'ಸಾರ್ವಜನಿಕ ಕಣ್ಣು' ಅಂದ್ರೇನು ಗೊತ್ತಾ ನಿಮಗೆ?
ಬೆಂಗಳೂರಿನ ರಸ್ತೆಯಲ್ಲಿ ಸಂಚರಿಸುತ್ತಿದ್ದಿರಿ. ನಿಮ್ಮ ಕಣ್ಣ ಮುಂದೆಯೇ ಯಾರೋ ಒಬ್ಬರು ಸಂಚಾರ ನಿಯಮವನ್ನು ಉಲ್ಲಂಘಿಸಿದ್ದಾರೆ. ದುರದೃಷ್ಟಕ್ಕೆ ಅಲ್ಲಿ ಯಾರೂ ಟ್ರಾಫಿಕ್ ಪೊಲೀಸ್ ಇಲ್ಲವೆಂದು ನೀವು ಸುಮ್ಮನಾಗಬೇಕಿಲ್ಲ. ನೀವೇ ಸವಾರರ ವಿರುದ್ಧ ಕಾರ್ಯಾಚರಣೆ ನಡೆಸಬಹುದು.
ಹೌದು. ಎಲ್ಲಾದರೂ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸಿದ್ದು, ಕಂಡು ಬಂದಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್, ಕ್ಯಾಮರಾಗಳಲ್ಲಿ ಅದರ ದೃಶ್ಯ ಗಳನ್ನು ಸೆರೆ ಹಿಡಿದು ಬೆಂಗಳೂರು ನಗರ ಸಂಚಾರ ಪೊಲೀಸರ ವೆಬ್‌ಸೈಟ್‌ಗೆ ರವಾನಿಸಿದರೆ ಸಾಕು, ಪೊಲೀಸರು ಅದರ ಆಧಾರ ಮೇಲೆ ವಾಹನ ಸವಾರರಿಗೆ ನೋಟಿಸ್ ಕಳುಹಿಸುವ ಮೂಲಕ ದಂಡ ವಸೂಲಿ ಮಾಡುತ್ತಿದ್ದಾರೆ.
ಬೆಂಗಳೂರಿನ ಸಂಚಾರ ಪೊಲೀಸರು ಎರಡು ವರ್ಷಗಳ ಹಿಂದೆ ಆರಂಭಿಸಿರುವ ಸಾರ್ವಜನಿಕ ಕಣ್ಣು(ಪಬ್ಲಿಕ್ ಐ) ಯಶಸ್ವಿಯಾಗಿದ್ದು ಇದೀಗ ಮೈಸೂರಿನಲ್ಲೂ ಆರಂಭಗೊಂಡಿದೆ.

ದೂರು ದಾಖಲಿಸುವುದು ಹೇಗೆ?
ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ಫೋಟೋ ತೆಗೆಯುವಾಗ ವಾಹನದ ನೋಂದಣಿ ಸಂಖ್ಯೆ ಸ್ಪಷ್ಟವಾಗಿ ಕಾಣುವಂತೆ ಕ್ಲಿಕ್ ಮಾಡಬೇಕು. ಬಳಿಕ ಸಂಚಾರ ಪೊಲೀಸರ ವೆಬ್‌ಸೈಟ್‌ಗೆ ತೆರಳಿ ಪಬ್ಲಿಕ್ ಐ ವಿಭಾಗಕ್ಕೆ ಹೋಗಿ ನಿಯಮ ಉಲ್ಲಂಘಿಸಿದ ವಾಹನ ಸಂಖ್ಯೆ, ಸಂಚಾರ ಉಲ್ಲಂಘನೆಯ ಮಾದರಿ, ದಿನಾಂಕ, ಸಮಯ, ಸ್ಥಳವನ್ನು ನಮೂದಿಸಿ ತೆಗೆದ ಫೋಟೋವನ್ನು ಅಪ್‌ಲೋಡ್ ಮಾಡಿದರೆ ಆಯಿತು. ಸಂಚಾರ ಪೊಲೀಸರು ಈ ಮಾಹಿತಿಯ ಆಧಾರ ಮೇಲೆ ಸವಾರರ ಮೇಲೆ ದಂಡ ವಿಧಿಸುತ್ತಾರೆ. ಬೆಂಗಳೂರು ಸಂಚಾರ ಪೊಲೀಸರ ಆಂಡ್ರಾಯ್ಡ್ ಆಪ್ ಡೌನ್‌ಲೋಡ್ ಮಾಡುವ ಮೂಲಕವು ಸಾರ್ವಜನಿಕರು ದೂರು ದಾಖಲಿಸಬಹುದು.
ಪಬ್ಲಿಕ್ ಐ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ:www.bangaloretrafficpolice.gov.in
ಆಂಡ್ರಾಯ್ಡ್ ಆಪ್ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ: play.google.com/store/
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications