ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾರ್ಚ್ 8ಕ್ಕೆ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

|
Google Oneindia Kannada News

ಬೆಂಗಳೂರು, ಮಾರ್ಚ್ 06: ಬೆಂಗಳೂರು ನಗರ ಜಿಲ್ಲಾ 13 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮಾರ್ಚ್ 8 ಮತ್ತು 9ರಂದು ನಡೆಯಲಿದೆ.

ಮಾಗಡಿ ರಸ್ತೆಯ ಸೀಗೇಹಳ್ಳಿ ಗೇಟ್‌ ಬಳಿಯ ಎಸ್‌.ಜಿ.ಕಲ್ಯಾಣ ಮಂಟಪದಲ್ಲಿ ಸಮ್ಮೇಳನ ನಡೆಯಲಿದೆ. ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಜೆ ಸದಾಶಿವ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ.

ಸದಾಶಿವ ಆಯೋಗದ ವರದಿ : ಕಾನೂನು ಸಲಹೆ ಪಡೆಯಲು ನಿರ್ಧಾರಸದಾಶಿವ ಆಯೋಗದ ವರದಿ : ಕಾನೂನು ಸಲಹೆ ಪಡೆಯಲು ನಿರ್ಧಾರ

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಕಳೆದ ವರ್ಷ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕೆಲವರು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನೇ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದ್ದರು. ಆದರೆ, ಸಾಹಿತಿಗಳನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಪರಿಷತ್ತಿನಲ್ಲಿ ನಿಯಮವಿಲ್ಲ. ಕನ್ನಡ ನಾಡು, ನುಡಿಗಾಗಿ ಸೇವೆ ಸಲ್ಲಿಸಿದ ಯಾರನ್ನು ಬೇಕಾದರೂ ಆಯ್ಕೆ ಮಾಡಬಹುದು ಎಂದು ಸಾಹಿತಿ ಡಾ. ಭೈರಮಂಗಲ ರಾಮೇಗೌಡ ಸ್ಪಷ್ಟಪಡಿಸಿದ್ದಾರೆ.

Bengaluru urban district Kannada Sahitya Sammelana on March 8

'ಮಾಗಡಿ ರಸ್ತೆ ಹಾಗೂ ನೈಸ್‌ ರಸ್ತೆ ಕೂಡುವಲ್ಲಿ 8ರಂದು ಬೆಳಿಗ್ಗೆ 8ಗಂಟೆಗೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಕನ್ನಡ ಜಾಗೃತಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ವಿಚಾರಗೋಷ್ಠಿ, ವಿದ್ಯಾರ್ಥಿ ಮತ್ತು ಯುವ ಗೋಷ್ಠಿ, ಸಂಗೀತ, ನೃತ್ಯ, ನಾಟಕ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಸಮ್ಮೇಳನದಲ್ಲಿ ಇರಲಿವೆ ಎಂದು ತಿಳಿಸಿದ್ದಾರೆ.

English summary
Bengaluru urban district district will be held on March 8 and 9 at SG kalyan mantap in Magadi road Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X