ಬೆಂಗಳೂರು ನಗರಕ್ಕೊಂದು 10 ಪಥದ ರಸ್ತೆ

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 13 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಗರದಲ್ಲಿ 10 ಪಥಗಳ ರಸ್ತೆ ನಿರ್ಮಾಣಕ್ಕೆ ಮುಂದಾಗಿದೆ. ಮೈಸೂರು ರಸ್ತೆಯಿಂದ ಮಾಗಡಿ ರಸ್ತೆಗೆ ಈ ಹತ್ತು ಪಥಗಳ ರಸ್ತೆ ಸಂಪರ್ಕ ಕಲ್ಪಿಸಲಿದೆ.

ಬಿಡಿಎ 10 ಪಥಗಳ ರಸ್ತೆ ನಿರ್ಮಾಣದ ಪ್ರಸ್ತಾವನೆಯನ್ನು ತಾಂತ್ರಿಕ ಸಮಿತಿಗೆ ಕಳುಹಿಸಿತ್ತು. ರಸ್ತೆ ನಿರ್ಮಾಣಕ್ಕೆ ಸಮಿತಿ ಒಪ್ಪಿಗೆ ನೀಡಿದೆ ಮತ್ತು ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ಸೂಚಿಸಿದೆ. ಸುಮಾರು 10 ಕಿ.ಮೀ.ಗಳ ಈ ರಸ್ತೆ ಬಿಡಿಎ ನಿರ್ಮಾಣ ಮಾಡುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆ ಮೂಲಕ ಹಾದು ಹೋಗಲಿದೆ. [ಬೆಂಗಳೂರಲ್ಲಿ 25 ಸ್ಕೈವಾಕ್ ನಿರ್ಮಾಣ, ಎಲ್ಲೆಲ್ಲಿ?]

bda

ಬಿಡಿಎಯ ವಿಶೇಷ ಭೂಸ್ವಾಧೀನಾಧಿಕಾರಿ ಡಾ.ಸುಧಾ ಅವರು ಈ ಕುರಿತು ಮಾಹಿತಿ ನೀಡಿದ್ದು, 'ಉದ್ದೇಶಿತ ರಸ್ತೆಯು ಮೈಸೂರು ರಸ್ತೆಯ ರಾಜರಾಜೇಶ್ವರಿ ಡೆಂಟಲ್ ಕಾಲೇಜಿನಿಂದ ಆರಂಭವಾಗಿ ಮಾಗಡಿ ರಸ್ತೆಯ ಕಡಬಗೆರೆ ಬಳಿ ಅಂತ್ಯಗೊಳ್ಳಲಿದೆ. ಯೋಜನೆಗೆ ಅಗತ್ಯವಿರುವ ಭೂಮಿ ಸ್ವಾಧೀನಪಡಿಸಿಕೊಳ್ಳಲು ಈಗಾಗಲೇ ಸರ್ವೆ ನಡೆಸಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ. [ಬಿಡಿಎ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?]

ರಸ್ತೆಯ ವಿನ್ಯಾಸ : ಉದ್ದೇಶಿತ ರಸ್ತೆಯಲ್ಲಿ ಹತ್ತು ಪಥಗಳು ಇರಲಿದ್ದು, ಇವುಗಳಲ್ಲಿ ಎರಡು ಪಥಗಳನ್ನು ಬಸ್ಸುಗಳಿಗಾಗಿ ಮೀಸಲಾಗಿಡಲಾಗುತ್ತದೆ. ಪದೇ-ಪದೇ ರಸ್ತೆಯನ್ನು ಅಗೆಯುವುದು ತಪ್ಪಿಸಲು ರಸ್ತೆ ಬದಿಯಲ್ಲಿ ಯುಟಿಲಿಟಿ ಡಕ್ಟ್‌ (ಸೇವಾ ಸಂಪರ್ಕ ಜಾಲದ ನೆಲದಡಿ ಮಾರ್ಗ) ವ್ಯವಸ್ಥೆ ಮಾಡಲಾಗುತ್ತದೆ. [ಬೆಂಗಳೂರ ರಸ್ತೆ ಗುಂಡಿ ಮುಚ್ಚಲು ನೀವು ಸಹಿ ಮಾಡಬಹುದು]

ಹತ್ತು ಪಥಗಳ ರಸ್ತೆ ನಿರ್ಮಾಣಗೊಂಡರೆ ನಗರದಲ್ಲಿ ಶೇಕಡಾ 30ರಷ್ಟು ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಯೋಜನೆ ಪೂರ್ಣಗೊಂಡ ಬಳಿಕ ಕಡಬಗೆರೆಯಿಂದ ತುಮಕೂರು ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Bangalore Development Authority (BDA) plan to build 10 lane road between Mysuru road to Magadi road.
Please Wait while comments are loading...