ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಪರಿಸರ ಮಾಲಿನ್ಯ ತಡೆಗೆ ಎಲೆಕ್ಟ್ರಿಕ್ ಬೈಕ್!

|
Google Oneindia Kannada News

ಬೆಂಗಳೂರು, ಜನವರಿ 17: ನಗರದಲ್ಲಿ ಪರಿಸರ ಮಾಲಿನ್ಯ ತಡೆಗೆ ಅನೇಕ ಕಸರತ್ತುಗಳನ್ನು ನಡೆಸುತ್ತಿರುವ ಬಿಬಿಎಂಪಿ ಇದೀಗ ಎಲೆಕ್ಟ್ರಿಕ್ ಬೈಕ್ ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ.

ಬ್ಯಾಟರಿ ಚಾಲಿತ ವಾಹನಗಳ ಓಡಾಟಕ್ಕೆ ಉತ್ತೇಜನ ನೀಡುವ ಸಲುವಾಗಿ ರಾಜ್ಯ ಸರ್ಕಾರ ಕರ್ನಾಟಕ ಎಲೆಕ್ಟ್ರಿಕ್ ವೆಹಿಕಲ್ ಅಂಡ್ ಎನರ್ಜಿ ಸ್ಟೋರೇಜ್ ಪಾಲಿಸಿ-2017ನನಿಯಮ ರೂಪಿಸಿದೆ. ಅದರಂತೆ ಬಿಎಂಟಿಸಿ ಈಗಾಗಲೇ ಎಲೆಕ್ಟ್ರಿಕ್ ಬಸ್ ಗಳ ಸೇವೆ ಆರಂಭಿಸಲು ಮುಂದಾಗಿದೆ.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ 'ಮೆಟ್ರೋ ಬೈಕ್' ಸೇವೆ!ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ 'ಮೆಟ್ರೋ ಬೈಕ್' ಸೇವೆ!

ಅದರ ಬೆನ್ನಲ್ಲೇ ಬಿಬಿಎಂಪಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬಳಕೆ ಹೆಚ್ಚಿಸಲು ಯೋಜನೆ ರೂಪಿಸಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಸಾರ್ವಜನಿಕರಿಗೆ ವಾಹನ ಬಾಡಿಗೆಗೆ ದೊರೆಯುವಂತೆ ಮಾಡಲು ನಿರ್ಧರಿಸಲಾಗಿದೆ. ನಿಲ್ದಾಣಗಳಲ್ಲಿ ವಾಹನಗಳನ್ನು ವಿದ್ಯುತ್ ಮೂಲಕ ರೀಚಾರ್ಜ್ ಮಾಡಲು ಪ್ಲಗ್ ಹಾಗೂ ಬ್ಯಾಟರಿಗಳನ್ನು ಅಳವಡಿಸಲಾಗುತ್ತದೆ.

 ಬಿಎಂಆರ್ ಸಿಎಲ್ ಅಧಿಕಾರಿಗಳೊಂದಿಗೆ ಸಭೆ

ಬಿಎಂಆರ್ ಸಿಎಲ್ ಅಧಿಕಾರಿಗಳೊಂದಿಗೆ ಸಭೆ

ಬಿಬಿಎಂಪಿ ಚಿಂತಿಸುತ್ತಿರುವಂತೆ ನಮ್ಮ ಮೆಟ್ರೋ ಸಹಯೋಗದಲ್ಲಿ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಶೀಘ್ರದಲ್ಲಿ ಬಿಎಂಆರ್ ಸಿಎಲ್ ಅಧಿಕಾರಿಗಳ ಜತೆಗೆ ಮಾತುಕತೆ ನಡೆಯಲಿದೆ. ಮೆಟ್ರೋ ನಿಲ್ದಾಣಗಳಲ್ಲಿ ಸೈಕಲ್ ಸ್ಟ್ಯಾಂಡ್ ನಂತೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ನಿಲ್ದಾಣ ಮಾಡುವ ಬಗ್ಗೆ ಚರ್ಚಿಸಲಾಗುತ್ತಿದೆ.

 ಮೆಟ್ರೋ ನಿಲ್ದಾಣದಲ್ಲಿ 25 ಎಲೆಕ್ಟ್ರಿಕ್ ಬೈಕ್ ಗಳು

ಮೆಟ್ರೋ ನಿಲ್ದಾಣದಲ್ಲಿ 25 ಎಲೆಕ್ಟ್ರಿಕ್ ಬೈಕ್ ಗಳು

ಯೋಜನೆಗೆ ಸಂಬಂಧಿಸಿದಂತೆ ಮೇಯರ್ ಸಂಪತ್ ರಾಜ್ ವಿಶೇಷ ಆಸಕ್ತಿವಹಿಸಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ, ನಮ್ಮ ಮೆಟ್ರೋದ 40 ನಿಲ್ದಾಣಗಳಲ್ಲೂ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ನಿಲ್ದಾಣ ನಿರ್ಮಿಸುವುದು ಹಾಗೂ ಅಲ್ಲಿ ಬಾಡಿಗೆಗೆ ದೊರೆಯುವಂತೆ ಮಾಡಲಾಗುತ್ತದೆ ಎನ್ನಲಾಗಿದೆ.

 ಬಿಬಿಎಂಪಿ ಬಜೆಟ್ ನಲ್ಲಿ ಹಣ ಮೀಸಲು

ಬಿಬಿಎಂಪಿ ಬಜೆಟ್ ನಲ್ಲಿ ಹಣ ಮೀಸಲು

ಸದ್ಯ ಯೋಜನೆ ಆರಂಭಿಕ ಹಂತದಲ್ಲಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದ ನಂತರ ಅನುಷ್ಠಾನದ ಬಗೆಗಿನ ರೂಪುರೇಷೆ ಸಿದ್ಧಪಡಿಸಲಾಗುತ್ತದೆ. ಅದಕ್ಕಾಗಿ ೨೦೧೮-೧೯ನೇ ಸಾಲಿನ ಬಿಬಿಎಂಪಿ ಬಜೆಟ್ ನಲ್ಲಿ ಹಣ ಮೀಸಲಿರಿಸಲಾಗುತ್ತದೆ.

 ಎಲೆಕ್ಟ್ರಿಕ್ ಬೈಕ್ ಯೋಜನೆ ಚೀನಾ ಮಾದರಿ

ಎಲೆಕ್ಟ್ರಿಕ್ ಬೈಕ್ ಯೋಜನೆ ಚೀನಾ ಮಾದರಿ

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಯೋಜನೆ ಜಾರಿಗೆ ಚೀನಾ ಮಾದರಿಯಾಗಿದೆ. ಏಕೆಂದರೆ ಇತ್ತೀಚಿಗಷ್ಟೇ ಮೇಯರ್ ಸಂಪತ್ ರಾಜ್ ಚೀನಾದ ಸನ್ಯಾ ನಗರದಲ್ಲಿ ನಡೆದ ಕೈಗಾರಿಕೆ ಮತ್ತು ವಾಣಿಜ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆ ವೇಳೆ ಚೀನಾದಲ್ಲಿ ಎಲೆ್ಕಟ್ರಿಕ್ ದ್ವಿಚಕ್ರ ವಾಹನ ಬಳಕೆ ಹೆಚ್ಚಿರುವುದನ್ನು ವೀಕ್ಷಿಸಿದ್ದರು.

English summary
BBMP is thinking to introduce battery enabled bike service in Namma metro station collaboration with BMRCL. The authority has been claimed that this initiation is part of environment conservation move.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X