ಬೆಂಗಳೂರು ಸ್ಕೂಲ್ ಆಫ್‌ ಎಕನಾಮಿಕ್ಸ್‌ B.sc ಪ್ರವೇಶಕ್ಕೆ ಅರ್ಜಿ ಆಹ್ವಾನ

Posted By:
Subscribe to Oneindia Kannada

ಬೆಂಗಳೂರು, ಜುಲೈ 13 : ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್‌ ಎಕನಾಮಿಕ್ಸ್ ಗೆ 2017-18ನೇ ಸಾಲಿನ ಪ್ರವೇಶಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ ವರ್ಷದ ಬಿ.ಎಸ್ಸಿ (ಆನರ್ಸ್) ಎಕನಾಮಿಕ್ಸ್ ಕೋರ್ಸ್ ಆರಂಭಿಸಲಾಗುತ್ತಿದೆ. ಒಟ್ಟು 50 ಸೀಟುಗಳು ಇದ್ದು, ಇದರಲ್ಲಿ 25 ಸೀಟುಗಳನ್ನು ಕರ್ನಾಟಕದ ವಿದ್ಯಾರ್ಥಿಗಳಿಗೆ ಮತ್ತು 25 ಸೀಟುಗಳನ್ನು ದೇಶದ ಇತರೆ ಭಾಗದ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

Bengaluru DR.B.R Ambedkar school of economics invites application for admission to B.Sc 2017-18

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ಹಾಗೂ ಪುಣೆ, ಕೋಲ್ಕತ್ತ, ಚೆನ್ನೈ ಹಾಗೂ ದೆಹಲಿಯಲ್ಲಿ ಪ್ರವೇಶ ಪರೀಕ್ಷೆ ನಡೆಸಲಿದೆ.

ವೇಳಾಪಟ್ಟಿ
* 18, ಜುಲೈ: ಅರ್ಜಿ ಸಲ್ಲಿಸಲು ಕೊನೆಯ ದಿನ.
* 24, ಜುಲೈ: ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬೇಕು.
* 30, ಜುಲೈ: ಪ್ರವೇಶ ಪರೀಕ್ಷೆ.
* 3, ಆಗಸ್ಟ್‌: ಸರಿ ಉತ್ತರ ಪ್ರಕಟ.
* 7, ಆಗಸ್ಟ್‌: ಫಲಿತಾಂಶ ಪ್ರಕಟ.
* 12, ಆಗಸ್ಟ್‌: ಸೀಟು ಹಂಚಿಕೆ ಕೌನ್ಸೆಲಿಂಗ್.
* 23, ಆಗಸ್ಟ್‌: ತರಗತಿ ಪ್ರಾರಂಭ.

ವಿವರಗಳಿಗೆ ಪ್ರಾಧಿಕಾರದ ವೆಬ್‌ಸೈಟ್‌ ವೀಕ್ಷಿಸಬಹುದು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bengaluru DR. B.R AMBEDKAR school of economics invites application for admission to B.Sc (Honours) Economics 2017-18
Please Wait while comments are loading...