ತಳ್ಳಾಟ-ನೂಕಾಟ: ರಣಾಂಗಣವಾದ ಬಿಬಿಎಂಪಿ ಕೌನ್ಸಿಲ್ ಸಭೆ

Subscribe to Oneindia Kannada

ಬೆಂಗಳೂರು.ಏಪ್ರಿಲ್, 29: ಶುಕ್ರವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆವರಣ ರಣಾಂಗಣವಾಗಿ ಮಾರ್ಪಟ್ಟಿತ್ತು. ಬಿಬಿಎಂಪಿ ಕೌನ್ಸಿಲ್‌ ಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಬಿಜೆಪಿ ಸದಸ್ಯರ ನಡುವೆ ತಳ್ಳಾಟ ನಡೆದಿದ್ದು ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ ಅಸ್ವಸ್ಥರಾದ ಪ್ರಸಂಗವೂ ನಡೆಯಿತು.

ಬಿಬಿಎಂಪಿ ಆಸ್ತಿ ತೆರಿಗೆ ಏರಿಕೆ ವಿರೋಧಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ ಸದಸ್ಯರನ್ನು ಕಾಂಗ್ರೆಸ್‌ ಸದಸ್ಯರು ಅಡ್ಡಗಟ್ಟಿದಾಗ ನೂಕಾಟ ಆರಂಭವಾಯಿತು. ಉಭಯ ಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಗೊಂದಲದ ವಾತಾವರಣ ನಿರ್ಮಾಣವಾಯಿತು. [ಬಿಬಿಎಂಪಿ ಆಸ್ತಿ ತೆರಿಗೆ ಪಾವತಿ ಮಾಡುವುದು ಹೇಗೆ?]

bbmp

ಮೇಯರ್ ಅವರನ್ನು ತಡೆದ್ದಕ್ಕೆ ನಾವು ವಿರೋಧ ವ್ಯಕ್ತಪಡಿಸಿದೆವು ಎಂದು ಕಾಂಗ್ರೆಸ್ ಸದಸ್ಯರು ಹೇಳಿದ್ದಾರೆ. ಬಿಜೆಪಿಯ ಪದ್ಮನಾಭ ರೆಡ್ಡಿ, ಉಮೇಶ್ ಶೆಟ್ಟಿ ಮತ್ತು ರಮೇಶ್ ಕುಮಾರ್ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದ್ದು ಗೊಂದಲ ಬಗೆಹರಿಯದ ಕಾರಣ ಸಭೆಯನ್ನು ಮುಂದೂಡಲಾಗಿದೆ.[ಆನ್ ಲೈನ್ ಮೂಲಕ ಬಿಬಿಎಂಪಿ ಆಸ್ತಿ ತೆರಿಗೆ ಪಾವತಿಸಿ]

ಆಸ್ತಿ ತೆರಿಗೆ ಏರಿಕೆಯನ್ನು ವಿರೋಧಿಸಿ ಬಿಜೆಪಿ ಮಹಾನಗರದಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಮೇ 3 ರಂದು ಮಲ್ಲೇಶ್ವರಂ ಮೈದಾನದಿಂದ ಮೆರವಣಿಗೆ ಹೊರಟು ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕುತ್ತೇನೆ ಎಂದು ಹೇಳಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Major clash witnessed in Bruhat Bengaluru Mahanagara Palike on April 29, morning between BJP and Congress members.
Please Wait while comments are loading...