ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ರಸ್ತೆಗೆ ಮೇಜರ್ ಅಕ್ಷಯ್ ಕುಮಾರ್ ಹೆಸರು ನಾಮಕರಣ

|
Google Oneindia Kannada News

ಬೆಂಗಳೂರು, ಡಿಸೆಂಬರ್ 16 : ಬೆಂಗಳೂರು ನಗರದ ರಸ್ತೆಯೊಂದಕ್ಕೆ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಹೆಸರನ್ನು ಇಡಲಾಗಿದೆ. ಗಿರೀಶ್ ಅವರು ನಾಗ್ರೋಟಾದಲ್ಲಿ ಉಗ್ರರ ಜೊತೆ ಹೋರಾಡಿ ವೀರ ಮರಣವನ್ನಪ್ಪಿದ್ದರು.

ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಭಾನುವಾರ ಬೆಂಗಳೂರಿನ ಮೇಜರ್ ಅಕ್ಷಯ್ ಗಿರೀಶ್ ಅವರ ಹೆಸರನ್ನು ನಗರದ ಪಶ್ಚಿಮ ಭಾಗದ ರಸ್ತೆಗೆ ನಾಮಕರಣ ಮಾಡಲಾಗಿದೆ. ಎರಡು ವರ್ಷಗಳಿಂದ ಈ ವಿಚಾರವಾಗಿ ಬಿಬಿಎಂಪಿ ವಿಳಂಬ ನೀತಿ ಅನುಸರಿಸುತ್ತಿತ್ತು.

Bengaluru road named after Major Akshay Girish

ಯಲಹಂಕ ನ್ಯೂಟೌನ್‌ನ ಎ ಸೆಕ್ಟರ್ 13ನೇ ಎ ಮುಖ್ಯರಸ್ತೆ, 3ನೇ ಎ ಅಡ್ಡ ರಸ್ತೆಗೆ ಮೇಯರ್ ಅಕ್ಷಯ್ ಗಿರೀಶ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ. ಬಿಬಿಎಂಪಿ ಮೇಯರ್ ಗಂಗಾಬಿಕೆ ಸೇರಿದಂತೆ ಇತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Bengaluru road named after Major Akshay Girish

ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಹೆಸರಿಡಲು ಬಿಬಿಎಂಪಿಯ ವಿಳಂಬ ನೀತಿಯನ್ನು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಖಂಡಿಸಿದ್ದರು. ಬಿಬಿಎಂಪಿ ಮೇಯರ್‌ಗೆ ಪತ್ರ ಬರೆದು, ತಕ್ಷವೇ ನಾಮಕಾರಣ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ್ದರು.

ಯಾರು ಅಕ್ಷಯ್ ಕುಮಾರ್? : ಬೆಂಗಳೂರಿನ ಯಲಹಂಕದ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ 2016ರ ನವೆಂಬರ್‌ನಲ್ಲಿ ಹುತಾತ್ಮರಾಗಿದ್ದರು.

ಮೇಜರ್ ಉನ್ನಿಕೃಷ್ಣನ್ ಅವರಿಗೆ ಸಂದ ಗೌರವವನ್ನು ಅಕ್ಷಯ್ ಗಿರೀಶ್ ಅವರಿಗೂ ನೀಡುವ ಉದ್ದೇಶದಿಂದ ಬಿಬಿಎಂಪಿ ರಸ್ತೆಗೆ ಅವರ ಹೆಸರು ಇಡುವ ತೀರ್ಮಾನವನ್ನು ಕೈಗೊಂಡಿತ್ತು.

English summary
Bruhat Bengaluru Mahanagara Palike (BBMP) named a road in Bengaluru after Major Akshay Girish, who sacrificed his life battling terrorists in Jammu and Kashmir in 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X