ಬಿಬಿಎಂಪಿ ವೆಬ್‌ಸೈಟ್‌ನ ಹೊಸ ವಿನ್ಯಾಸ ನೋಡಿ
ಬೆಂಗಳೂರು, ಜುಲೈ 10 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವೆಬ್‌ಸೈಟ್‌ನಲ್ಲಿ ಯಾವ ಮಾಹಿತಿ ಎಲ್ಲಿ ಸಿಗುತ್ತದೆ? ಎಂದು ಹುಡುಕುವುದು ಸಾಹಸದ ಕೆಲಸವಾಗಿತ್ತು. ಆದರೆ, ಈಗ ಬಿಬಿಎಂಪಿ ತನ್ನ ವೆಬ್‌ಸೈಟ್‌ಗೆ ಹೊಸ ಸ್ವರೂಪ ಕೊಟ್ಟಿದೆ. ಅಗತ್ಯ ಮಾಹಿತಿ ಸುಲಭವಾಗಿ ಸಿಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ.
ವೆಬ್‌ಸೈಟ್ ನವೀಕರಣ ಕಾರ್ಯವನ್ನು ಈಗ ಆರಂಭಿಸಲಾಗಿದೆ. ಟೆಂಡರ್, ಬಿಲ್ ಪಾವತಿ, ಮತದಾರರ ಪಟ್ಟಿ ಸೇರಿದಂತೆ ವಿವಿಧ ವಿಷಯಗಳನ್ನು ಸದ್ಯದಲ್ಲೇ ಅಳವಡಿಸಲಾಗುತ್ತದೆ. ಇನ್ನೊಂದು ವಾರದಲ್ಲಿ ನೂತನ ಸ್ವರೂಪದ ವೆಬ್ ಸೈಟ್ ಸಿದ್ಧವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. [ಬಿಬಿಎಂಪಿ ವೆಬ್ ಸೈಟ್ ಲಿಂಕ್]

ಹಿಂದಿನ ವೆಬ್‌ಸೈಟ್ ಮುಖಪುಟದಲ್ಲಿ ನೂರಾರು ಮಾಹಿತಿಗಳು ತುಂಬಿಕೊಂಡಿದ್ದವು. ಯಾವ ಮಾಹಿತಿ ಎಲ್ಲಿದೆ? ಎಂದು ಹುಡುಕುವುದು ಕಷ್ಟವಾಗಿತ್ತು. ಆದ್ದರಿಂದ, ವೆಬ್‌ಸೈಟ್ ವಿನ್ಯಾಸವನ್ನು ಬದಲಾವಣೆ ಮಾಡಲು ಬಿಬಿಎಂಪಿ ನಿರ್ಧರಿಸಿತ್ತು. ಅದರ ಕಾರ್ಯಗಳಿಗೆ ಈಗ ಚಾಲನೆ ಸಿಕ್ಕಿದೆ.
ಹೊಸ ವಿನ್ಯಾಸ ಹೇಗಿದೆ? : ಸದ್ಯ ಸಿದ್ಧವಾಗಿರುವ ನೂತನ ವಿನ್ಯಾಸದಲ್ಲಿ ಬಿಬಿಎಂಪಿ ಸೇವೆ, ಕಾಲ್ ಸೆಂಟರ್ ನಂಬರ್, ವಿವಿಧ ಇಲಾಖೆಗಳ ಮಾಹಿತಿ, ಪಾಲಿಕೆ ಮಾಹಿತಿ ಹೀಗೆ ವಿವಿಧ ಪೋಲ್ಡರ್‌ಗಳನ್ನು ತೆರಯಲಾಗಿದೆ. ಇದರಲ್ಲಿ ಜನರು ತಮಗೆ ಬೇಕಾದ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಮಾಹಿತಿಗಳು ಲಭ್ಯವಿದೆ. ಬಿಬಿಎಂಪಿಯು ಹೊರಡಿಸುವ ಸುತ್ತೋಲೆ, ಪತ್ರಿಕಾ ಪ್ರಕಟಣೆಗಳು ಒಂದು ಕಡೆ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ. ಇನ್ನೊಂದು ವಾರದಲ್ಲಿ ಎಲ್ಲಾ ಮಾಹಿತಿಯನ್ನು ಇದಕ್ಕೆ ಸೇರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನರು ಸಲಹೆ ನೀಡಬಹುದು : ಈ ನೂತನ ವಿನ್ಯಾಸದ ಬಗ್ಗೆ ಜನರು ಸಲಹೆ ನೀಡಬಹುದಾಗಿದೆ. ಜನರು ನೀಡುವ ಸಲಹೆಗಳನ್ನು ಪರಿಗಣಿಸಿ ಮತ್ತೆ ಕೆಲವೊಂದು ಬದಲಾವಣೆಗಳನ್ನು ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ನಿಮ್ಮ ಸಲಹೆಗಳನ್ನು ತಿಳಿಸಲು ವಿಳಾಸ [email protected]
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು








Click it and Unblock the Notifications