ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯುವ ಬರಹಗಾರರ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

By Vanitha
|
Google Oneindia Kannada News

ಬೆಂಗಳೂರು, ಜುಲೈ 29 : ಕನ್ನಡ ಪುಸ್ತಕ ಪ್ರಾಧಿಕಾರವು 2014 ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿದಾರರು ಕನಿಷ್ಠ 18 ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಅರ್ಜಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಜನನ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.[1401 ವೈದ್ಯರ ನೇಮಕಾತಿಗೆ ಅಧಿಸೂಚನೆ ಪ್ರಕಟ]

Bengaluru Kannada Pustaka Praddikara invites application youngest poet prize.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ದಪಡಿಸುವ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.

ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ/ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸುವ ಅರ್ಜಿಗಳನ್ನು/ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹಸ್ತಪ್ರತಿಯ/ಡಿ.ಟಿ.ಪಿ. ಪ್ರತಿಯ ಎರಡನೇ ಪ್ರತಿಯನ್ನು ಸಲ್ಲಿಸಲು ತಿಳಿಸಿದೆ.

ಅರ್ಜಿಗಳನ್ನು 22-08-2015 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು 560002 ಅವರಿಗೆ ಕಳುಹಿಸಿಕೊಡಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ದೂರವಾಣಿ ಸಂಖ್ಯೆ 08022484516/22017784 ಇಲ್ಲಿ ಸಂಪರ್ಕಿಸಬಹುದಾಗಿದೆ.

English summary
Kannada Pustaka Praddikara has invites application about 2014 youngest poet prize. Eligible persons applying last date on 22-08-2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X