸ್ತೆ, ಮಿಲ್ಲರ್ಸ್‌ ರಸ್ತೆ, ಬೌರಿಂಗ್ ಆಸ್ಪತ್ರೆ ರಸ್ತೆ, ಡಿಕೆನ್ಸ್‌ನ್ ರಸ್ತೆ, ಸೆಂಟ್ರಲ್ ಸ್ಟ್ರೀಟ್, ರಾಜರಾಮ್ ಮೋಹನ್ ರಾಯ್ ರಸ್ತೆ, ಕ್ವೀನ್ಸ್ ರಸ್ತೆ, ರಾಜಭವನ ರಸ್ತೆ ಮುಂತಾದವು.

ಏನಿದು ಟೆಂಡರ್ ಶ್ಯೂರ್? : ಟೆಂಡರ್ ಶ್ಯೂರ್ ಯೋಜನೆಯಡಿ ಮತ್ತೆ-ಮತ್ತೆ ಅಗೆಯಲು ಅವಕಾಶ ಇಲ್ಲದಂತೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಪಾದಚಾರಿಗಳಿಗೆ ಸಮರ್ಪಕವಾದ ಫುಟ್‌ಪಾತ್‌ ಸೌಲಭ್ಯ, ಸೈಕಲ್‌ಗೆ ಪ್ರತ್ಯೇಕ ಟ್ರಾಕ್, ದೊಡ್ಡ ವಾಹನ, ಮಧ್ಯಮ ಗಾತ್ರದ ವಾಹನ ಮತ್ತು ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಲೇನ್‌ಗಳು, ಮಾರ್ಗ ಮಧ್ಯದಲ್ಲಿ ವಾಹನಗಳು ರಸ್ತೆಗೆ ನುಗ್ಗದಂತೆ ತಡೆಗೋಡೆ ಇವು ಟೆಂಡರ್ ಶ್ಯೂರ್ ರಸ್ತೆಗಳ ವಿಶೇಷತೆಗಳು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bruhat Bengaluru Mahanagara Palike (BBMP) has finally started preparing the ground for the third phase of Tender SURE roads. The good news is that the city's prime MG Road is also part of it.
Please Wait while comments are loading...