ಬೆಂಗಳೂರು-ಎರ್ನಾಕುಲಂ ರೈಲು ಅಪಘಾತ, 9 ಸಾವು
ಬೆಂಗಳೂರು, ಫೆ. 13 : ಶುಕ್ರವಾರ ಮುಂಜಾನೆ ಆನೇಕಲ್ ಬಳಿ ಬೆಂಗಳೂರು-ಎರ್ನಾಕುಲಂ ರೈಲಿನ 8 ಬೋಗಿಗಳು ಹಳಿ ತಪ್ಪಿವೆ. ಘಟನೆಯಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಧಾವಿಸಿ, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.
ಸಮಯ 2.10 : ಬೆಂಗಳೂರು-ಎರ್ನಾಕುಲಂ ರೈಲು ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ಅಂತ್ಯಗೊಂಡಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸಮಯ 1.21 : ರೈಲು ಅಪಘಾತದಲ್ಲಿ ಪೊಲೆಂಡ್ ನಿವಾಸಿ ಕ್ಯಾಮಿಲ್ ಅವರ ಕಾಲು ಮುರಿದು ಹೋಗಿದ್ದು ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕ್ಯಾಮಿಲ್ ಜೊತೆಗಿದ್ದ ಗೆಳತಿ ಅಲೆಕ್ಸಾಂಡ್ರಿಯಾ ಅವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಗೆಳತಿಯನ್ನು ಹುಡುಕಿ ಕೊಡುವಂತೆ ಕ್ಯಾಮಿಲ್ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಸಮಯ 1.15 : ಬೆಂಗಳೂರು-ಎರ್ನಾಕುಲಂ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ರೈಲ್ವೆ ಎಡಿಜಿಪಿ ಆರ್.ಪಿ.ಶರ್ಮಾ ಹೇಳಿದ್ದಾರೆ.
ಸಮಯ 12.40 : ರೈಲು ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯ ಪೂರ್ಣಗೊಂಡಿದೆ. ಬೋಗಿಯಲ್ಲಿ ಸಿಲುಕಿರುವ ಮೃತ ದೇಹಗಳನ್ನು ಹೊರತೆಗೆಯಬೇಕಾಗಿದ್ದು, ಇನ್ನೂ ಸುಮಾರು 3 ಗಂಟೆಗಳ ಕಾರ್ಯಾಚರಣೆ ನಡೆಸಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸಮಯ 12.15 : ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತರು ರೈಲು ಅಪಘಾತ ನಡೆದ ಸ್ಥಳದಲ್ಲಿನ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಸಮಯ 12 ಗಂಟೆ : ವಿಧಾನಸೌಧಕ್ಕೆ ಆಗಮಿಸಿದ್ದ ಆರೋಗ್ಯ ಸಚಿವ ಯು.ಟಿ.ಖಾದರ್ ರೈಲು ಅಪಘಾತ ನಡೆದ ಸ್ಥಳಕ್ಕೆ ತೆರಳುತ್ತಿದ್ದಾರೆ.
ಸಮಯ 11.40 : ಬೆಂಗಳೂರು-ಎರ್ನಾಕುಲಂ ರೈಲಿನ ಬೋಗಿ ಡಿ.8ರಲ್ಲಿದ್ದ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸಮಯ 11.19 : ಬೆಂಗಳೂರು-ಎರ್ನಾಕುಲಂ ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ಮತ್ತು ಸಣ್ಣ-ಪುಟ್ಟ ಗಾಯಗಳಾದವರಿಗೆ 25 ಸಾವಿರ ರೂ. ಪರಿಹಾರ ನೀಡಲಾಗುತ್ತದೆ ಎಂದು ರೈಲ್ವೆ ಇಲಾಖೆಯ ಪಿಆರ್‌ಓ ಅನಿಲ್ ಸಕ್ಸೆನಾ ಹೇಳಿದ್ದಾರೆ.
ಸಮಯ 11.15 : ಬೆಂಗಳೂರು ಉಸ್ತುವಾರಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರೈಲು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರೈಲ್ವೆ ಹಳಿಯ ಮೇಲೆ ಬಂಡೆ ಕುಸಿದು ಬಿದ್ದಿದ್ದರಿಂದ ದುರಂತ ಸಂಭವಿಸಿದೆ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.
Unfortunate rail accident in Karnataka,Boulder fell on track in Ghat section, train hit it. directed all sr officers to rush with full help
— Suresh Prabhu (@sureshpprabhu) February 13, 2015 ಸಮಯ 11 ಗಂಟೆ : ಕೇರಳ ರಾಜ್ಯದ ಸಹಾಯವಾಣಿ ಸಂಖ್ಯೆಗಳು : ತಿರುವನಂತಪುರಂ 0471 2321205, 2321237, 09746769960, ಎರ್ನಾಕುಲಂ -0484-2100317, 0813699773, 09539336040, ಎರ್ನಾಕುಲಂ ನಗರ 0484-2398200, ತಿರುಚೂರು - 04872424148, 2430060
ಸಮಯ 10.54 : ಬೆಂಗಳೂರು-ಎರ್ನಾಕುಲಂ ರೈಲು ದುರಂತದಲ್ಲಿ 8 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.
I am on way to Bangalore to visit accident site to help all stranded. All possible help will be rendered to families affected
— Suresh Prabhu (@sureshpprabhu) February 13, 2015 ಸಮಯ 10.44 : ರೈಲು ದುರಂತದ ಬಗ್ಗೆ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಟ್ವಿಟ್ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ನನ್ನ ಸಹೋದ್ಯೋಗಿ ಸದಾನಂದ ಗೌಡರು ತೆರಳಿದ್ದಾರೆ ಎಂದು ಸುರೇಶ್ ಪ್ರಭು ಹೇಳಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.
My colleague Hon Sadanand Gowda rushing to accident site. Directed Chair Rail Board to evacuate all stranded passengers. Medical help rushed
— Suresh Prabhu (@sureshpprabhu) February 13, 2015 ಸಮಯ 10.41 : ಬೆಂಗಳೂರು-ಎರ್ನಾಕುಲಂ ರೈಲು ಅಪಘಾತದ ಬಗ್ಗೆ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಲಾಗಿದೆ. ಶುಕ್ರವಾರದ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿಷಯ ಪ್ರಸ್ತಾಪಿಸಿದ್ದು, ಅಪಘಾತದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರದಿಂದಲೂ ಪರಿಹಾರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಸಮಯ 10.34 : ಅಪಘಾತ ಸ್ಥಳಕ್ಕೆ ಗೃಹ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿದ್ದಾರೆ. ರಕ್ಷಣಾ ಕಾರ್ಯಕ್ಕೆ ಮೊದಲು ಆದ್ಯತೆ ನೀಡಲಾಗುತ್ತಿದೆ ನಂತರ ಘಟನೆಗೆ ಕಾರಣವೇನು? ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ಸಮಯ 10.20 : ಬೆಂಗಳೂರು-ಎರ್ನಾಕುಲಂ ರೈಲು ( 12677) ದುರಂತದ ಬಗ್ಗೆ ಮಾಹಿತಿ ನೀಡಲು ಬೆಂಗಳೂರು ರೈಲು ನಿಲ್ದಾಣದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಸಹಾಯವಾಣಿ ಸಂಖ್ಯೆಗಳು 080 - 22371166, 22156553, 22156554.
ಸಮಯ 10.10 : ಗಾಯಗೊಂಡವರು ಮತ್ತು ಮೃತಪಟ್ಟವರು ಕೇರಳದವರಿರಬಹುದು ಎಂದು ಶಂಕಿಸಲಾಗಿದೆ.
ಸಮಯ 10 ಗಂಟೆ : ರೈಲು ಅಪಘಾತದಿಂದ ಬೆಂಗಳೂರಿಗೆ ಬರಬೇಕಿದ್ದ ರೈಲುಗಳ ಸಂಚರದಲ್ಲಿ ವ್ಯತ್ಯಯ ಉಂಟಾಗಿದೆ.
ಸಮಯ 9.53 : ರೈಲು ಅಪಘಾತದಲ್ಲಿ ಗಾಯಗೊಂಡವರ ಬಗ್ಗೆ ಮಾಹಿತಿ ಪಡೆಯಲು ಸಹಾಯವಾಣಿ ಸಂಖ್ಯೆಗಳು 9731666751, 080-22371166

ಸಮಯ 9.44 : ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಅವರು ಸ್ಥಳಕ್ಕೆ ತೆರಳುತ್ತಿದ್ದಾರೆ. ಜಖಂಗೊಂಡಿರುವ ಬೋಗಿಗಳನ್ನು ಗ್ಯಾಸ್ ಕಟರ್ ಮೂಲಕ ಕತ್ತರಿಸಲಾಗುತ್ತಿದ್ದು, ನಂತರ ಒಳಗೆ ಸಿಲುಕಿರುವವರನ್ನು ರಕ್ಷಿಸಲಾಗುತ್ತದೆ.
ಸಮಯ 9.40 : ರೈಲು ಅಪಘಾತದಲ್ಲಿ ಮಗು ಸೇರಿ 8 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
Bengaluru- ernakulam train derailment accident Help line number- 09731666751
— Sadananda Gowda (@DVSBJP) February 13, 2015 ಸಮಯ 9.35 : ಆರೋಗ್ಯ ಸಚಿವ ಯು.ಟಿ.ಖಾದರ್ ಅಪಘಾತದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮೂವರು ಪ್ರಯಾಣಿಕರು ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದ್ದಾರೆ. ಸ್ಥಳಕ್ಕೆ 20ಕ್ಕೂ ಹೆಚ್ಚು ಅಂಬ್ಯುಲೆನ್ಸ್ ಅನ್ನು ಕಳುಹಿಸಲಾಗಿದೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸಮಯ 9.30 : ರೈಲು ಅಪಘಾತದಲ್ಲಿ ಗಾಯಗೊಂಡವರ ಬಗ್ಗೆ ಮಾಹಿತಿ ಪಡೆಯಲು ರೈಲ್ವೆ ಇಲಾಖೆ ಸಹಾಯವಾಣಿಯನ್ನು ಆರಂಭಿಸಿದ್ದಾರೆ, ದೂರವಾಣಿ ಸಂಖ್ಯೆ 08022942666
B'lore-Ernakulam Intercity Train derailed btw Anekal &Hosur at 7:45AM. Rescue work is on. Railway Control 08022942666 pic.twitter.com/ASzcXSwl3A
— Abhishek Goyal (@goyal_abhei) February 13, 2015 ಬೆಂಗಳೂರು-ಹೊಸೂರು ಮಾರ್ಗದಲ್ಲಿ ಶುಕ್ರವಾರ ಮುಂಜಾನೆ 7.30ರ ಸುಮಾರಿಗೆ ಬೆಂಗಳೂರು-ಎರ್ನಾಕುಲಂ ರೈಲು ಹಳಿ ತಪ್ಪಿದೆ. ಸ್ಥಳಕ್ಕೆ ಆಂಬ್ಯುಲೆನ್ಸ್ ಜೊತೆ ತೆರಳುವಂತೆ ಬೆಂಗಳೂರು ಗ್ರಾಮಾಂತರ ಡಿಎಚ್‌ಓಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ. ಬೋಗಿಯಲ್ಲಿ ಹಲವು ಪ್ರಯಾಣಿಕರು ಸಿಲುಕಿದ್ದಾರೆ.

ಹಳಿಯಲ್ಲಿನ ತಾಂತ್ರಿಕ ದೋಷದಿಂದಾಗಿ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದೆ. ರೈಲಿನ ಬೋಗಿಯಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದು ಆನೇಕಲ್ ಮತ್ತು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ. ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದಿಂದಾಗಿ ಬೈಯಪ್ಪನಹಳ್ಳಿ-ಬೆಂಗಳೂರು ನಡುವಿನ ರೈಲು ಸಂಚಾರ ಸ್ಥಗಿತಗೊಂಡಿದೆ.

ಆನೇಕಲ್ ರೈಲು ನಿಲ್ದಾಣದಿಂದ 3 ಕಿ.ಮೀ. ದೂರದ ಬಿದರಗೆರೆ ಬಳಿ ಈ ಅಪಾಘಾತ ಸಂಭವಿಸಿದೆ. 2 ಬೋಗಿಗಳು ಅಪಘಾತದಲ್ಲಿ ಸಂಪೂರ್ಣವಾಗಿ ಜಖಂಗೊಂಡಿದೆ. ಇಬ್ಬರು ವಿದೇಶಿ ಪ್ರಯಾಣಿಕರು ಘಟನೆಯಲ್ಲಿ ಗಾಯಗೊಂಡಿದ್ದಾರೆ.

-
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
South Western Railway: ಹುಬ್ಬಳ್ಳಿಯಿಂದ ರಾಮೇಶ್ವರಂಗೆ ವಿಶೇಷ ರೈಲು ಸಂಚಾರ; ಮಾರ್ಚ್ 21ರಿಂದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications