ಅಪಾರ್ಟ್ಮೆಂಟ್ ನಿವಾಸಿಗಳಿಗೆ ಎಚ್ಚರಿಕೆ ನೀಡಿದ ಬೆಸ್ಕಾಂ

Posted By:
Subscribe to Oneindia Kannada

ಬೆಂಗಳೂರು, ಸೆ. 08 : ಬೆಂಗಳೂರಿನಲ್ಲಿ ಮಳೆಯಿಂದ ಪ್ರವಾಹ ಪೀಡಿತವಾಗುವ ಪ್ರದೇಶಗಳಲ್ಲಿ ಸಂಭವಿಸಬಹುದಾದ ವಿದ್ಯುತ್ ಅಪಘಾತಗಳನ್ನು ತಡೆಗಟ್ಟಲು ಬೆಸ್ಕಾಂ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಮಳೆಗೆ ಬೆಚ್ಚಿದ ಬೆಂಗಳೂರಿಗರಿಗೆ ಬೆಸ್ಕಾಂ ಸಹಾಯವಾಣಿಗಳು!

ಅಪಾರ್ಟ್ಮೆಂಟ್ ಗಳ ನೆಲಮಾಳಿಗೆಗಳಲ್ಲಿ ವಿದ್ಯುತ್ ಮೀಟರ್, ಟ್ರಾನ್ಸ್ ಫಾರ್ಮರ್ ಗಳಿದ್ದರೆ ಆರು ತಿಂಗಳೊಳಗೆ ಬೇರೆಡೆಗೆ ಸ್ಥಳಾಂತರಿಸಬೇಕು ಇಲ್ಲದಿದ್ದರೆ ಸಂಪರ್ಕವನ್ನು ಅಕ್ರಮ ಎಂದು ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ನೆಲಮಹಡಿಯಲ್ಲಿರುವ ವಿದ್ಯುತ್ ಮೀಟರ್ ಗಳ ಸ್ಥಳಾಂತರಕ್ಕೆ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರು ಕೂಡಾ ಕರೆ ನೀಡಿದ್ದಾರೆ. ನಗರದ ತಗ್ಗುಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ಅಪಾರ್ಟ್ಮೆಂಟ್ ಗಳಲ್ಲಿ ನೀರು ನುಗ್ಗುತ್ತಿದ್ದು, ಸುರಕ್ಷತೆ ದೃಷ್ಟಿಯಿಂದ ಬೇಸ್ ಮೆಂಟ್ ಗಳಲ್ಲಿ ಮೀಟರ್ ಅಳವಡಿಸುವಂತಿಲ್ಲ.

BESCOM asks Apartment to shift Electric installations out of basements

ನೆಲ ಮಾಳಿಗೆಯಲ್ಲಿ ವಿದ್ಯುತ್ ಮೀಟರ್, ಟ್ರಾನ್ಸ್ ಫಾರ್ಮರ್ ಹೊಂದಿರುವ ವಸತಿ ಸಮುಚ್ಚಯಗಳನ್ನು ಗುರುತಿಸಿ ನೋಟಿಸ್ ಜಾರಿಗೊಳಿಸಲಾಗುವುದು. ಎಲ್ಲೆಲ್ಲಿ ಟ್ರಾನ್ಸ್ ಫಾರ್ಮರ್ ಗಳನ್ನು ಅಳವಡಿಸಬಹುದು ಎಂಬುದರ ಬಗ್ಗೆ ನಿವಾಸಿಗಳಿಗೆ ಬೆಸ್ಕಾಂ ಅಧಿಕಾರಿಗಳು ನೆರವು ನೀಡಲಿದ್ದಾರೆ.

ಬೆಂಗಳೂರಿನ ಮಹಾಮಳೆಗೆ ಎಚ್ ಎಸ್ ಆರ್ ಲೇಔಟಿನ 6ನೇ ಸೆಕ್ಟರ್ ನ 50 ಕಟ್ಟಡಗಳು, ಕೋರಮಂಗಲ ನಾಲ್ಕನೇ ಬ್ಲಾಕಿನ 40 ಕಟ್ಟಡಗಳು ನೀರಿನಿಂದ ಆವರಿಸಿಕೊಂಡಿದ್ದವು, ಸುರಕ್ಷತಾ ದೃಷ್ಟಿಯಿಂದ ಪವರ್ ಕಟ್ ಮಾಡಿ, ನೀರನ್ನು ಸಂಪೂರ್ಣವಾಗಿ ಹೊರಕ್ಕೆ ಹಾಕಿದ ಬಳಿಕ ವಿದ್ಯುತ್ ಪೂರೈಕೆ ಎಂದಿನಂತೆ ನೀಡಲಾಯಿತು ಎಂದು ಸಚಿವ ಡಿಕೆ ಶಿವಕುಮಾರ್ ಅವರು ಹೇಳಿದರು.

ಹವಾಮಾನ ಇಲಾಖೆ ವರದಿಗಳ ಪ್ರಕಾರ ಬೆಂಗಳೂರಿನಲ್ಲಿ ಈ ವಾರಾಂತ್ಯ ಕೂಡಾ ಸಿಕ್ಕಾಪಟ್ಟೆ ಮಳೆಯಾಗಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Energy Minister DK Shivakumar said house owners will be requested to shift transformers to a floor above.The Bangalore Electricity Supply Company Limited (Bescom) has asked apartment complexes in Bengaluru to shift electric installations out of basements within six months.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ