ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಶೀಘ್ರವೇ 2ನೇ ರನ್ ವೇ ಆರಂಭ
ಬೆಂಗಳೂರು, ಜನವರಿ 11 : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲೇ 2ನೇ ರನ್ ವೇ ಆರಂಭವಾಗಲಿದೆ. ದಕ್ಷಿಣ ಭಾರತದಲ್ಲಿಯೇ ಎರಡು ರನ್ ವೇ ಹೊಂದಿರುವ ವಿಮಾನ ನಿಲ್ದಾಣ ಎಂಬ ಕೀರ್ತಿ ಬೆಂಗಳೂರಿನ ಮುಡಿಗೇರಲಿದೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2ನೇ ರನ್ ವೇ ನಿರ್ಮಾಣ ಕಾರ್ಯ ಸೆಪ್ಟೆಂಬರ್ 2019ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಅಕ್ಟೋಬರ್ 1ರಿಂದ ನೂತನ ರನ್ ವೇನಲ್ಲಿ ವಿಮಾನಗಳ ಹಾರಾಟ ಆರಂಭವಾಗುವ ನಿರೀಕ್ಷೆ ಇದೆ.
ಹೊಸ ರನ್ ವೇ ನಿರ್ಮಾಣಗೊಂಡ ಬಳಿಕ ಮಂಜಿನ ಕಾರಣದಿಂದಾಗಿ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಸ್ಥಗಿತಗೊಳ್ಳುವುದಿಲ್ಲ. ಅಂತಹ ಅತ್ಯಾಧುನಿಕ ವ್ಯವಸ್ಥೆಯನ್ನು ರನ್ ವೇನಲ್ಲಿ ಮಾಡಲಾಗಿದೆ.

ಎರಡು ಹಂತದಲ್ಲಿ 2ನೇ ರನ್ ವೇಯನ್ನು ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ 25 ಮಿಲಿಯನ್ ಪ್ಯಾಸೇಂಜರ್ ಕೆಪಾಸಿಟಿ ಹೊಂದಿರುತ್ತದೆ, 2ನೇ ಹಂತದ ಮಾರ್ಗ 4 ಕಿ.ಮೀ. ರನ್ ವೇ ನಿರ್ಮಾಣ ಮಾಡಲಾಗುತ್ತದೆ.
ನೂತನ ರನ್ ವೇ ಪರಿಸರ ಸ್ನೇಹಿಯಾಗಿದೆ. 'ಸಿಟಿ ಆಫ್ ಗಾರ್ಡನ್' ಎಂಬ ಪರಿಕಲ್ಪನೆಯಲ್ಲಿ ರನ್ ವೇಯನ್ನು ನಿರ್ಮಾಣ ಮಾಡಲಾಗಿದೆ. ಟರ್ಮಿನಲ್ ಕಟ್ಟಡ ಹಸಿರು ಹೊದಿಕೆಯನ್ನು ಒಳಗೊಂಡಿದೆ.
ನೂತನ ರನ್ ವೇಯನ್ನು 13,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಶೀಘ್ರದಲ್ಲಿಯೇ ವಿಮಾನ ನಿಲ್ದಾಣಕ್ಕೆ ನಮ್ಮ ಮೆಟ್ರೋ ಸಂಪರ್ಕವನ್ನು ಕಲ್ಪಿಸಲಾಗುತ್ತದೆ.
ವೇಗವಾಗಿ ಅಭಿವೃದ್ಧಿಯಾಗುತ್ತಿರುವ ವಿಮಾನ ನಿಲ್ದಾಣಗಳಲ್ಲಿ ಬೆಂಗಳೂರಿನ ವಿಮಾನ ನಿಲ್ದಾಣ 2ನೇ ಸ್ಥಾನದಲ್ಲಿದೆ. 2020ರ ವೇಳೆಗೆ ದೇಶದ 3ನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗುವ ನಿರೀಕ್ಷೆ ಇದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications