ಬಿಎಂಟಿಸಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

Posted By: Nayana
Subscribe to Oneindia Kannada

ಬೆಂಗಳೂರು, ಫೆಬ್ರವರಿ13 : ಬಿಎಂಟಿಸಿ ಬಸ್ ಗೆ ಸಿಲುಕಿ ಲ್ಯಾಬ್ ಟೆಕ್ನಿಷಿಯನ್ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ಸಿರ್ಸಿ ಸರ್ಕಲ್ ಬಳಿ ಮಂಗಳವಾರ ನಡೆದಿದೆ.

ದ್ವಿಚಕ್ರವಾಹನದಲ್ಲಿ ಫಾರೂಕ್ ಮತ್ತು ಪತ್ನಿ ಸುಮನ್ ಅವರು ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬಸ್ ಬೈಕ್ ಗೆ ಡಿಕ್ಕಿ ಹೊಡೆದು ಪರಿಣಾಮ ಫಾರೂಕ್ ಬಸ್ ನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಮನ್ ಅವರು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Bengaluru: BMTC bus knocks down bike, rider dies

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Lab technician Farukh was died after his motorcycle was knocked down by a BMTC bus at Sirsi circle near Mysuru road On Tuesday. His wife was injured and taken into the Hospital for the treatment.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ