ಬೆಂ-ಮೈ ಆರು ಪಥದ ರಸ್ತೆ 2021ಕ್ಕೆ ಪೂರ್ಣ!

Posted By: Gururaj
Subscribe to Oneindia Kannada

ಬೆಂಗಳೂರು, ಡಿಸೆಂಬರ್ 07 : ಬೆಂಗಳೂರು-ಮೈಸೂರು ನಡುವಿನ 6 ಪಥದ ರಸ್ತೆ ಕಾಮಗಾರಿಗೆ ಭೂ ಸ್ವಾಧೀನ ವಿಘ್ನ ಉಂಟು ಮಾಡಿದೆ. 2021ರ ವೇಳೆಗೆ ಆರು ಪಥದ ರಸ್ತೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

2014ರಲ್ಲಿ ಕೇಂದ್ರ ಸರ್ಕಾರ ದೇಶದ ಕೆಲವು ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿತ್ತು. ಈ ಹೆದ್ದಾರಿಯಲ್ಲಿ ಬೆಂಗಳೂರು-ಮೈಸೂರು ನಡುವಿನ ಹೆದ್ದಾರಿಯೂ ಸೇರಿತ್ತು.

ಬೆಂಗಳೂರು-ಮೈಸೂರು 6 ಪಥ ರಸ್ತೆ ನಿರ್ಮಾಣ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರು-ಮೈಸೂರು ರಸ್ತೆಯನ್ನು 10 ಪಥದ ರಸ್ತೆಯಾಗಿ ಅಭಿವೃದ್ಧಿ ಮಾಡುತ್ತಿದೆ. ಇವುಗಳಲ್ಲಿ 6 ಪಥದ ಎಕ್ಸ್‌ಪ್ರೆಸ್ ರಸ್ತೆ, ನಾಲ್ಕು ಸರ್ವೀಸ್ ರಸ್ತೆಗಳು ಸೇರಿವೆ. ಆದರೆ, ಈ ಯೋಜನಗೆ ಭೂ ಸ್ವಾಧೀನವೇ ತೊಡಕಾಗಿದೆ.

Bengaluru-Mysuru 6 lane project may complete before 2021

ಬೆಂಗಳೂರಿನ ನೈಸ್ ರಸ್ತೆಯಿಂದ ಮೈಸೂರು ಹೊರವಲಯದ ಕೊಲಂಬಿಯಾ ಏಷ್ಯಾ ಆಸ್ಪತ್ರೆ ತನಕ 117 ಕಿ.ಮೀ.ರಸ್ತೆಯನ್ನು ಅಭಿವೃದ್ಧಿ ಮಾಡಲಾಗುತ್ತದೆ. ಈ ಯೋಜನೆಯ ವೆಚ್ಚ ಸುಮಾರು 4,100 ಕೋಟಿ. 2016ರಲ್ಲಿ ಈ ಯೋಜನೆಗೆ ಟೆಂಡರ್ ಕರೆಯಲಾಗಿತ್ತು. ಆದರೆ, ತಾಂತ್ರಿಕ ಕಾರಣದಿಂದ ಅದು ರದ್ದಾಗಿದೆ.

7 ಲಕ್ಷ ಕೋಟಿ ರೂ. ವೆಚ್ಚದ ಹೆದ್ದಾರಿ ಯೋಜನೆಗೆ ಕೇಂದ್ರ ಅನುಮೋದನೆ

ರಸ್ತೆ ಅಭಿವೃದ್ಧಿ ಜೊತೆಗೆ ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬೈಪಾಸ್ ನಿರ್ಮಾಣವಾಗಲಿದೆ. ಈ ಯೋಜನೆಗೆ 1,300 ಎಕರೆ ಭೂಮಿ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.

ಈಗ ರಸ್ತೆ ಅಭಿವೃದ್ಧಿಗೆ ಮತ್ತೆ ಟೆಂಡರ್ ಕರೆಯಲಾಗಿದೆ. ಹೆಚ್ಚಿನ ಕಂಪನಿಗಳು ಇದರಲ್ಲಿ ಭಾಗಿಯಾಗಲಿ ಎಂದು ಎನ್‌ಎಚ್‌ಎಐ ಅಪೇಕ್ಷಿಸುತ್ತಿದೆ. ಪ್ರಾಧಿಕಾರವೇ ಭೂಮಿಯನ್ನು ಖರೀದಿ ಮಾಡಿ, ಕಂಪನಿಗೆ ಹಸ್ತಾಂತರ ಮಾಡಲಿದೆ.

'ಸಾಗರಮಾಲಾ' ಯೋಜನೆಗೆ ಕರ್ನಾಟಕದ 8 ಹೆದ್ದಾರಿಗಳು ಆಯ್ಕೆ

ಭೂ ಸ್ವಾಧೀನ ಪ್ರಕ್ರಿಯೆ ಆರಂಭವಾದರೆ ಬಳಿಕ ಯೋಜನೆ ಪೂರ್ಣಗೊಳ್ಳಲು 2 ವರ್ಷಗಳು ಬೇಕು. 2021ಕ್ಕೆ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎನ್ನುತ್ತಾರೆ ಎನ್‌ಎಚ್‌ಎಐ ಅಧಿಕಾರಿಗಳು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bengaluru-Mysuru 6 lane road project delayed due to land acquisition. Project may ready anytime before 2021.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ