ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು-ಮೈಸೂರು 6 ಪಥ ರಸ್ತೆ ಕಾಮಗಾರಿ 2 ತಿಂಗಳಿನಲ್ಲಿ ಆರಂಭ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 18 : ಬಹುನಿರೀಕ್ಷಿತ ಬೆಂಗಳೂರು-ಮೈಸೂರು 6 ಪಥದ ರಸ್ತೆ ಕಾಮಗಾರಿ ಎರಡು ತಿಂಗಳಿನಲ್ಲಿ ಆರಂಭವಾಗಲಿದೆ. ಯೋಜನೆಗಾಗಿ ಶೇ 80ರಷ್ಟು ಭೂ ಸ್ವಾಧೀನವನ್ನು ಪೂರ್ಣಗೊಳಿಸಲಾಗಿದೆ.

ಬೆಂಗಳೂರು-ಮೈಸೂರು ಷಟ್ಪಥ ರಸ್ತೆ ಕಾಮಗಾರಿ ಸೆಪ್ಟೆಂಬರ್‌ನಲ್ಲಿ ಆರಂಭಬೆಂಗಳೂರು-ಮೈಸೂರು ಷಟ್ಪಥ ರಸ್ತೆ ಕಾಮಗಾರಿ ಸೆಪ್ಟೆಂಬರ್‌ನಲ್ಲಿ ಆರಂಭ

ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಈ ಕುರಿತು ಮಾಹಿತಿ ನೀಡಿದರು.'ಎರಡು ತಿಂಗಳಿನಲ್ಲಿ ಕಾಮಗಾರಿ ಆರಂಭವಾಗಲಿದೆ. ಶೇ 80ರಷ್ಟು ಭೂ ಸ್ವಾಧೀನವನ್ನು ಪೂರ್ಣಗೊಳಿಸಲಾಗಿದೆ. ಭೂ ಸ್ವಾಧೀನ ಪೂರ್ಣಗೊಂಡ ತಕ್ಷಣದ ಕಾಮಗಾರಿ ಆರಂಭವಾಗಲಿದೆ' ಎಂದರು.

ಬೆಂಗಳೂರು-ಮೈಸೂರು ರಸ್ತೆ ಅಗಲೀಕರಣಕ್ಕೆ ಇಂಧನ, ಅರಣ್ಯ ಇಲಾಖೆ ಅಡ್ಡಿಬೆಂಗಳೂರು-ಮೈಸೂರು ರಸ್ತೆ ಅಗಲೀಕರಣಕ್ಕೆ ಇಂಧನ, ಅರಣ್ಯ ಇಲಾಖೆ ಅಡ್ಡಿ

'ಬಿಡದಿ ಮತ್ತು ರಾಮನಗರದಲ್ಲಿ ಬೈಪಾಸ್ ನಿರ್ಮಾಣ ಕಾರ್ಯ ಈಗಾಗಲೇ ಆರಂಭವಾಗಿದೆ. ಏಳರಿಂದ ಎಂಟು ತಿಂಗಳಿನಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ' ಎಂದು ರೇವಣ್ಣ ಹೇಳಿದರು.

Bengaluru-Mysuru 6 lane works to start in 2 months

ರಾಮನಗರ ಮತ್ತು ಚನ್ನಪಟ್ಟಣದಲ್ಲಿ 23 ಕಿ.ಮೀ.ಗಳ ಬೈಪಾಸ್ ನಿರ್ಮಾಣವಾಗಲಿದೆ. ಬಿಡದಿ, ಮಂಡ್ಯ ಮತ್ತು ಮದ್ದೂರಿನಲ್ಲಿ 11 ಕಿ.ಮೀ. ಬೈಪಾಸ್ ನಿರ್ಮಿಸಲಾಗುತ್ತದೆ.

 ಬೆಂಗಳೂರು-ಮೈಸೂರು ಮಾರ್ಗಕ್ಕಾಗಿ 200 ಮರಗಳಿಗೆ ಕೊಡಲಿ? ಬೆಂಗಳೂರು-ಮೈಸೂರು ಮಾರ್ಗಕ್ಕಾಗಿ 200 ಮರಗಳಿಗೆ ಕೊಡಲಿ?

ಭೂ ಸ್ವಾಧೀನ ವಿಳಂಬವಾದ ಕಾರಣ ಆರು ಪಥದ ರಸ್ತೆ ನಿರ್ಮಾಣ ಕಾಮಗಾರಿ ಆರಂಭವೂ ತಡವಾಗಿದೆ. ಈಗ ಶೇ 80ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣವಾಗಿದೆ. ರಸ್ತೆ ನಿರ್ಮಾಣದ ಗುತ್ತಿಗೆ ಪಡೆದವರಿಗೆ ಕಾಮಗಾರಿ ಆರಂಭಿಸಲು ಸೂಚನೆ ನೀಡಲಾಗಿದೆ ಎಂದರು.

ಬೆಂಗಳೂರು-ಮೈಸೂರು ಆರು ಪಥದ ರಸ್ತೆ ಕಾಮಗಾರಿಯನ್ನು ಸುಮಾರು 6,800 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ರಸ್ತೆ ಕಾಮಗಾರಿ ಮುಗಿದರೆ ಬೆಂಗಳೂರು-ಮೈಸೂರು ನಡುವಿನ ಪ್ರಯಾಣಿಸಲು 90 ನಿಮಿಷ ಸಾಕು ಎಂದು ಅಂದಾಜಿಸಲಾಗಿದೆ.

English summary
Karnataka Public Works minister H.D. Revanna said that, Six-lane work on Bengaluru-Mysuru National Highway is expected to start within two months. 80% of the land has been acquired for the project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X