ತೈಲ ಟ್ಯಾಂಕರ್ ಮುಷ್ಕರ ಇಲ್ಲ, ಬೆಂಗಳೂರು ನಿರಾಳ

Written By:
Subscribe to Oneindia Kannada

ಬೆಂಗಳೂರು, ಜೂನ್ 06: ಪೆಟ್ರೋಲ್ ಬಂಕ್ ಗಳಿಗೆ ಇಂಧನ ಪೂರೈಕೆ ಮಾಡುವ ಟ್ಯಾಂಕರ್ ಚಾಲಕರು ಮತ್ತು ಕ್ಲೀನರ್ ಗಳು ವಿವಿಧ ಬೇಡಿಕೆ ಈಡೇರಿಕೆಗೆ ಹಮ್ಮಿಕೊಂಡಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಟ್ಟಿದ್ದಾರೆ.

ಈ ಸುದ್ದಿ ಮಹಾನಗರದ ನಾಗರಿಕರಲ್ಲಿ ನಿಟ್ಟುಸಿರು ಬಿಡುವಂತೆ ಮಾಡಿದ್ದು ತೈಲ ಪೂರೈಕೆಯಲ್ಲಿ ಯಾವ ಅಡಚಣೆ ಉಂಟಾಗುವುದಿಲ್ಲ. ಎರಡು ತಿಂಗಳ ಹಿಂದೆ ದೇವನಗುಂದಿ ಟರ್ಮಿನಲ್ ಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ತಿಗೆ ಹಾಗೂ ಪರಿಷ್ಕೃತ ವೇತನದ ಬೇಡಿಕೆ ಇಟ್ಟು ಪ್ರತಿಭಟನೆ ನಡೆಸಲಾಗಿತ್ತು. ಭರವಸೆಯ ಬಳಿಕ ಪ್ರತಿಭಟನೆ ಹಿಂದಕ್ಕೆ ಪಡೆಯಲಾಗಿತ್ತು.[ಚಾಲಕ, ಕ್ಲೀನರ್ ಗಳ ಬೇಡಿಕೆಗಳೇನು?]

petrol

ತೈಲ ಟ್ಯಾ೦ಕರ್ ಚಾಲಕ ಮತ್ತು ಕ್ಲೀನರ್ ಗಳ ಸಮಸ್ಯೆ ನಿವಾರಣೆಗೆ ಸಮಿತಿ ರಚಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಗಿದೆ.

ಬೆ೦ಗಳೂರು ಗ್ರಾಮಾ೦ತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಪೂರೈಕೆ ಆಯುಕ್ತ ಹಷ೯ಗುಪ್ತ, ಜಿಲ್ಲಾಧಿಕಾರಿ ಎಸ್. ಪಾಲಯ್ಯ ಚಾಲಕ ಮತ್ತು ಕ್ಲೀನರ್ ಸ೦ಘದ ಪದಾಧಿಕಾರಿಗಳ ಜತೆ ಮಾತನಾಡಿ ಸಂಧಾನ ಯಶಸ್ವಿ ಮಾಡಿದರು.[ಲೀಟರ್ ಪೆಟ್ರೋಲ್‌ಗೆ ಎಷ್ಟು ಕೊಡ್ತಾ ಇದೀರಿ? ಈ ಲೆಕ್ಕ ನೋಡಿ]

ಬೇಡಿಕೆಗಳೇನು?
ಟ್ಯಾಂಕರ್ ಚಾಲಕರು ತಮ್ಮ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟಿದ್ದಾರೆ. ಪೆಟ್ರೋಲಿಯಂ ಕಂಪನಿಗಳು ಪ್ರತಿ ಕಿಲೋಮೀಟರ್ ಟ್ಯಾಂಕರ್ ಬಾಡಿಗೆ ದರವನ್ನು ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ.[ಇರಾನ್ ಜತೆ ಕರಾರು, ಈಗ ಪಾಕ್ ಮಾಡಲಿ ತಕರಾರು?]

ದೇವನಗುಂದಿಯಿಂದಲೇ ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಪೆಟ್ರೋಲ್-ಡೀಸೆಲ್ ಪೂರೈಕೆಯಾಗುತ್ತಿದೆ. ಹೊಸಕೋಟೆಯಿಂದ ದೇವನಗುಂದಿಗೆ ಸಾಗುವ ರಸ್ತೆಗಳು ಚೆನ್ನಾಗಿಲ್ಲ. ಹೊಸ ರಸ್ತೆ ನಿರ್ಮಿಸಿದರೂ ಕಿತ್ತು ಹೋಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಬೇಕು. ರಾಜ್ಯ ಸರ್ಕಾರ ಅನುದಾನ ನೀಡದಿದ್ದರೆ ಕಂಪನಿಗಳೇ ನಿರ್ಮಿಸಬೇಕು ಎಂಬ ಬೇಡಿಕೆ ಸಹ ಇಟ್ಟಿದ್ದಾರೆ.

ಅಧಿಕಾರಿಗಳ ಮಟ್ಟದಲ್ಲಿದ್ದ ಸಮಸ್ಯೆ ಈಗ ಸರ್ಕಾರದ ಮಟ್ಟಕ್ಕೆ ವರ್ಗಾವಣೆಯಾಗಿದ್ದು ಮುಂದಿನ ದಿನಗಳಲ್ಲಾದರೂ ಚಾಲಕರ ಸಮಸ್ಯೆಗೆ ಉತ್ತರ ಸಿಗುವುದೋ ಎಂಬುದನ್ನು ಕಾದು ನೋಡಬೇಕಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
After the meeting of food and power civil supply commissioner and Bengaluru Rural DC petrol tanker drivers withdraw their protest. The petrol tanker drivers and cleaners association has been on strike since Monday morning. Oil tankers went on strike against the congested route which has many locals who demanded money to allow them ply on this road with the city police failing to provide enough security to them.
Please Wait while comments are loading...