ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರು ಕಪ್ಪುಪಟ್ಟಿಗೆ

Posted By: Nayana
Subscribe to Oneindia Kannada

ಬೆಂಗಳೂರು, ಫೆಬ್ರವರಿ 09 : ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವ ಮೂಲಕ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಎಂ. ಶಿವರಾಜ್ ಎಚ್ಚರಿಸಿದ್ದಾರೆ.

ಈ ಸಾಲಿನ ಮೇಯರ್ ಅವಧಿಯಲ್ಲಾಗುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರದ ಅನುದಾನ ಹಾಗೂ ಬಿಬಿಎಂಪಿ ಆದಾಯದ ಮೂಲಕ 7 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಕಾಮಗಾರಿ ನಡೆಸಲಾಗುತ್ತದೆ. ವಿಧಾನಸಭಾ ಚುನಾವಣೆ ಘೋಷಣೆ ಆಗುವುದರೊಳಗೆ ಸಾಧ್ಯವಾದ್ಷಟು ಕಾಮಗಾರಿಗಳನ್ನು ಪೂರ್ಣಗೊಳಸುವಂತೆ ತಿಳಿಸಲಾಗಿದೆ ಎಂದರು.

BBMP warns contractors black listed

ಏರ್ ಆಂಬುಲೆನ್ಸ್: ಸಂಪತ್ ರಾಜ್ ಮೇಯರ್ ಆದ ನಂತರ ಮಹಿಳೆಯರಿಗಾಗಿ ವಾಹನ ನಿಲುಗಡೆಯಲ್ಲಿ ಸ್ಥಳ ನಿಗದಿ, ಕೌನ್ಸಿಲ್ ಸಭೆಯಲ್ಲಿ ಮಹಿಳಾ ಸದಸ್ಯರಿಗೆ ಮಾತನಾಡಲು ಅವಕಾಶ, ಪಿಂಕ್ ಆಟೋ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ತುರ್ತು ಸಮಯದಲ್ಲಿ ಪ್ರಾಣಾಪಾಯದಲ್ಲಿರುವ ರೋಗಿಗಳನ್ನು ರಕ್ಷಿಸಲು ಏರ್ ಆಂಬುಲೆನ್ಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BBMP rolling party leader M.shivaraj warned that contractors who taken works should complete within given time otherwise should face the legal action. He told reportrs that around Rs 7000 crore of development, works hass been taken out in the city.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ