ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗರೇ ಫೇಸ್ಬುಕ್, ಟ್ವಿಟ್ಟರಿನಲ್ಲಿ ಸರಕಾರಕ್ಕೆ ದೂರು ಮುಟ್ಟಿಸಿ

By Sachhidananda Acharya
|
Google Oneindia Kannada News

ಬೆಂಗಳೂರು, ಅಕ್ಟೋಬರ್ 17: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ವಿ) ಹಾಗೂ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ ಸಿಎಲ್) ಸಂಸ್ಥೆಗಳಿಗೆ ಸಂಬಂಧಿಸಿದ ದೈನಂದಿನ ಸಮಸ್ಯೆಗಳನ್ನು ಸಾರ್ವಜನಿಕರು ನೇರವಾಗಿ ಫೇಸ್ಬುಕ್ ಮತ್ತು ಟ್ವಿಟರ್ ಮೂಲಕ ದಾಖಲಿಸಬಹುದಾಗಿದೆ.

ಸಕಲ ಸಮಸ್ಯೆಗಳ ಪರಿಹಾರಕ್ಕೆ ಬಳಸಿ ಬಿಬಿಎಂಪಿ ಆಪ್ಸಕಲ ಸಮಸ್ಯೆಗಳ ಪರಿಹಾರಕ್ಕೆ ಬಳಸಿ ಬಿಬಿಎಂಪಿ ಆಪ್

ನಗರದ ಅಲಿ ಅಸ್ಕರ್ ರಸ್ತೆಯಲ್ಲಿರುವ ಬಿ.ಎಂ.ಆರ್.ಡಿ. ಕಛೇರಿಯಲ್ಲಿ ಸೋಮವಾರ ಈ ಐದು ಇಲಾಖೆಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲ ತಾಣ ಕೇಂದ್ರವನ್ನು ಉದ್ಘಾಟಿಸಲಾಗಿದೆ.
ಈ ಕೇಂದ್ರದ ಸ್ಥಾಪನೆಯಿಂದ ಸಾರ್ವಜನಿಕರು ತಮ್ಮ ದೈನಂದಿನ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಂಡಲ್ಲಿ ಬೆಂಗಳೂರು ನಗರ ಮತ್ತಷ್ಟು ಸುಂದರ ಹಾಗೂ ಅಭಿವೃದ್ಧಿ ನೆರವಾಗಲಿದೆ ಎಂದು ಸಾಮಾಜಿಕ ಜಾಲತಾಣ ಕೇಂದ್ರ ಉದ್ಘಾಟಿಸಿ ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್ ಹೇಳಿದರು.

Bengaluru: Keep in touch with government on Facebook and Twitter

ಕಾರ್ಯ ನಿರ್ವಹಣೆ ಹೇಗೆ?

ಈ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಸಿಬ್ಬಂದಿಗಳು ಸಾರ್ವಜನಿಕರು ನೀಡುವ ದೂರುಗಳನ್ನು ಕೂಡಲೇ ದಾಖಲಿಸಿ ಮುಂದಿನ ಕ್ರಮಕ್ಕಾಗಿ ಸಂಬಂಧಪಟ್ಟ ಸಂಸ್ಥೆಗಳಿಗೆ ವರ್ಗಾಯಿಸುತ್ತಾರೆ.

ನಂತರ ಆಯಾ ಸಂಸ್ಥೆಗಳ ನೋಡಲ್ ಅಧಿಕಾರಿಗಳು ಸಂಬಂಧಪಟ್ಟವರ ಗಮನಕ್ಕೆ ತಂದು ಸಮಸ್ಯೆಗೆ ಪರಿಹಾರ ಹುಡುಕಿ ನಂತರ ಕೇಂದ್ರಕ್ಕೆ ರವಾನಿಸಿರುತ್ತಾರೆ.

ದೂರುದಾರರ ಸಮಸ್ಯೆಗಳಿಗೆ ಪರಿಹಾರ ಕಂಡ ತಕ್ಷಣ ಕೇಂದ್ರವು ಸಾರ್ವಜನಿಕರು ಬಳಸಿದ ಸಾಮಾಜಿಕ ಜಾಲ ತಾಣದ ಮೂಲಕ ಉತ್ತರ ನೀಡಲಿದ್ದಾರೆ. ಕೆಲವು ಸಂದರ್ಭಗಳಲ್ಲಿ ದೂರುದಾರರ ಸಮಸ್ಯೆಗಳು ದೀರ್ಘಾವಧಿಯ ಸಮಸ್ಯೆಗಳಾಗಿದ್ದಲ್ಲಿ, ಆ ಸಮಸ್ಯೆಗಳನ್ನು ಪರಿಹರಿಸಲು ಹೆಚ್ಚಿನ ಕಾಲಾವಕಾಶ ಬೇಕಾದಲ್ಲಿ ಅದನ್ನೂ ಸಹ ದೂರುದಾರರ ಗಮನಕ್ಕೆ ತರಲಾಗುವುದು.

ಪ್ರತಿಯೊಂದು ಸಂಸ್ಥೆಯಲ್ಲಿ ಹಿರಿಯ ಅಧಿಕಾರಿಗಳನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ದೂರುಗಳ ವಿಲೇವಾರಿಯ ಮೇಲುಸ್ತುವಾರಿ ನಡೆಸಲಿದ್ದಾರೆ.

ಸಾರ್ವಜನಿಕರು ಇಲಾಖಾವಾರು ದೂರುಗಳನ್ನು ಸಲ್ಲಿಸಲು ಫೇಸ್ಬುಕ್ ಮತ್ತು ಟ್ವಿಟರ್ ಮಾಧ್ಯಮ ಉಪಯೋಗಿಸಬಹುದಾಗಿದ್ದು, ಅವುಗಳ ಐಡಿಗಳು ಈ ಕೆಳಗಿನಂತಿವೆ.

ಬೆಂಗಳೂರು ಮಹಾನಗರಪಾಲಿಕೆ ಸಂಬಂಧಿಸಿದ ದೂರುಗಳಿಗಾಗಿ,

Facebook: https://www.facebook.com/bbmp.comm

Twitter: http://twitter.com/BBMPCOMM1

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ದೂರುಗಳಿಗಾಗಿ,

Facebook: https://www.facebook.com/pg/BDABLR/

Twitter: http://twitter.com/bdablr

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಸಂಬಂಧಿಸಿದ ದೂರುಗಳಿಗಾಗಿ,

Facebook: https://www.facebook.com/bangalorewatersupply

Twitter: http://twitter.com/chairmanbwssb

ಬೆಂಗಳೂರು ಮೆಟ್ರೋ ರೈಲು ನಿಗಮ ಸಂಸ್ಥೆಗಳಿಗೆ ಸಂಬಂಧಿಸಿದ ದೂರುಗಳಿಗಾಗಿ,

Facebook: http://www.facebook.com/BMRCL

Twitter: https://twitter.com/cpronammametro

ಬೆಂಗಳೂರು ನಗರಾಭಿವೃದ್ಧಿ ಸಚಿವರಿಗೆ ದೂರುಗಳನ್ನು ಸಲ್ಲಿಸಲು,

Facebook: https://www.facebook.com/blrdevminister

Twitter: https://twitter.com/blrdevminister

ಸಾಮಾಜಿಕ ಜಾಲತಾಣ ಕೇಂದ್ರದ ಉದ್ಘಾಟನೆ ವೇಳೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಬಿ.ಬಿ.ಎಂ.ಪಿ. ಆಯುಕ್ತ ಮಂಜುನಾಥ ಪ್ರಸಾದ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಕೇಶ್ ಸಿಂಗ್, ಬೆಂಗಳೂರು ಮೆಟ್ರೋ ರೈಲು ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

English summary
The public can keep in touch with government institutions like BBMP, Bangaluru Development Authority (BDA), Bangaluru Water Supply and Drainage Board (BWSSB) and Bangaluru Metro Rail Corporation (BMRCL) directly through Facebook and Twitter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X