ಬಿಡಿಎ: ನಿವೇಶನಕ್ಕೆ ಅರ್ಜಿ ಸಲ್ಲಿಸಲು ಫೆ.23 ರವರೆಗೆ ಕಾಲಾವಕಾಶ

Posted By: Nayana
Subscribe to Oneindia Kannada

ಬೆಂಗಳೂರು, ಫೆಬ್ರವರಿ 10 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಾಡಪ್ರಭು ಕೆಂಪೇಗೌಡ ಬಡಾವಣೆಯಯಲ್ಲಿ ಎರಡನೇ ಹಂತದಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ಪ್ರಾರಂಭಿಸಿತ್ತು. ಅದಕ್ಕೆ ಉತ್ತಮ ಪ್ರತಿಕ್ರಿಯೆ ಬಾರದ ಕಾರಣ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಫೆಬ್ರವರಿ 23 ರವರೆಗೆ ವಿಸ್ತರಿಸಿದೆ.

ಫೆಬ್ರವರಿ ೮ರವರೆಗೆ 15,650 ಅರ್ಜಿಗಳ ಮಾರಾಟವಾಗಿದ್ದವು. ಅರ್ಜಿ ನಮೂನೆಗಳನ್ನು ಪಡೆದಿರುವ ಅನೇಕರು ಪ್ರಾರಂಭಿಕ ಠೇವಣಿ ಪಾವತಿಗೆ ಇನ್ನಷ್ಟು ಕಾಲಾವಕಾಶ ಕೋರಿದ್ದರು. ಹಾಗಾಗಿ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಲು ನಿರ್ಧರಿಸಿರುವುದಾಗಿ ಬಿಡಿಎ ಆಯುಕ್ತ ರಾಕೇಶ್ ಸಿಂಗ್ ತಿಳಿಸಿದ್ದಾರೆ.

BDA Extends date for Submission of Flats Application upto Feb 23

ಕೆಂಪೇಗೌಡ ಬಡಾವಣೆ ಸೈಟ್: ವಿಕಲಚೇತನರಿಗೆ ಕೋಟಾ ಹೆಚ್ಚಳ

ನಿವೇಶನಕ್ಕಾಗಿ ಅರ್ಜಿ ಸಲ್ಲಿಸಲು2017 ರ ಡಿಸೆಂಬರ್ 29 ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಫೆಬ್ರವರಿ 9 ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಈ ಬಡಾವಣೆಯಲ್ಲಿ ಮೊದಲ ಹಂತದಲ್ಲಿ 5,000 ನಿವೇಶನ ಹಂಚಿಕೆಗೆ ವಿವಿಧ ಬ್ಯಾಂಕ್‌ಗಳಲ್ಲಿ ಒಟ್ಟು 53,462 ಅರ್ಜಿಗಳು ಮಾರಾಟವಾಗಿದ್ದವು. 31,349 ಮಂದಿ ಪ್ರಾರಂಭಿಕ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಿದ್ದರು. ನಿವೇಶನ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ 495 ಮಂದಿ ನಿವೇಶನ ಹಿಂತಿರುಗಿಸಿದ್ದರು

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Following less response for the second phase to site allocation of Nadaprabhu Kempegowda layout, BDA has extended date to February 23 for application filling.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ