ಬೆಂ-ಮೈ ನಡುವೆ ವಿದ್ಯುತ್ ಚಾಲಿತ ರೈಲು ಸಂಚಾರಕ್ಕೆ ಒಪ್ಪಿಗೆ

Posted By: Gururaj
Subscribe to Oneindia Kannada

ಬೆಂಗಳೂರು, ಡಿಸೆಂಬರ್ 20 : ಬೆಂಗಳೂರು-ಮೈಸೂರು ನಡುವೆ ವಿದ್ಯುತ್ ಚಾಲಿತ ರೈಲು ಸಂಚಾರಕ್ಕೆ ಅನುಮತಿ ಸಿಕ್ಕಿದೆ. ಡಿಸೆಂಬರ್ 26ರಂದು ರೈಲುಗಳ ಸಂಚಾರಕ್ಕೆ ಚಾಲನೆ ಸಿಗುವ ನಿರೀಕ್ಷೆ ಇದೆ.

ಚಿತ್ರಗಳು : ಬೆಂಗಳೂರು-ಮೈಸೂರು ಜೋಡಿ ಮಾರ್ಗ ಪೂರ್ಣ

ರೈಲ್ವೆ ಸುರಕ್ಷತಾ ಆಯುಕ್ತರು ಬೆಂಗಳೂರು-ಮೈಸೂರು ಜೋಡಿ ರೈಲು ಮಾರ್ಗವನ್ನು ಪರಿಶೀಲನೆ ನಡೆಸಿ, ರೈಲು ಸಂಚಾರಕ್ಕೆ ಒಪ್ಪಿಗೆ ನೀಡಿದ್ದಾರೆ. ಅಧಿಕೃತವಾಗಿ ಮಾರ್ಗ ಉದ್ಘಾಟನೆಯಾಗುವುದು ಮಾತ್ರ ಬಾಕಿ ಇದೆ.

Bengaluru-Mysuru electric railway line gets green signal for service

ಡಿಸೆಂಬರ್ 26ರಂದು ಉದ್ಘಾಟನಾ ಕಾರ್ಯಕ್ರಮ ನಡೆಸಲು ನೈಋತ್ಯ ರೈಲ್ವೆ ಚಿಂತನೆ ನಡೆಸಿದೆ. ಕೇಂದ್ರ ರೈಲ್ವೆ ಸಚಿವ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ದಿನಾಂಕದ ಬಗ್ಗೆ ಚರ್ಚಿಸಿ, ಅಂತಿಮ ತೀರ್ಮಾನ ಕೈಗೊಳ್ಳತ್ತದೆ.

ಬೆಂ-ಮೈ ಜೋಡಿ ಹಳಿಗೆ ಅಡ್ಡಿಯಾದ ಟಿಪ್ಪು ಮದ್ದಿನ ಮನೆ

ನವೆಂಬರ್‌ನಲ್ಲಿ ಬೆಂಗಳೂರು-ಮೈಸೂರು ಜೋಡಿ ಹಳಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿತ್ತು. 138.3 ಕಿ.ಮೀ.ಮಾರ್ಗದ ಕಾಮಗಾರಿ ವೀಕ್ಷಿಸಿ ಆಯುಕ್ತರು ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ ನೀಡಿದ್ದಾರೆ.

1997-98ನೇ ಸಾಲಿನಲ್ಲಿ ಬೆಂಗಳೂರು-ಮೈಸೂರು ನಡುವೆ ಜೋಡಿ ಮಾರ್ಗ ನಿರ್ಮಾಣಕ್ಕೆ ಚಾಲನೆ ಸಿಕ್ಕಿತ್ತು. ಮೂರು ಹಂತವಾಗಿ ಕಾಮಗಾರಿಯನ್ನು ವಿಭಜನೆ ಮಾಡಲಾಗಿತ್ತು. 2017ರ ನವೆಂಬರ್‌ನಲ್ಲಿ ಕಾಮಗಾರಿ ಪೂರ್ಣಗೊಂಡಿತ್ತು.

ಜೋಡಿ ಮಾರ್ಗ ನಿರ್ಮಾಣ ಕಾಮಗಾರಿಗೆ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಸುಲ್ತಾನ್ ಮದ್ದಿನ ಮನೆ ಅಡ್ಡಿಯಾಗಿತ್ತು. ಮದ್ದಿನ ಮನೆ ಸ್ಥಳಾಂತರ ಮಾಡಿದ ಬಳಿಕ ಕಾಮಗಾರಿಯನ್ನು ಪೂರ್ಣಗೊಳಿಸಲಾಯಿತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bengaluru-Mysuru electrification railway line has received clearance from the Commissioner of Railway Safety (CRS) for commercial operation. Train service may start from December 26, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ